ದಿನದ ಸುದ್ದಿ
ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ
- ವೆನ್ನೆಲಾ ಕೆ.
ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು
ಇತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.
ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.
ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.
ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.
ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.
ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.
ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.
ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ತರಳಬಾಳು ಹುಣ್ಣಿಮೆ ಮಹೋತ್ಸವದ ಅಂಗವಾಗಿ ಬೈಕ್ ರ್ಯಾಲಿ
- ವರದಿ : ಸಿ ಜಗದೀಶ್ ಕೂಲಂಬಿ
ಸುದ್ದಿದಿನ,ದಾವಣಗೆರೆ:ಚಿತ್ರದುರ್ಗ ತಾಲೂಕಿನ ಭರಮಸಾಗರದಲ್ಲಿ ಇದೆ ಫೆಬ್ರವರಿ 04 ರಿಂದ 12 ರವರೆಗೆ ನಡೆಯಲಿರುವ 76 ನೇ ತರಳಬಾಳು ಹುಣ್ಣಿಮೆ ಮಹೋತ್ಸವದ ಅಂಗವಾಗಿ ಸಿರಿಗೆರೆಯ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದಿಂದ ಭರಮಸಾಗರದವರೆಗೆ ಬೃಹತ್ ಬೈಕ್ ರ್ಯಾಲಿಯ ಮೂಲಕ ಶ್ರೀ ಮದುಜ್ಜಯಿನಿ ಸದ್ಧರ್ಮ ಸಿಂಹಾಸನಾದೀಶ ಶ್ರೀ ತರಳಬಾಳು ಜಗದ್ಗುರು 1108 ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರನ್ನು ಕರೆತರಲಾಗುವುದು.
ಇಂದು ಭರಮಸಾಗರದ ನಿರಂಜನ ಮೂರ್ತಿ ಕಲ್ಯಾಣ ಮಂಟಪದಲ್ಲಿ ನಡೆದ ಶ್ರೀ ತರಳಬಾಳು ಶಿವಸೈನ್ಯ ರಾಜ್ಯ ಘಟಕದ ಪದಾಧಿಕಾರಿಗಳ ಸಭೆಯಲ್ಲಿ 76ನೇ ತರಳಬಾಳು ಹುಣ್ಣಿಮೆ ಮಹೋತ್ಸವದ ಅಂಗವಾಗಿ ಬೈಕ್ ರ್ಯಾಲಿಯನ್ನು ಶ್ರೀ ತರಳಬಾಳು ಶಿವಸೈನ್ಯ ರಾಜ್ಯ ಘಟಕದ ನೇತೃತ್ವದಲ್ಲಿ ಹಮ್ಮಿಕೊಂಡು ಆ ಮೂಲಕ ಹುಣ್ಣಿಮೆಗೆ ಶುಭ ಕೋರಬೇಕೆಂದು ತೀರ್ಮಾನಿಸಲಾಯಿತು.
ಬೈಕ್ ರ್ಯಾಲಿಯು ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ ಸಿರಿಗೆರೆಯಿಂದ ಫೆ 4 ರ ಬೆಳಗ್ಗೆ 10 ಗಂಟೆಗೆ ಪ್ರಾರಂಭಗೊಂಡು ಭರಮಸಾಗರ ಹೋಬಳಿಯ ಸುಮಾರು 30 ಹಳ್ಳಿಗಳ ಮೂಲಕ ಸಾಗಿ ಸುಮಾರು 5000 ಬೈಕ್ ರ್ಯಾಲಿಯ ಮೂಲಕ ಸಂಜೆ ನಾಲ್ಕು ಗಂಟೆಗೆ ಭರಮಸಾಗರದಲ್ಲಿ ನಡೆಯಲಿರುವ ಶ್ರೀ ತರಳಬಾಳು ಹುಣ್ಣಿಮೆ ಮಹೋತ್ಸವದ ಮಹಾ ಮಂಟಪಕ್ಕೆ ತಲುಪುವುದು.
