ದಿನದ ಸುದ್ದಿ

ಮನೆಯಿಂದಲೇ ಮತದಾನ ಮಾಡಲು ಅವಕಾಶ

Published

on

ಸುದ್ದಿದಿನ ಡೆಸ್ಕ್ : ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನದ ದಿನ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ 80 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರಿಗೆ, ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ 9 ಸಾವಿರ ಜನರು ಮನೆಯಿಂದ ಮತದಾನ ಮಾಡಲು ಹೆಸರು ನೋಂದಾಯಿಸಿ ಕೊಂಡಿದ್ದಾರೆ. ಮೇ 6 ರವರೆಗೆ ಅವರಿಗೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.

ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಆಕಾಶವಾಣಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಹೆಚ್ಚಿನ ಸಂಖ್ಯೆಯ ಅರ್ಹ ಮತದಾರರು ಮನೆಯಿಂದಲೇ ಮತ ಚಲಾಯಿಸಲು ಆಯ್ಕೆ ಮಾಡಿದ್ದಾರೆ ಎಂದು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version