Connect with us

ದಿನದ ಸುದ್ದಿ

ಅಂಬೇಡ್ಕರ್ ಚಿಂತನೆಗಳು ಮತ್ತು ಸಮಾಜವಾದ

Published

on

  • ಮ ಶ್ರೀ ಮುರಳಿ ಕೃಷ್ಣ, ಬೆಂಗಳೂರು

ಅಂಬೇಡ್ಕರ್, ಮಾರ್ಕ್ಸ್‌ವಾದ ಹಾಗೂ ಮಾರ್ಕ್ಸ್‌ವಾದಿಗಳ ಬಗೆಗೆ ಭಿನ್ನಾಭಿಪ್ರಾಯಗಳನ್ನು ಹೊಂದಿದ್ದರು ಎಂಬುದು ದಿಟ. ಅವರು ತಮ್ಮ ‘ಬುದ್ಧ ಅಥವಾ ಮಾರ್ಕ್ಸ್’ ಕೃತಿಯಲ್ಲಿ ಮೇಲೆ ಪುಸ್ತಾಪಿಸಿರುವ ಭಿನ್ನಾಭಿಪ್ರಾಯಗಳ ಬಗೆಗೆ ವಿಶದವಾಗಿ ಚರ್ಚಿಸಿದ್ದಾರೆ. ಸಂಘಟನಾತ್ಮಕವಾಗಿಯೂ ಅವರಿಗೆ ಭಾರತ ಕಮ್ಯುನಿಸ್ಟ್ ಪಕ್ಷ ಕುರಿತು ಭಿನ್ನಮತವಿತ್ತು. ಇದರ ಹಿನ್ನೆಲೆಯಲ್ಲೇ, ಅವರು 1936ರಲ್ಲಿ ಕಾರ್ಮಿಕ ಪಕ್ಷವನ್ನು ಸ್ಥಾಪಿಸಿದರು. ಆದರೆ ಈ ಎರಡೂ ಪಕ್ಷಗಳ ಗುರಿ ಒಂದೇ ಆಗಿತ್ತು.

ಅದೇ ಭಾರತದಲ್ಲಿ ಸಮಾಜವಾದಿ ವ್ಯವಸ್ಥೆಯ ಸ್ಥಾಪನೆ. ಅವರು 1938ರ ಮೇ 15ರಂದು ಮಹಾರಾಷ್ಟ್ರದ ದೇವರಖ ಎಂಬ ಸ್ಥಳದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡುತ್ತ, ” ನಮ್ಮ ದೇಶದಲ್ಲಿ ರೈತರು ಮತ್ತು ಕಾರ್ಮಿಕರೇ ಬಹುಸಂಖ್ಯಾತರು. ಈ ವರ್ಗದವರೇ ಆಡಳಿತ ವರ್ಗವಾಗಿ ಹೊರಹೊಮ್ಮಬೇಕು….” ಹೀಗಾಗಿ ಈ ಎರಡೂ ಪಕ್ಷಗಳ ನಡುವೆ ತಾತ್ವಿಕ ಭಿನ್ನಾಭಿಪ್ರಾಯಗಳು ಇರಲಿಲ್ಲ. ಆದರೆ ಮಾರ್ಗ ಮತ್ತು ಕಾರ್ಯತಂತ್ರಗಳ ವಿಷಯಗಳಲ್ಲಿ ಭಿನ್ನಾಭಿಪ್ರಾಯಗಳಿದ್ದವು.

ಅವರು ತಮ್ಮ ಅನೇಕ ಬರಹಗಳಲ್ಲಿ ಸ್ವಾತಂತ್ರ್ಯ ಮತ್ತು ಸಮಾನತೆ ಎರಡೂ ಸಾಂವಿಧಾನಿಕವಾಗಿ ನಮ್ಮ ಮೂಲಭೂತ ಹಕ್ಕಾಗಬೇಕು ಎಂಬ ವಿಷಯವನ್ನು ಮಂಡಿಸುತ್ತ ಇದಕ್ಕೆ ಸಂಬಂಧಿಸಿದ ಅನೇಕ ವಿಚಾರಗಳ ಬಗೆಗೆ ಬೆಳಕನ್ನು ಚೆಲ್ಲಿದ್ದಾರೆ. ಭೂ ಸುಧಾರಣೆ ಕುರಿತು ಸಂಸತ್ತಿನಲ್ಲಿ ಮಾತನಾಡುತ್ತ ನಮ್ಮ ದೇಶದಲ್ಲಿ ಸಮಾನತೆಯು ನೆಲಸಬೇಕಾದರೇ ರಷ್ಯಾದಲ್ಲಿ ಜರುಗಿದಂತೆ ಭೂಮಿಯ ರಾಷ್ಟ್ರೀಕರಣವಾಗಬೇಕು ಎಂದು ಬಲವಾಗಿ ತಮ್ಮ ವಾದವನ್ನು ಮುಂದಿಟ್ಟಿದ್ದರು.