ಭರಮಸಾಗರ ಹೋಬಳಿಯ ಭಕ್ತರ ಆಶಯದಂತೆ ಅಂದು ಸಂಜೆ ನಾಲ್ಕು ಗಂಟೆಗೆ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರ ತೆಪ್ಪೋತ್ಸವ ಕಾರ್ಯಕ್ರಮವನ್ನು ಭರಮಸಾಗರದ ಕೆರೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಹಾಗೂ ಸರ್ವ ಸಮಾಜದ ಬಾಂಧವರು ಭಾಗವಹಿಸಿ ಬೈಕ್ ರ್ಯಾಲಿಯನ್ನು ಹಾಗೂ 76ನೇ ತರಳಬಾಳು ಹುಣ್ಣಿಮೆ ಮಹೋತ್ಸವವನ್ನು ಯಶಸ್ವಿಗೊಳಿಸಬೇಕೆಂದು ಶ್ರೀ ತರಳಬಾಳು ಶಿವಸೈನ್ಯ ರಾಜ್ಯ ಘಟಕ ದಾವಣಗೆರೆ ಇವರು ಪತ್ರಿಕಾ ಪ್ರಕಟಣೆಯ ಮೂಲಕ ಕೋರಿಕೊಂಡಿದ್ದಾರೆ.
ಸಭೆಯಲ್ಲಿ ಶಶಿಧರ ಹೆಮ್ಮನ ಬೇತೂರು, ಮೋಹನ್ ಸಿರಿಗೆರೆ, ಕುಮಾರ್ ಮೆಳ್ಳೆ ಕಟ್ಟೆ, ಬಸವರಾಜ್ ಸಿರಿಗೆರೆ, ಶೈಲೇಶ್ ಚೌಲಹಳ್ಳಿ, ಶ್ರೀನಿವಾಸ್ ರಾಮಘಟ್ಟ, ಸಿದ್ದೇಶ್ ನಂದಿ ಕಂಬ, ರಾಕೇಶ್ ಸಾತಿ, ಲಿಂಗರಾಜ್ ನಾಗನೂರು, ಅಶೋಕ್ ಹೊನ್ನ ನಾಯಕನಹಳ್ಳಿ, ಮಲ್ಲಿಕಾರ್ಜುನ್ ಮೆಳ್ಳೆಕಟ್ಟೆ, ಸಂತೋಷ್ ಗಂಗನಕಟ್ಟೆ, ಮತ್ತಿತರ ಪದಾಧಿಕಾರಿಗಳು ಹಾಗೂ ಗಣ್ಯರು ಹಾಜರಿದ್ದರು.
ವಿಶೇಷ ಸೂಚನೆ : ಫೆಬ್ರವರಿ 4 ರಿಂದ 12 ರವರೆಗೆ ನಡೆಯುವ ತರಳಬಾಳು ಹುಣ್ಣಿಮೆಗೆ ದಾವಣಗೆರೆಯಿಂದ ಭರಮಸಾಗರಕ್ಕೆ ತೆರಳುವ ಭಕ್ತಾದಿಗಳಿಗೆ ಹೆಬ್ಬಾಳು ಟೋಲ್ ನಲ್ಲಿ ಉಚಿತ ಪ್ರವೇಶ ಕಲ್ಪಿಸಲಾಗಿರುತ್ತದೆ. ಭಕ್ತರು ತಮ್ಮ ವಾಹನಗಳಿಗೆ ಶಿವ ಧ್ವಜ ಕಟ್ಟಿಕೊಂಡವರಿಗೆ ಉಚಿತ ಪ್ರವೇಶವಿರುತ್ತದೆ.
