ದಿನದ ಸುದ್ದಿ
ಅಮೆರಿಕಾವನ್ನು ವಲಸಿಗರ ಕ್ಯಾಂಪ್ ಆಗಲು ಬಿಡುವುದಿಲ್ಲ; ಪಾಲಕರಿಂದ ಮಕ್ಕಳನ್ನು ಬೇರ್ಪಡಿಸಿದ್ದ ‘ಟ್ರಂಪ್’ ನ ಗುಡುಗು
ಸುದ್ದಿದಿನ ಡೆಸ್ಕ್ : ಅಮೆರಿಕಾವನ್ನು ವಲಸಿಗರ ಕ್ಯಾಂಪ್ ಆಗಲು ಅವಕಾಶ ನೀಡಲಿಲ್ಲ ಎಂದು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ತಿಳಿಸಿದ್ದಾರೆ.
ಯುಎಸ್- ಮೆಕ್ಸಿಕೋ ಗಡಿಭಾಗದಿಂದ ವಲಸೆ ಬರುತ್ತಿರುವ ಪೋಷಕರಿಂದ ಮಕ್ಕಳನ್ನು ಬೇರ್ಪಡಿಸುವ ಟೀಕೆಗೆ ಟ್ರಂಪ್ ಆಡಳಿತ ಗುರಿಯಾಗಿತ್ತು. ಈ ಘಟನೆ ನಡೆದ ಯುಎಸ್ ಅಧ್ಯಕ್ಷ ಟ್ರಂಪ್ ವಲಸಿಗರ ಕ್ಯಾಂಪ್ ಆಗಲು ಬಿಡುವುದಿಲ್ಲ ಎಂದು ಗುಡುಗಿದ್ದಾರೆ.
ಗಡಿಭಾಗದಲ್ಲಿ ಏಪ್ರಿಲ್ ಹಾಗೂ ಮೇ ತಿಂಗಳ ಅವಧಿಯಲ್ಲಿ ಅಂದಾಜು 2,000ಕ್ಕೂ ಅಧಿಕ ಮಕ್ಕಳನ್ನು ಪಾಲಕರಿಂದ ಮಾಡಿದ ಕ್ರಮವನ್ನು ಖಂಡಿಸಿ ಡೆಮೋಕ್ರಾಟ್ ಮತ್ತು ಆಡಳಿತಾರೂಢ ರಿಪಬ್ಲಿಕನ್ ಪಾರ್ಟಿಯ ಕೆಲವರು ಟ್ರಂಪ್ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಯಿಂದ ಮಕ್ಕಳ ಮನಸ್ಸಿನ ಮೇಲೆ ಶಾಶ್ವತ ಆಘಾತ ಉಂಟು ಮಾಡಬಹುದು ಎಂದು ಮಕ್ಕಳಿಗೆ ಚಿಕಿತ್ಸೆ ನೀಡಿದ ವೈದ್ಯರು ಹೇಳಿದ್ದಾರೆ.
ಅಮೆರಿಕಾವನ್ನು ಅಕ್ರಮವಾಗಿ ಪ್ರವೇಶಿಸಿದ ವಲಸಿಗರು ಸೇರಿದಂತೆ ಆಶ್ರಯ ಬಯಸಿದವರ ಬಂಧನದಿಂದಾಗಿ ಕುಟುಂಬವನ್ನು ಬೇರ್ಪಡಿಸಿದಂತಾಗಿದೆ. ಈ ಕ್ರಮದಿಂದಾಗಿ ಸರ್ಕಾರಕ್ಕೆ ಸಹನೆ, ತಾಳ್ಮೆಯ ಗುಣ ಇಲ್ಲದನ್ನು ತೋರಿಸುತ್ತದೆ ಎಂಬ ಟೀಕೆಗೊಳಗಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಒಡಿಶಾ ರೈಲು ದುರಂತ; 80ಕ್ಕೂ ಹೆಚ್ಚು ಕನ್ನಡಿಗರು ಬೆಂಗಳೂರಿಗೆ ಆಗಮನ