ಅಂಬೇಡ್ಕರ್ ಅವರು ಒಮ್ಮೆ ಫ್ರೆಂಚ್ ಮತ್ತು ರಷ್ಯಾದಲ್ಲಿ ಜರುಗಿದ ಸಮಾಜವಾದಿ ಕ್ರಾಂತಿಗಳನ್ನು ಒಂದು ಸಿಹಿಖಾದ್ಯದ ಉದಾಹರಣೆಯ ಮೂಲಕ ವಿವರಿಸಿದ್ದರು. ” ಫ್ರೆಂಚ್ ಕ್ರಾಂತಿ ಹೋಳಿಗೆಯ ಹೊರಗಡೆಯ ಪದರಾದರೇ ರಷ್ಯಾದ ಕ್ರಾಂತಿ ಅದರ ಹೂರಣದಂತೆ, ಹೋಳಿಗೆಯ ರುಚಿಗೆ ಎರಡೂ ತುಂಬ ಮುಖ್ಯ. ಒಂದರ ಗೈರುಹಾಜರಿ ಇಡೀ ಹೋಳಿಗೆಯ ರುಚಿಗೆ ಧಕ್ಕೆಯಾಗುತ್ತದೆ.” ಎಂಬ ಮಾತುಗಳನ್ನು ಆಡಿದ್ದರು.

1848ರಲ್ಲಿ ಕಾರ್ಲ್ ಮಾರ್ಕ್ಸ್ ಮತ್ತು ಫುಡ್ರಿಕ್ ಏಂಗಲ್ಸ್ ‘ ಕಮ್ಯುನಿಸ್ಟ್ ಪುಣಾಳಿಕ ‘ (‘ ದಿ ಕಮ್ಯುನಿಸ್ಟ್ ಮ್ಯಾನಿಫೆಸ್ಕೊ) ಯನ್ನು ಪ್ರಕಟಿಸಿದರು. ಇದರಲ್ಲಿ ಒಂದು ಸಂಘಟಿತ ಶ್ರಮಜೀವಿ ವರ್ಗ ಆಳುವ ವರ್ಗವಾಗಿ ಪರಿವರ್ತನೆಯಾಗುವುದರ ನಿಟ್ಟಿನಲ್ಲಿ ಕ್ರಮಗಳನ್ನು ತಿಳಿಸಲಾಗಿದೆ. ಅಂಬೇಡ್ಕರ್ 1946ರಲ್ಲಿ ಘಟನಾ ಸಭೆಗೆ ಸಂವಿಧಾನದ ಕರಡನ್ನು ಸಲ್ಲಿಸಿದರು. ಇದನ್ನು ಅಖಿಲ ಭಾರತ ಪರಿಶಿಷ್ಟ ಜಾತಿಗಳ ಒಕ್ಕೂಟದ ಪರವಾಗಿ ನೀಡಲಾಯಿತು. ಮೇಲೆ ಪ್ರಸ್ತಾಪಿಸಿರುವ ಎರಡೂ ದಸ್ತಾವೇಜುಗಳ ನಡುವಿನ ಅನೇಕ ಅಂಶಗಳಲ್ಲಿ ಸಾಮ್ಯತೆಯಿದೆ.