ದಾವಣಗೆರೆ ಜಿಲ್ಲಾ ಪತ್ರಿಕಾ ಹಾಗೂ ಮಾಧ್ಯಮದ ಎಲ್ಲಾ ವರದಿಗಾರ ಮಿತ್ರರು ಈ ಮೇಲಿನ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕಾರ್ಯಕ್ರಮದ ಸುದ್ದಿಯನ್ನು ಮಾಡುವುದರ ಮೂಲಕ ನಾಡಿನಾದ್ಯಂತ ಜನರಿಗೆ ತಲುಪಿಸಬೇಕೆಂದು ಕೋರಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಮಾಯಕೊಂಡ ಕ್ಷೇತ್ರಕ್ಕೆ 750 ಮನೆ ಮಂಜೂರು ; ಪಾರದರ್ಶಕವಾಗಿ ಮನೆ ಹಂಚಿಕೆ ಮಾಡಲು ಗ್ರಾಪಂ ಅಧಿಕಾರಿಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ತಾಕೀತು
ಸುದ್ದಿದಿನ,ದಾವಣಗೆರೆ: ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ದಾವಣಗೆರೆ ತಾಲೂಕಿಗೆ 506, ಚನ್ನಗಿರಿ ತಾಲೂಕಿಗೆ 244 ಸೇರಿ ಕ್ಷೇತ್ರಕ್ಕೆ ಒಟ್ಟು 750 ಮನೆಗಳು ಮಂಜೂರಾಗಿವೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ತಿಳಿಸಿದ್ದಾರೆ.
ನಿರ್ಗತಿಕರು, ಬಡವರಿಗೆ ಸೂರು ಕಲ್ಪಿಸಲು ಸರ್ಕಾರ ಮತ್ತು ವಸತಿ ಸಚಿವರ ಮೇಲೆ ಒತ್ತಡ ಹಾಕಿ ಮನೆಗಳನ್ನು ಮಂಜೂರು ಮಾಡಿಸಲಾಗಿದೆ. ಕ್ಷೇತ್ರದ ವ್ಯಾಪ್ತಿಯ ದಾವಣಗೆರೆ ತಾಲೂಕಿನ ವ್ಯಾಪ್ತಿಗೆ ಬರುವ ಗ್ರಾಮ ಪಂಚಾಯಿತಿಗಳಿಗೆ 2022-23ನೇ ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ನಿವಾಸ್ ಮತ್ತು ಬಸವ ವಸತಿ ಯೋಜನೆಯಡಿ 506, ಚನ್ನಗಿರಿ ತಾಲೂಕಿನ ವ್ಯಾಪ್ತಿಗೆ ಬರುವ ಗ್ರಾಮ ಪಂಚಾಯಿತಿಗಳಿಗೆ 244 ಸೇರಿದಂತೆ ಒಟ್ಟು 750 ಮನೆಗಳನ್ನು ಮಂಜೂರು ಮಾಡಿಸಲಾಗಿದೆ.
ದಾವಣಗೆರೆ ತಾಲೂಕಿನ ಗ್ರಾಪಂಗಳಾದ ಆಲೂರು 12, ಆನಗೋಡು 31, ಅಣಜಿ 23, ಅಣಬೇರು 30, ಅತ್ತಿಗೆರೆ 18, ಬಾಡ 25, ಬಸವನಾಳು 24, ಗೋಪನಾಳು 21, ಹೆಮ್ಮನಬೇತೂರು 25, ಹೊನ್ನೂರು 20, ಹುಚ್ಚವ್ವನಹಳ್ಳಿ 23, ಐಗೂರು 5, ಕಂದಗಲ್ಲು 10, ಕಂದನಕೋವಿ 10, ಕೊಡಗನೂರು 19, ಕುರ್ಕಿ 20, ಮಳಲಕೆರೆ 20, ಮತ್ತಿ 15, ಮಾಯಕೊಂಡ 33, ನರಗನಹಳ್ಳಿ 22, ಶ್ಯಾಗಲೆ 21, ತೋಳಹುಣಿಸೆ 14, ನೇರ್ಲಿಗೆ 18, ಲೋಕಿಕೆರೆ 22, ಶ್ರೀರಾಮನಗರ 5 ಸೇರಿ ಒಟ್ಟು 506 ಮನೆ ಹಂಚಿಕೆ ಮಾಡಲಾಗಿದೆ.
