ದಿನದ ಸುದ್ದಿ

ಅಂಬೇಡ್ಕರ್ ಫ್ಲೆಕ್ಸ್ ಹರಿದ ಕಿಡಿಗೇಡಿಗಳ ವಿರುದ್ಧ ಪ್ರತಿಭಟನೆ

Published

on

ಸುದ್ದಿದಿನ,ಟಿ.ನರಸೀಪುರ:ತಾಲ್ಲೂಕಿನ ನಾಗಲಗೆರೆ ಗ್ರಾಮದಲ್ಲಿ ಅಂಬೇಡ್ಕರ್ ಪ್ಲೆಕ್ಸ್ ಹರಿದ ಕಿಡಿಗೇಡಿಗಳ ವಿರುದ್ಧ ಪ್ರತಿಭಟನೆ ನಡೆಸಲಾಯಿತು.

ತಾಲ್ಲೂಕಿನ ವಿವಿಧ ಭಾಗಗಳಿಂದ ಮುಖಂಡರುಗಳು ಆಗಮಿಸಿ ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತಿದ್ದು ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ ಬೇಟಿಮಾಡಿದರು. ದಲಿತ ಮುಖಂಡರುಗಳಿಂದ ಅಸ್ಪೃಶ್ಯ ಕಾಯ್ದೆ ಅಡಿ ಕಿಡಿಗೇಡಿಗಳನ್ನು ಬಂಧಿಸುವಂತೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯ ಮಾಡಿದರು.

ಮಹಾನಾಯಕ ಧಾರಾವಾಹಿ ಕರ್ನಾಟಕ ಸೇರಿದಂತೆ ದೇಶದೆಲ್ಲೆಡೆ ಸಂಚಲನವನ್ನುಂಟು ಮಾಡಿದ್ದು ಸಂವಿಧಾನ ಶಿಲ್ಪಿಗೆ ಅವಮಾನ ಮಾಡುವುದು ಹೇಯ ಕೃತ್ಯವೆಂದು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version