ಕಾರ್ಲ್ ಮಾರ್ಕ್ಸ್ ಮತ್ತು ಫುಡ್ರಿಕ್ ಏಂಗೆಲ್ಸ್’ ಪತಿಪಾದಿಸಿದ್ದನ್ನು ‘ಸಮಾಜವಾದಿ ಪ್ರಭುತ್ವ’ ಎಂದು ಬಣ್ಣಿಸಬಹುದು. ಅಂಬೇಡ್ಕರ್ ಮಂಡಿಸಿದ್ದು ಪ್ರಭುತ್ವ ಸಮಾಜವಾದಿ’ ಆರ್ಥಿಕ ನೀತಿ ಇದನ್ನು ಅವರು 1947ರಲ್ಲಿ ಬರೆದ ಪಭುತ್ವ ಮತ್ತು ಅಲ್ಪಸಂಖ್ಯಾತರು’ ಎಂಬ ಪುಸ್ತಕದಲ್ಲಿ ಈ ನೀತಿಯ ಉಲ್ಲೇಖವಿದೆ.

ಫೇಬಿಯನ್ ಸಮಾಜವಾದಿಯಾಗಿದ್ದ (ಜವಹರ್ ಲಾಲ್ ನೆಹರೂರವರನ್ನೂ ಹೀಗೆಂದೇ ಕರೆಯಲಾಗುತ್ತದೆ) ಅಂಬೇಡ್ಕರ್, ಕೈಗಾರಿಕೆ, ಶಿಕ್ಷಣ, ಕೃಷಿ, ಆರೋಗ್ಯ ಮುಂತಾದ ಕ್ಷೇತ್ರಗಳಲ್ಲಿ ಸರ್ಕಾರದ ಪಾತ್ರವೇ ಶಿಖರಪ್ರಾಯವಾಗಿರಬೇಕೆಂದು ಅಭಿಪ್ರಾಯಪಟ್ಟಿದ್ದರು. ಪುಸ್ತುತ ಕಾಲಘಟ್ಟದಲ್ಲಿ ಆಳುವ ಸರ್ಕಾರಗಳು ಖಾಸಗೀಕರಣಕ್ಕೆ ಮಣೆಯನ್ನು ಹಾಕುತ್ತಿವೆ. ನಮ್ಮ ದೇಶದಲ್ಲಿರುವ ಸಾರ್ವಜನಿಕ ಕ್ಷೇತ್ರದ, ಜನತೆಯ ಹಣದಿಂದ ರಚಿಸಿರುವ ಆಸ್ತಿಗಳನ್ನು ಖಾಸಗಿಶಕ್ತಿಗಳಿಗೆ ಎಗ್ಗಿಲ್ಲದೆ ಮಾರಾಟ ಮಾಡಲಾಗುತ್ತಿದೆ. ಹೀಗೆ, ಅಂಬೇಡ್ಕರ್ ಪ್ರತಿಪಾದಿಸಿದ ಪ್ರಭುತ್ವ ಸಮಾಜವಾದಿ,ಆರ್ಥಿಕ ನೀತಿ ಈಗ ಮೂಲೆಗುಂಪಾಗಿದೆ.

ಸ್ವಾತಂತ್ರವನ್ನು ಪಡೆದ ಮೊದಲ ವರ್ಷಗಳಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಒಂದು ಮನನಯೋಗ್ಯ ಹೇಳಿಕೆಯನ್ನು ನೀಡಿದ್ದರು. “1947ರಲ್ಲಿ ಭಾರತ ರಾಜಕೀಯ ಪುಜಾಪ್ರಭುತ್ವವನ್ನು ಗಳಿಸಿತು. ಆದರೆ ಸಾಮಾಜಿಕ ಮತ್ತು ಆರ್ಥಿಕ ಪಜಾಪಭುತ್ವವನ್ನು ಪಡೆದಾಗಲೇ ರಾಜಕೀಯ ಪ್ರಜಾಪ್ರಭುತ್ವಕ್ಕೆ ಅರ್ಥ ಬರುತ್ತದೆ.”