ಚನ್ನಗಿರಿ ತಾಲೂಕಿನ ಗ್ರಾಪಂಗಳಾದ ಬಸವಾಪಟ್ಟಣ 34, ಬೆಳಲಗೆರೆ 18, ಚಿರಡೋಣಿ 30, ದಾಗಿನಕಟ್ಟೆ 17, ಜಿ.ಕೆ.ಹಳ್ಳಿ 8, ಕಬ್ಬಳ 5, ಕಂಸಾಗರ 14, ಕಣಿವೆಬಿಳಚಿ 2, ಕಾರಿಗನೂರು 10, ಕತ್ತಲಗೆರೆ 12, ಕೋಟೆಹಾಳ್ 11, ನಿಲೋಗಲ್ಲು 14, ತ್ಯಾವಣಿಗೆ 26, ರುದ್ರಾಪುರ 3, ನವಿಲೇಹಾಳು 16, ನಲ್ಕುದುರೆ 24 ಸೇರಿ ಒಟ್ಟು 244 ಮನೆ ಹಂಚಿಕೆ ಮಾಡಲಾಗಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಮಾಹಿತಿ ನೀಡಿದ್ದಾರೆ.
ಸರ್ಕಾರ ನಿರ್ಗತಿಕರಿಗೆ, ಬಡವರಿಗೆ ಮನೆ ನೀಡಿದೆ. ಆದರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಸದಸ್ಯರು ಯಾವುದೇ ಕಾರಣಕ್ಕೂ ಫಲಾನುಭವಿಗಳ ಬಳಿ ಮನೆ ನೀಡುವುದಕ್ಕೆ ಹಣ ವಸೂಲಿ ಮಾಡಬಾರದು. ಒಂದು ವೇಳೆ ಹಣ ವಸೂಲಿ ಮಾಡಿದರೆ ಫಲಾನುಭವಿಗಳು ನೇರವಾಗಿ ಶಾಸಕರನ್ನು ಸಂಪರ್ಕಿಸಬೇಕೆಂದು ಮನವಿ ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚನ್ನಗಿರಿ ಕ್ಷೇತ್ರದ ನೀರಾವರಿ ಅಭಿವೃದ್ಧಿಗೆ ನೆರವು ಕೋರಿದ ಶಾಸಕ ಬಸವರಾಜು ವಿ ಶಿವಗಂಗಾ
ಸುದ್ದಿದಿನ,ಬೆಂಗಳೂರು:ಉಬ್ರಾಣಿ ಹಾಗೂ ಅಮೃತಾಪುರ ಏತನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಕರ್ನಾಟಕ ನೀರಾವರಿ ನಿಗಮ ಕೇಂದ್ರ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಚನ್ನಗಿರಿ ಕ್ಷೇತ್ರದ ನೀರಾವರಿ ಅಭಿವೃದ್ಧಿಗೆ ಹೆಚ್ಚು ಅನುದಾನ ನೀಡುವಂತೆ ಶಾಸಕರಾದ ಬಸವರಾಜು ವಿ ಶಿವಗಂಗಾ ಒತ್ತಾಯಿಸಿದರು.
ತುಂಗಾ ಮೇಲ್ದಂಡೆ ವಲಯ ಯೋಜನೆಗಳ ಕಾಮಗಾರಿಗಳ ಪರಿಶೀಲನಾ ಸಭೆಯಲ್ಲಿ ಶಾಸಕರು ಪ್ರಸ್ತಾಪಿಸಿ ರೈತರ ಹಿತ ಕುರಿತು ಮಾನವರಿಕೆ ಮಾಡಿದರು.
