ರಾಜಕೀಯ
ಕಾಂಗ್ರೆಸ್ ಗೆ ಎಚ್.ಡಿ.ಕೆ ಅನಿವಾರ್ಯ : ಅಂಬರೀಶ್
ಸುದ್ದಿದಿನ, ಬೆಂಗಳೂರು: ಸಿಎಂ ಕುಮಾರಸ್ವಾಮಿ ವಿರುದ್ದ ಕಾಂಗ್ರೆಸ್ ಶಾಸಕರ ಅಸಮಧಾನ ವಿಚಾರವಾಗಿ ಮಂಡ್ಯದಲ್ಲಿ ರೆಬಲ್ ಸ್ಟಾರ್ ಅಂಬರೀಶ್ ಮಾತನಾಡುತ್ತಾ,’ಕಾಂಗ್ರೆಸ್‌ಗೆ ಕುಮಾರಸ್ವಾಮಿ ಅನಿವಾರ್ಯ ಕುಮಾರಸ್ವಾಮಿಗೆ ಕಾಂಗ್ರೆಸ್ ಅನಿವಾರ್ಯವಲ್ಲ” ಎಂದು ಹೇಳಿದರು.
ಸರ್ಕಾರ ಬೀಳಿಸಿದ್ರೆ ಮುಂದೇನಾಗುತ್ತೆ ಅನ್ನೋದನ್ನ ಕಾಂಗ್ರೆಸ್ ನಾಯಕರು ಯೋಚಿಸಬೇಕು. ಕುಮಾರಸ್ವಾಮಿ ಬಿಟ್ಟರೆ ಸರ್ಕಾರ ಉಳಿಯಲ್ಲ ಎಂದು ಕಾಂಗ್ರೆಸ್ ನಾಯಕರಿಗೆ ಎಚ್ಚರಿಸಿದರು ರೆಬಲ್ ಸ್ಟಾರ್.
ಅಭಿಮಾನಿ ರಫೀಕ್ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ ಬಳಿಕ ಮಾತನಾಡಿದ ಅಂಬಿ, ಮಾತಿಗೂ ಮುಂಚೆ ಭಾವುಕರಾದರು.ನನ್ನ ಕಂಡ್ರೆ ರಫೀಕ್ ಗೆ ಬಹಳ ಪ್ರೀತಿ. ನನ್ನ ಮಗ ರಫೀಕ್ ಕುಟುಂಬಸ್ಥರನ್ನ ಮಾತನಾಡಿಸಿಕೊಂಡು ಬರಬೇಕು ಎಂದಿದ್ದ.ನನ್ನ ಮಗನ ಮನಸ್ಸಿಗೂ ರಫೀಕ್ ತಾಕಿದ್ದಾನೆ. ಜನ ಸಂಪಾದಿಸೋದೆ ಜೀವನದ ಗುರಿ. ಮೊನ್ನೆ ನನಗೆ ಕರೆ ಮಾಡಿ ನನ್ನ ಸಿನೆಮಾ ಬಗ್ಗೆ ಭಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದ
ನಾನು ಅವ್ನಿಗೆ ಊಟ ಬಟ್ಟೆ ಕೊಟ್ಟಿಲ್ಲ ಆದರೆ ಆದ್ರೂ ನನ್ನ ಮೇಲೆ ಬಹಳ ಪ್ರೀತಿ.ರಫೀಕ್ ಸಾವಿನಿಂದ ನನಗೆ ಬಹಳ ಬೇಜಾರಾಗಿದೆ.
ನಾನು ಚುನಾವಣೆಗೆ ನಿಲ್ಲಲಿಲ್ಲ ಎಂದು ಬಹಳ ನೊಂದಿದ್ದ. ಅವನ ಕುಟುಂಬಕ್ಕೆ ಸಹಾಯ ಮಾಡ್ತೀನಿ.ಅದಕ್ಕೆ ಪ್ರಚಾರ ಬೇಡ. ಸರ್ಕಾರದಿಂದ ಸೌಲಭ್ಯ ಸಿಗುವ ಹಾಗೇ ಮಾಡ್ತೀನಿ ಎಂದರು.