ಇಂದು ನಮ್ಮ ದೇಶಾದ್ಯಂತ 131ನೇ ಅಂಬೇಡ್ಕರ್ ಜಯಂತಿಯನ್ನು ನಾನಾ ರೀತಿಗಳಲ್ಲಿ ಆಚರಿಸಲಾಗುತ್ತಿದೆ. ಪುಸ್ತುತ, ನಮ್ಮಲ್ಲಿ ಫ್ಯಾಸಿಸ್ಟ್ ಶಕ್ತಿಗಳು ಅಟ್ಟಹಾಸದಿಂದ ಮುನ್ನಡೆಯುತ್ತಿವೆ. ಇವುಗಳಿಗೆ ಎದುರಾಗಿ ಪ್ರತಿರೋಧದ ನಡೆಗಳೂ ಇವೆ. ಆದರೆ ಅವು ಒಗ್ಗಟ್ಟಿನ ದನಿಗಳಾಗಿಲ್ಲ; ಹಜ್ಜೆಗಳಾಗಿಲ್ಲ. ಅಂಬೇಡ್ಕರ್ ಆಶಯದ ಸಮಾಜವಾದಿ ಸಮಾಜವನ್ನು ಸಾಕಾರಗೊಳಿಸುವುದು ಸಮಸಮಾಜ ವ್ಯವಸ್ಥೆಯಲ್ಲಿ ನಂಬಿಕೆ ಮತ್ತು ಬದ್ಧತೆಯಿರುವ ಎಲ್ಲ ಜನಪರ ಸಂಘಟನೆಗಳ ಆದ್ಯತೆಯಾಗಬೇಕು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಕಲಿ ವೈದ್ಯರಿಗೆ ದಂಡ ; ಮೆಡಿಕಲ್ ಸ್ಟೋರ್ ಮುಚ್ಚಲು ಆದೇಶ

Published

on

ಸುದ್ದಿದಿನ,ದಾವಣಗೆರೆ:ಹೊನ್ನಾಳಿ ತಾಲ್ಲೂಕಿನ ಕ್ಯಾಸಿನಕೆರೆ ನಕಲಿ ವೈದ್ಯ ಹಾಗೂ ಲಿಂಗಾಪುರದಲ್ಲಿ ಫಾರ್ಮಾಸಿಸ್ಟ್ ನಡೆಸುತ್ತಿದ್ದ ಕ್ಲಿನಿಕ್ ಮುಚ್ಚಿಸಿ ತಲಾ ಲಕ್ಷ ರೂ.ಗಳ ದಂಡ ಪಾವತಿಸುವಂತೆ ಜಿಲ್ಲಾಧಿಕಾರಿ ಹಾಗೂ ಕೆಪಿಎಂಇ ನೊಂದಣಿ ಪ್ರಾಧಿಕಾರ ಹಾಗೂ ಸಾರ್ವಜನಿಕ ಕುಂದುಕೊರತೆ ನಿವಾರಣಾ ಸಮಿತಿ ಅಧ್ಯಕ್ಷರಾದ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.

ಭದ್ರಾವತಿ ತಾಲ್ಲೂಕಿನ ಸನ್ಯಾಸಿಕೊಡಮಗ್ಗಿ ಗ್ರಾಮದ 57 ವರ್ಷದ ಶ್ರೀನಿವಾಸ್ ತಂದೆ ತಿಮ್ಮಪ್ಪ ಇವರು ಹೊನ್ನಾಳಿ ತಾಲ್ಲೂಕಿನ ಲಿಂಗಾಪುರದಲ್ಲಿ ಶೀನಪ್ಪಗೌಡ ಎಂಬುವರ ಮನೆ ಬಾಡಿಗೆ ಪಡೆದು ಹಲವು ವರ್ಷಗಳಿಂದ ಶ್ರೀ ರಾಮಾಂಜನೇಯ ಮೆಡಿಕಲ್ಸ್ ಮತ್ತು ಜನರಲ್ ಸ್ಟೋರ್ ಎಂದು ಪರವಾನಗಿ ಪಡೆದು ಜೊತೆಗೆ ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಾ ಜನರಿಗೆ ಚಿಕಿತ್ಸೆ ನೀಡುತ್ತಿದ್ದನು. ಇವರು ಪಡೆದ ಮೆಡಿಕಲ್ ಸ್ಟೋರ್ ಲೈಸೆನ್ಸ್ ರದ್ದುಪಡಿಸಿ ಒಂದು ಲಕ್ಷ ದಂಡ ವಿಧಿಸಲಾಗಿದೆ.