ತುಂಗಾ ಮೇಲ್ದಂಡೆ ಯೋಜನೆ ವಲಯ ವ್ಯಾಪ್ತಿ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಜಲಸಂಪನ್ಮೂಲ ಇಲಾಖೆಯಿಂದ ಪ್ರಗತಿಯಲ್ಲಿರುವ ಕಾಮಗಾರಿಗಳು, ಕೈಗೊಳ್ಳಬೇಕಾರುವ ಯೋಜನೆಗಳನ್ನು ತ್ವರಿತವಾಗಿ ಪರಿಹರಿಸುವಂತೆ ಒತ್ತಾಯಿಸಿದರು.
ಉಬ್ರಾಣಿ, ಅಮೃತಾಪುರ ಏತನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಅಭಿವೃದ್ಧಿ ಕುರಿತು ಸಚಿವರು ಹಾಗೂ ಉಪ ಮುಖ್ಯಮಂತ್ರಿಗಳಿಗೆ ತಿಳಿಸಿದರು.
ರೈತರ ಬಗ್ಗೆ ವಿಶೇಷ ಕಾಳಜಿ ತೋರಿದ ಶಾಸಕರಾದ ಬಸವರಾಜು ವಿ. ಶಿವಗಂಗಾ ಅವರಿಗೆ ಉತ್ತಮ ಸೇವೆ ಮಾಡುತ್ತಿರುವೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.
ಚನ್ನಗಿರಿ ತಾಲ್ಲೂಕಿಗೆ ಜಲಸಂಪನ್ಮೂಲ ಇಲಾಖೆಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ, ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ ಜಿಲ್ಲೆಯ ಮಾನ್ಯ ಶಾಸಕರುಗಳು, ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು, ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ5 days ago
ಸಂಸದರ ಜಿಲ್ಲಾ ಅಭಿವೃದ್ದಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ | ಶಾಲಾ ಆವರಣಗಳು ಅನೈತಿಕ ತಾಣಗಳಾಗಬಾರದು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
-
ದಿನದ ಸುದ್ದಿ5 days ago
ರಾಜನಹಳ್ಳಿಯಲ್ಲಿ ಫೆಬ್ರವರಿ 8 ಮತ್ತು 9ರಂದು ವಾಲ್ಮೀಕಿ ಜಾತ್ರೆ, ಎಲ್ಲಾ ಸಿದ್ದತೆಯನ್ನು ಅಚ್ಚುಕಟ್ಟಾಗಿ ಆಯೋಜಿಸಲು ಅಧಿಕಾರಿಗಳಿಗೆ ಡಿಸಿ ಸೂಚನೆ
-
ದಿನದ ಸುದ್ದಿ5 days ago
ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್: ಆನ್ಲೈನ್ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಅಭಿವೃದ್ಧಿಯೇ ನನ್ನ ಗುರಿ, ಮಾದರಿ ಕ್ಷೇತ್ರವನ್ನಾಗಿ ಮಾಡುವೆ: ಶಾಸಕ ಬಸವರಾಜು ವಿ ಶಿವಗಂಗಾ
-
ದಿನದ ಸುದ್ದಿ3 days ago
ಪರ್ಯಾಯ ಸಂವಿಧಾನ ರಚನೆ ವಿರೋಧಿಸಿ ಪ್ರತಿಭಟನೆ ; ಡಿಸಿಗೆ ಮನವಿ
-
ದಿನದ ಸುದ್ದಿ5 days ago
ಬಂಜಾರ ಕಲಾವಿದರಿಂದ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಪೊಲೀಸ್ ಇಲಾಖೆಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ : ಎಸ್ಪಿ ಉಮಾ ಪ್ರಶಾಂತ್
-
ದಿನದ ಸುದ್ದಿ3 days ago
ಶಿವಣ್ಣ ಜಿ. ಬಿ ಅವರಿಗೆ ಪಿಎಚ್ ಡಿ ಪದವಿ