ಅಂಬರೀಶ್ ನಿವೃತ್ತಿ ಬಳಿಕ ಮಂಡ್ಯ ಕಾಂಗ್ರೆಸ್ ನಾವಿಕನಿಲ್ಲದ ದೋಣಿ ವಿಚಾರವಾಗಿ, ಜವಹಾರ್‌ಲಾಲ್ ನೆಹರು ಸತ್ತಮೇಲೆ ಯಾರು ನಾಯಕರು ಹುಟ್ಟಿಕೊಳ್ಳಲಿಲ್ವ ಹಾಗೇ ಮಂಡ್ಯಕ್ಕೂ ನಾಯಕರು ಬರ್ತಾರೆ.ರಮ್ಯಾ ಸಮಾಜಿಕ ಜಾಲಾಯಾಣ ಮುಖ್ಯಸ್ಥೆ ಹುದ್ದೆಗೆ ರಾಜೀನಾಮೆ ವಿಚಾರವಾಗಿ ಮಾತನಾಡಿದ ಅವರು,ಅವ್ರು ಸೊಸಿಯಲ್ ಮಿಡಿಯಾ ದ ಮುಖ್ಯಸ್ಥೆಯಾಗಿದ್ದಾರೆ.ಅವ್ರ ಕೆಲಸವೇ ಎದುರಾಳಿ ಗಳಕಾಲೆಳೆದು ನಮ್ಮ ಪಕ್ಷವನ್ನ ಮೇಲೆತ್ತೋದು. ಅಭಿಷೇಕ್ ನಾನಿರುವವರೆಗೂ ರಾಜಕೀಯಕ್ಕೆ ಬರಲ್ಲ.ನನಗೆ ಪಕ್ಷದ ಬಗ್ಗೆ ಅಸಮಾಧಾನ ಇಲ್ಲ.ಮಂಡ್ಯಕ್ಕೆ ಸಾಕಷ್ಟು ಅಭಿವೃದ್ಧಿ ಕೆಲಸಮಾಡಿದ್ದೇನೆ.ನನಗೆ ಗೊತ್ತಿಗೆ ಏನು ಮಾಡಿದ್ದೇನೆ ಎಂದರು. ಜಿಲ್ಲೆಗೆ ಮಹಿಳಾ ಯುನಿವರ್ಸಿಟಿ, ಕೆರಗೋಡು ರಸ್ತೆ ಹೀಗೆ ಸಾಕಷ್ಟು ಕೆಲಸ ಮಾಡಿದ್ದೇನೆ.ಮಂಡ್ಯ ಅಮೃತ ಮಹೋತ್ಸವ, ರಾಜ್ ಕುಮಾರ್ ಕಾರ್ಯಕ್ರಮ, ಎಸ್.ಎಂ.ಕೃಷ್ಣ ಕಾರ್ಯಕ್ರಮ, ಮೆಡಿಕಲ್ ಕಾಲೇಜು ಆಸ್ಪತ್ರೆ, ಶಾಲಾ ಕಾಲೇಜು ಹೀಗೆ ಹಲವಾರು ಮಹತ್ವದ ಕಾರ್ಯ ಮಾಡಿದ್ದೇನೆ.
ಹೀಗಿರುವವರು ಇದರಲ್ಲಿ ನನ್ನಂತಹ ಒಂದು ಕಾರ್ಯಕ್ರಮ ಮಾಡಲಿ ನೋಡೋಣ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಶ್ವೇತಪತ್ರ ಹೊರಡಿಸಲು ಎಚ್.ಡಿ. ಕುಮಾರಸ್ವಾಮಿ ಆಗ್ರಹ

ಸುದ್ದಿದಿನ, ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಶ್ವೇತಪತ್ರ ಹೊರಡಿಸಬೇಕೆಂದು ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಯೋಜನೆಯ ಫಲ ಎಷ್ಟು ಜನರಿಗೆ ಲಭ್ಯವಾಗಿದೆ, ಆರ್ಥಿಕವಾಗಿ ಎಷ್ಟು ಹೊರೆಬಿದ್ದಿದೆ, ಇದುವರೆಗೆ ಫಲಾನುಭವಿಗಳ ಖಾತೆಗೆ ಎಷ್ಟು ಹಣ ಜಮೆಯಾಗಿದೆ ಎಂಬುದರ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಒತ್ತಾಯಿಸಿದ್ದಾರೆ.
ಸರ್ಕಾರದ ಗ್ಯಾರಂಟಿ ಯೋಜನೆಗಳು ವಿಫಲವಾಗಿದೆ, ಸಮರ್ಪಕವಾಗಿ ಜಾರಿಯಾಗುತ್ತಿಲ್ಲ, ಈ ಬಗ್ಗೆ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಪ್ರಸ್ತಾಪಿಸುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪಂಚಾಯತ್ ರಾಜ್ ಇಲಾಖೆ ಜತೆ ಕೆಲಸ ಮಾಡಲು ಬಂಧುತ್ವ ಫೌಂಡೇಷನ್ ಸಿದ್ಧ : ಅಧ್ಯಕ್ಷ ರಾಘು ದೊಡ್ಡಮನಿ

ಸುದ್ದಿದಿನ, ದಾವಣಗೆರೆ : ಮಕ್ಕಳ ವಿಷೇಶ ಗ್ರಾಮ ಸಭೆಯ ಮೂಲಕ ಜಿಲ್ಲೆಯ ಮಕ್ಕಳ ಶಿಕ್ಷಣ, ರಕ್ಷಣೆ ಹಾಗೂ ಅವರ ಹಕ್ಕು ಬಾಧ್ಯತೆಗಳಿಗಾಗಿ ಪಂಚಾಯತ್ ರಾಜ್ ಇಲಾಖೆಯ ಜತೆ ಕೆಲಸ ಮಾಡಲು ನಮ್ಮ ಬಂಧುತ್ವ ಫೌಂಡೇಷನ್ ಸಿದ್ಧವಿದೆ ಎಂದು ಫೌಂಡೇಶನ್ ನ ಅಧ್ಯಕ್ಷರಾದ ರಾಘು ದೊಡ್ಡಮನಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿ ವರ್ಷದಂತೆ ಈ ವರ್ಷವೂ ಸಹ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ಹಾಗೂ ಮಕ್ಕಳ ಗ್ರಾಮ ಸಭೆ ರೂಪಿಸಲು ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದ್ದು, ಇದೇ ತಿಂಗಳ 14 ರಿಂದ ಜನವರಿ 24 ರವರೆಗೆ 10 ವಾರಗಳ ಮಕ್ಕಳ ಸ್ನೇಹಿ ಅಭಿಯಾನ ಹಾಗೂ ಮಕ್ಕಳ ಗ್ರಾಮ ಸಭೆ ನಡೆಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೂ ಸೂಚನೆ ನೀಡಲಾಗಿದೆ.
ಈ ಅಭಿಯಾನವು ಗ್ರಾಮ ಪಂಚಾಯಿತಿಗಳನ್ನು ಮಕ್ಕಳ ಸ್ನೇಹಿಯಾಗಿಸಲು ಪಂಚಾಯತ್ ರಾಜ್ ಇಲಾಖೆ ಈ ಮೂಲಕ ದಾಪುಗಾಲಿಟ್ಟಿದೆ. ಸ್ಥಳೀಯ ಸಂಸ್ಥೆಗಳ ಮೂಲಕ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವ ಸರ್ಕಾರದ ಮಹಾತ್ವಕಾಂಕ್ಷೆಯ ಯೋಜನೆ ಇದಾಗಿದ್ದು, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಸಹಕಾರದೊಂದಿಗೆ ಗ್ರಾಮ ಪಂಚಾಯಿತಿಗಳು ತಮ್ಮ ಸದಸ್ಯರು ಹಾಗೂ ಸ್ಥಳೀಯ ಶಾಲೆಗಳು, ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ನಮ್ಮ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲೂ ಕಡ್ಡಾಯವಾಗಿ ಈ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ಹಾಗೂ ಮಕ್ಕಳ ವಿಷೇಶ ಗ್ರಾಮ ಸಭೆ ನಡೆಸಲು ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ ಎಂದಿದ್ದಾರೆ.