ಮತ್ತೊಬ್ಬ ನಕಲಿ ವೈದ್ಯ ಹಿರೇಕೇರೂರು ತಾಲ್ಲೂಕಿನ ಹಿರೇ ಮರಬ ಗ್ರಾಮದ 45 ವರ್ಷದ ಲಕ್ಷ್ಮಣ ಬಿನ್ ಫಕ್ಕೀರಪ್ಪ ಇವರು ಹೊನ್ನಾಳಿ ತಾಲ್ಲೂಕಿನ ಕ್ಯಾಸಿನಕೆರೆ ಗ್ರಾಮದಲ್ಲಿ ದೇವಸ್ಥಾನದ ಹತ್ತಿರ ಬಸವನಗೌಡ ಎಂಬುವರಿಂದ ಮನೆ ಬಾಡಿಗೆ ಪಡೆದು ಹಲವು ವರ್ಷಗಳಿಂದ ಅನಧಿಕೃತ ಕ್ಲಿನಿಕ್ ನಡೆಸುತ್ತಾ ಬಂದಿದ್ದರು. ತಪಾಸಣೆ ವೇಳೆ ಬಿಇಎಂಎಸ್ ಪ್ರಮಾಣ ಪತ್ರ ಹೊಂದಲಾಗಿದೆ ಎಂಬ ಮಾಹಿತಿ ನೀಡಿದ್ದು ಇದು ಅಮಾನ್ಯ ಪ್ರಮಾಣ ಪತ್ರವಾಗಿರುವುದರಿಂದ ನಕಲಿ ಎಂದು ಪರಿಗಣಿಸಿ ಲಕ್ಷ ರೂ.ಗಳ ದಂಡ ವಿಧಿಸಲಾಗಿದೆ.

ಈ ನಕಲಿ ಕ್ಲಿನಿಕ್ ಗಳ ಬಗ್ಗೆ ಹೊನ್ನಾಳಿ ಉಪ ವಿಭಾಗಾಧಿಕಾರಿ ಅಭಿಷೇಕ್ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಗಿರೀಶ್ ಸ್ಥಳ ಮಹಾಜರು ಮಾಡಿ ಸಮಗ್ರ ವರದಿ ನೀಡಿದ್ದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹಾಗೂ ಕೆಪಿಎಂಇ ನೊಂದಣಿ ಸದಸ್ಯ ಕಾರ್ಯದರ್ಶಿ ಡಾ.ಷಣ್ಮುಖಪ್ಪ ಜಿಲ್ಲಾಧಿಕಾರಿಗಳಿಗೆ ಸಮಗ್ರ ವರದಿಯೊಂದಿಗೆ ಕ್ರಮಕ್ಕಾಗಿ ಪ್ರಸ್ತಾವನೆ ಸಲ್ಲಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

AI ವಲಯದಲ್ಲಿ ಜಗತ್ತಿನ ನೂರು ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿ ಪ್ರಕಟ

Published

on

ಸುದ್ದಿದಿನಡೆಸ್ಕ್:ಕೃತಕ ಬುದ್ಧಿಮತ್ತೆ ವಲಯದಲ್ಲಿ ಜಗತ್ತಿನ ನೂರು ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿಯನ್ನು ಟೈಮ್ ಪತ್ರಿಕೆ ಪ್ರಕಟಿಸಿದ್ದು, ಅದರಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಹಾಗೂ ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ಸ್ಥಾನ ಪಡೆದಿದ್ದಾರೆ.

ಅಶ್ವಿನಿ ವೈಷ್ಣವ್ ಅವರನ್ನು ಶಾರ್ಪರ್ ವರ್ಗದಲ್ಲಿ ಹೆಸರಿಸಲಾಗಿದ್ದು, ಅವರ ನಾಯಕತ್ವದಲ್ಲಿ ಮುಂದಿನ 5 ವರ್ಷಗಳಲ್ಲಿ ಸೆಮಿಕಂಡಕ್ಟರ್ ತಯಾರಿಕಾ ಕ್ಷೇತ್ರದ ಮೊದಲ 5 ದೇಶಗಳಲ್ಲಿ ಭಾರತ ಸ್ಥಾನ ಪಡೆಯುವ ಆಶಯದಲ್ಲಿದೆ ಎಂದು ಟೈಮ್ ಮ್ಯಾಗ್‌ಜೀನ್ ಬರೆದಿದೆ.

ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಭಾರತವನ್ನು ಪ್ರಮುಖ ಶಕ್ತಿಯಾಗಿ ಹೊರಹೊಮ್ಮಿಸುವ ಪ್ರಯತ್ನದಲ್ಲಿ ಸಚಿವರು ನಿರ್ವಹಿಸಿದ ಮಹತ್ವದ ಪಾತ್ರದ ಹಿನ್ನೆಲೆಯಲ್ಲಿ ಪಟ್ಟಿಯಲ್ಲಿ ಅವರ ಹೆಸರು ನಮೂದಿತವಾಗಿದೆ ಎಂದು ವಾರ್ತಾ ಮತ್ತು ಪ್ರಸಾರ ಸಚಿವಾಲಯ ತಿಳಿಸಿದೆ.

ಕೃತಕ ಬುದ್ಧಿಮತ್ತೆ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಪ್ರಮುಖ ಕೊಡುಗೆ ನೀಡಿದ ಇನ್ಫೋಸೀಸ್‌ನ ಸಹ ಸಂಸ್ಥಾಪಕ ನಂದನ್ ನಿಲೇಕಣಿ, ಸಿಇಓಗಳಾದ ಗೂಗಲ್‌ನ ಸುಂದರ್ ಪಿಚಾಯಿ, ಮೈಕ್ರೋಸಾಫ್ಟ್‌ನ ಸತ್ಯ ನಾದೆಲ್ಲಾ, ಓಪನ್‌ಎಐ ನ ಸ್ಯಾಮ್ ಅಲ್ಟ್‌ಮನ್, ಮೆಟಾದ ಮಾರ್ಕ್ ಝುಕೇರ್‌ಬರ್ಗ್ ಟೈಮ್ ಪ್ರಕಟಿಸಿದ ಪಟ್ಟಿಯಲ್ಲಿ ಸೇರಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಾಜಧಾನಿಯಲ್ಲಿ ಅಪಾಯಕಾರಿ ಮರಗಳನ್ನು ಕತ್ತರಿಸುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನಡೆಸ್ಕ್:ರಾಜಧಾನಿ ಬೆಂಗಳೂರಿನಲ್ಲಿ 15 ದಿನದೊಳಗೆ ಗುಂಡಿ ಮುಚ್ಚುವಂತೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ ಶಿವಕುಮಾರ್ ಸೂಚಿಸಿದ್ದಾರೆ.

ವಿದೇಶ ಪ್ರವಾಸಕ್ಕೂ ಮುನ್ನ ವೈಯಾಲಿಕಾವಲ್ ಬಿಬಿಎಂಪಿ ಕಚೇರಿಯಲ್ಲಿ ಅಧಿಕಾರಿಗಳ ಜತೆ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚುವುದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಇಂದು ಸಭೆ ನಡೆಸಿದ ಅವರು ಸರಿಯಾಗಿ ಕಾರ್ಯನಿವಹಿಸದ ಅಧಿಕಾರಿಗಳನ್ನು ಅಮಾನತುಗೊಳಿಸುವ ಎಚ್ಚರಿಕೆ ನೀಡಿದ್ದಾರೆ.

ಸೆಪ್ಟಂಬರ್‌ನಲ್ಲಿ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಅಧಿಕಾರಿಗಳು ಎಚ್ಚೆತ್ತುಕೊಳ್ಳುವಂತೆ ತಿಳಿಸಿದ ಅವರು, ಅಪಾಯಕಾರಿ ಮರಗಳಿದ್ದರೆ, ಕತ್ತರಿಸುವಂತೆ ಸೂಚಿಸಿದ್ದಾರೆ.

ಯಾವುದೇ ದೂರು ಬಂದರೆ ಅಧಿಕಾರಿಗಳೇ ನೇರ ಹೊಣೆ ಎಂದಿದ್ದಾರೆ. ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವಿಶೇಷ ಆಯುಕ್ತ ಮೌನೀಶ್ ಮೌದ್ಗೀಲ್, ಬಿಎಂಆರ್ಡಿಎ ಆಯುಕ್ತ, ಉಪಮುಖ್ಯಮಂತ್ರಿಗಳ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending