ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243