ಮಕ್ಕಳ ವಿಷೇಶ ಗ್ರಾಮ ಸಭೆಯು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಮಕ್ಕಳಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ಮಕ್ಕಳ ಆರೋಗ್ಯ, ರಕ್ಷಣೆ, ಅಂಗನವಾಡಿಗಳು, ಶಾಲೆ, ಶಾಲಾ ಆವರಣ, ಸ್ವಚ್ಛತೆ, ಬಡ ಮಕ್ಕಳಿಗೆ ನೆರವು ಮುಂತಾದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಬೇಕು. ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರುಗಳ ಜೊತೆ ಅಧಿಕಾರಿಗಳು ಸಭೆಯಲ್ಲಿ ಖುದ್ದು ಹಾಜರಿರಬೇಕು. ಮಕ್ಕಳ ಸಭೆ ಅಲ್ಲವೇ ಎಂದು ಯಾರು ಸಹ ನಿರ್ಲಕ್ಷ್ಯ ತೋರುವಂತಿಲ್ಲ. ಸಾಮಾನ್ಯ ಗ್ರಾಮ ಸಭೆಗಳಿಗಿರುವಷ್ಟು ಪ್ರಾಮುಖ್ಯತೆ ಈ ಮಕ್ಕಳ ಸಭೆಗೂ ಇರುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆ; ರಾಜಕೀಯ ಪಕ್ಷಗಳೊಂದಿಗೆ ಜಾಹಿರಾತು ದರ ನಿಗದಿ ಸಭೆ

ಸುದ್ದಿದಿನ,ದಾವಣಗೆರೆ : 2024 ರಲ್ಲಿ ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮುದ್ರಣ, ವಿದ್ಯುನ್ಮಾನ ಮಾಧ್ಯಮ, ಕೇಬಲ್ ಟಿ.ವಿ ಗಳಲ್ಲಿ ಪ್ರಚಾರ ಮಾಡಲು ನಿಗದಿ ಮಾಡಿರುವ ಜಾಹಿರಾತು ದರದ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ನವೆಂಬರ್ 10 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಯಿತು.
ಚುನಾವಣಾ ಸಂದರ್ಭದಲ್ಲಿ ಅಭ್ಯರ್ಥಿಗಳು ರಾಜ್ಯ ಮಟ್ಟದ ಪತ್ರಿಕೆಗಳು, ಸ್ಥಳೀಯ, ಪ್ರಾದೇಶಿಕ, ವಾರಪತ್ರಿಕೆ, ಕೇಬಲ್ ಟಿ.ವಿ.ಗಳಲ್ಲಿ ನೀಡುವ ಚುನಾವಣಾ ಜಾಹಿರಾತುಗಳಿಗೆ ಅನ್ವಯಿಸುವ ದರದ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರಿಗೆ ತಿಳಿಸಲಾಯಿತು.
ಚುನಾವಣಾ ಸಂದರ್ಭದಲ್ಲಿ ಎಂಸಿಎಂಸಿ ಸಮಿತಿಯು ಕಾರ್ಯನಿರ್ವಹಿಸಲಿದ್ದು ಇದರ ಎಲ್ಲಾ ಮೇಲ್ವಿಚಾರಣೆ ನಡೆಸಲಿದೆ. ಅಭ್ಯರ್ಥಿಗಳು ನೀಡುವ ಜಾಹಿರಾತು ವೆಚ್ಚವು ಸಹ ಅಭ್ಯರ್ಥಿಗಳಿಗೆ ವೆಚ್ಚಕ್ಕೆ ನಿಗದಿಪಡಿಸಿರುವ ಮೊತ್ತದಲ್ಲಿ ಸೇರಲಿದೆ ಎಂದು ಪಕ್ಷಗಳ ಮುಖಂಡರಿಗೆ ಮನವರಿಕೆ ಮಾಡಿದರು.
ಸಭೆಯಲ್ಲಿ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಜಿ.ಸಿ.ರಾಘವೇಂದ್ರ ಪ್ರಸಾದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಧನಂಜಯ, ಚುನಾವಣಾ ತಹಶೀಲ್ದಾರ್ ಅರುಣ್ ಎಸ್.ಕಾರ್ಗಿ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
