Connect with us

ದಿನದ ಸುದ್ದಿ

ಪಿ.ವಿ.ಪಿ. ಪಾಲಿಟೆಕ್ನಿಕ್ : ಡಾ. ಅಂಬೇಡ್ಕರ್ ತಾಂತ್ರಿಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಸಂಭ್ರಮ

Published

on

ಸುದ್ದಿದಿನ,ಬೆಂಗಳೂರು: ಇಂದು ಸಂಜೆ ನಡೆದ ಬೆಂಗಳೂರು ನಗರದ ಮಲ್ಲತ್ತಹಳ್ಳಿಯಲ್ಲಿ ಪಿ.ವಿ.ಪಿ. ಪಾಲಿಟೆಕ್ನಿಕ್ : ಡಾ. ಅಂಬೇಡ್ಕರ್ ತಾಂತ್ರಿಕ ಶಿಕ್ಷಣ ಮಹಾವಿದ್ಯಾಲಯ ವತಿಯಿಂದ ಆಯೋಜಿಸಿದ 67ನೇ ಕರ್ನಾಟಕ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆಯ ನಿಮಿತ್ತವಾಗಿ ಅಪ್ಪು ಸ್ಮರಣೆ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮವನ್ನು ಎಚ್.ಆರ್.ಭದ್ರಪ್ಪ ನವರು ನಾಡಗೀತೆಯನ್ನು ಹಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಡಾ. ಗುರುಸ್ವಾಮಿ ರವರು ಹಾಗೂ ಸಿ.ಎಸ್. ಇ. ಸಿ. ವಿಭಾಗದ ಮಕ್ಕಳಿಂದ ಹಚೇವು ಕನ್ನಡದ ದೀಪ ಹಾಡು ಹಾಡಿದರು.

ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಸತ್ಯನಾರಾಯಣ ದೀಕ್ಷಿತ್ ರವರು ಕಾರ್ಯಕ್ರಮದಲ್ಲಿ ಮಾತನಾಡಿ ಶುಭ ಹಾರೈಸಿದರು. ಮತ್ತು ಕಾರ್ಯಕ್ರಮದಲ್ಲಿ ಪಿ.ಎಸ್.ಚಂದ್ರಶೇಖರ್ ರವರು ವಿಶೇಷ ಭಾಷಣ ಮಾಡಿದರು.

ನಂತರದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಎಸ್.ಡಿ. ನಾಗೇಂದ್ರ ರವರು ನಾಡು, ನುಡಿ, ನೆಲ, ಜಲ, ಸಂಸ್ಕೃತಿಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಹೇಳಿದರು.

ಅಪ್ಪು ಅಮರ ಮತ್ತು ಎಂಟು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರಕ್ಕೆ ಗೌರವ

ಕಾರ್ಯಕ್ರಮದಲ್ಲಿ ನಗುವಿನ ಅರಸ ಕರ್ನಾಟಕ ರತ್ನ ಡಾ. ಪುನಿತ್ ರಾಜ್ ಕುಮಾರ್ ರವರ ಅಪ್ಪು ಅಮರ ಎಂಬ ಶೀರ್ಷಿಕೆಯಲ್ಲಿ ಅಪ್ಪುಗೆ ಗೌರವ ಸೂಚಿಸಿ ‘ಗೊಂಬೆ ಹೇಳುತೈತೆ’ ಎಂಬ ಹಾಡಿಗೆ ಐ.ಎಸ್.ಟಿ ವಿಭಾಗದ ವಿದ್ಯಾರ್ಥಿಗಳು ಅಪ್ಪು ಭಾವಚಿತ್ರ ಹಾಗೂ ಕನ್ನಡ ಸಾಹಿತ್ಯದ ಎಂಟು ಜನ ಜ್ಞಾನಪೀಠ ಪುರಸ್ಕೃತರ ಭಾವಚಿತ್ರವನ್ನು ಹಿಡಿದು ನೃತ್ಯ ಪ್ರದರ್ಶನ ನೀಡಿದರು.

ಈ ಸಂದರ್ಭದಲ್ಲಿ ನೆರೆದಿರುವ ಸಾವಿರಾರು ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರ ಕಣ್ಣಂಚಲಿ ನೀರು ಜಿನುಗಿದವು. ಒಂದು ಕ್ಷಣ ಎಲ್ಲರೂ ಭಾವುಕರಾಗಿ ಮೌನಕ್ಕೆ ಶರಣಾದರು. ಅದೊಂದು ಅದ್ಭುತ ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಯಿತು.

ಇದೇ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಸ್.ಡಿ. ನಾಗೇಂದ್ರರವರು, ಸತ್ಯನಾರಾಯಣ ದೀಕ್ಷಿತ್, ಎಂ. ಎಸ್.ಪ್ರಕಾಶ್, ಎಂ.ಎಸ್. ಸವಿತಾ, ಎಲ್ಲಾ ಒಂಬತ್ತು ವಿಭಾಗದ ಮುಖ್ಯಸ್ಥರು, ಪಿ.ವಿ.ಪಿ. ಕಾಲೇಜಿನ ನೌಕರರ ಸಂಘದ ಅಧ್ಯಕ್ಷರಾದ ವಿ.ಸಿ. ನಾರಾಯಣಸ್ವಾಮಿ, ಕಾರ್ಯದರ್ಶಿ ಹೇಮಂತ್ ಕುಮಾರ್, ಈ ಕಾರ್ಯಕ್ರಮದ ಆಯೋಜಕರಾದ ಶಿವಾನಂದ ಎಚ್.ಎಂ. ಹಾಗೂ ಎಲ್ಲಾ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇಲ್ಲಿಯ ಜಂಟಿ ನಿರ್ದೇಶಕರಾದ ಶ್ರೀ ಕೇಶವ ಹೆಚ್. ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ 2022ನೇ ಸಾಲಿನಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ಅರ್ಥಶಾಸ್ತç (ಎಸ್.ಟಿ), ರಾಜ್ಯಶಾಸ್ತç (ಎಸ್.ಸಿ), ಗ್ರಂಥಪಾಲಕರು (ಎಸ್.ಟಿ) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇಲ್ಲಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾದ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರಿಗೆ ದಿನಾಂಕ: 24-11-2025 ರಂದು ಅರ್ಜಿ ಸಲ್ಲಿಸಿ, ಬ್ಯಾಕ್ ಲಾಗ್ ನೇಮಕಾತಿಯ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಲಾಗಿತ್ತು.

ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ಯಾವುದೇ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ಜ್ಞಾಪನ ನೀಡಿ 7 ದಿನಗಳ ಒಳಗಾಗಿ ತನಿಖಾ ವರದಿಯನ್ನು ನೀಡುವಂತೆ ವಿನಂತಿಸಲಾಗಿತ್ತು. ಆದರೆ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರು ಅರ್ಜಿ ಸಲ್ಲಿಸಿ 2 ತಿಂಗಳಾದರೂ ಕನಿಷ್ಠ ಹಿಂಬರಹವನ್ನಾದರೂ ನೀಡದೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

Trending