ಸುದ್ದಿದಿನ, ಬೆಂಗಳೂರು: ಒಡಿಶಾದ ರೈಲು ದುರಂತದಲ್ಲಿ ಪಾರಾದ 80ಕ್ಕೂ ಹೆಚ್ಚು ಕನ್ನಡಿಗರು ವಿಮಾನದ ಮೂಲಕ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಒಡಿಶಾಗೆ ತೆರಳಿದ್ದಾರೆ. ಎರಡು ವಿಮಾನಗಳಲ್ಲಿ 80ಕ್ಕೂ ಹೆಚ್ಚು ಕನ್ನಡಿಗರು ಬೆಂಗಳೂರಿಗೆ ಆಗಮಿಸಿದ್ದು, ನಂತರ ರಾಜ್ಯ ಸಾರಿಗೆ ಸಂಸ್ಥೆ ಬಸ್ಗಳಲ್ಲಿ ತಮ್ಮ ಊರಿಗೆ ತೆರಳಿದ್ದಾರೆ.
18 ಜನ ಮೈಸೂರಿಗೆ ಉಳಿದವರು ಹಾಸನ, ಚಿಕ್ಕಮಗಳೂರು ಕಡೆಗೆ ಪ್ರಯಾಣ ಬೆಳೆಸಿದ್ದಾರೆ. ಒಡಿಶಾ ರೈಲು ದುರಂತದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣಾ ಕಾರ್ಯಾಚರಣೆ ನಿರಂತರವಾಗಿ ಸಾಗಿದೆ. ಬಾಲಸೋರ್ ಸರ್ಕಾರಿ ಆಸ್ಪತ್ರೆಗೆ ಸಚಿವ ಸಂತೋಷ್ ಲಾಡ್ ಭೇಟಿ ನೀಡಿ, ಅಲ್ಲಿನ ವೈದ್ಯಾಧಿಕಾರಿಗಳಿಂದ ರಾಜ್ಯದ ಗಾಯಾಳುಗಳ ಬಗ್ಗೆ ಮಾಹಿತಿ ಪಡೆದುಕೊಂಡರು, ಕನ್ನಡಿಗರ ಸುರಕ್ಷತೆ ಸಂಬಂಧ ಅಲ್ಲಿನ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರೊಂದಿಗೂ ಸಚಿವರು ಸಮಾಲೋಚನೆ ನಡೆಸಿದ್ದಾರೆ.
ಒರಿಸ್ಸಾದ ಪುರಿಯಲ್ಲಿ ನಡೆದ ಜಾನಪದ ಜಾತ್ರೆಯಲ್ಲಿ ಭಾಗವಹಿಸಲು ತೆರಳಿದ್ದ ರಾಜ್ಯದ 17 ಜನರ ಕಲಾವಿದರ ತಂಡ ರೈಲು ದುರಂತದ ಹಿನ್ನೆಲೆಯಲ್ಲಿ ಹಿಂದಿರುಗಿ ಬರಲಾಗದೆ ಅತಂತ್ರ ಸ್ಥಿತಿಯಲ್ಲಿದ್ದರು.
ಈ ಕಲಾತಂಡವನ್ನು ಕ್ಷೇಮವಾಗಿ ಕರೆತರಲು ನಮ್ಮ ಸರ್ಕಾರ ವಿಮಾನ ಪ್ರಯಾಣದ ವ್ಯವಸ್ಥೆ ಮಾಡಿದೆ.
ಕನ್ನಡಿಗರ ಹಿತ ಕಾಯಲು ಕಾಂಗ್ರೆಸ್ ಸದಾ ಬದ್ದ.… pic.twitter.com/b5PK9akslN
— Karnataka Congress (@INCKarnataka) June 4, 2023
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರೈತರಿಂದ ಖರೀದಿಸುವ ಹಾಲಿನ ದರ ಕಡಿಮೆ ಮಾಡುವಂತಿಲ್ಲ : ಸಿಎಂ ಸಿದ್ದರಾಮಯ್ಯ ಸೂಚನೆ

ಸುದ್ದಿದಿನ, ಬೆಂಗಳೂರು: ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಹಾಲು ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಅಮೂಲ್ ದರ ಕಡಿತ ಮಾಡಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಪಷ್ಟನೆ ನೀಡಿದ್ದಾರೆ.
ಕರ್ನಾಟಕ ಹಾಲು ಮಹಾಮಂಡಳಿ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಏಕಾಏಕಿ ದರ ಕಡಿತ ಮಾಡುವಂತಿಲ್ಲ. ಈ ಕುರಿತು ಸರ್ಕಾರದೊಂದಿಗೆ ಚರ್ಚಿಸಬೇಕು ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಒಡಿಶಾದಲ್ಲಿ ಸಿಲುಕಿರುವ ಕನ್ನಡಿಗರು ಇಂದು ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಆಗಮನ

ಸುದ್ದಿದಿನ ಡೆಸ್ಕ್ : ಕೋಲ್ಕತಾದ ಹೌರಾದಲ್ಲಿ ಸಿಲುಕಿರುವ ಕನ್ನಡಿಗರನ್ನು ವಿಶೇಷ ವಿಮಾನದಲ್ಲಿ ಕರ್ನಾಟಕಕ್ಕೆ ಕರೆ ತರಲು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ.
ಇಂದು ಬೆಳಗ್ಗೆ ವಿಶೇಷ ವಿಮಾನದಲ್ಲಿ ಎಲ್ಲರೂ ಆಗಮಿಸುವ ನಿರೀಕ್ಷೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕೋಲ್ಕತಾದಿಂದ ಬೆಂಗಳೂರಿಗೆ ವಿಮಾನ ಟಿಕೆಟ್ ವ್ಯವಸ್ಥೆ ಮಾಡಿದ್ದಾರೆ.
ಮುಂಜಾನೆ ಹೊರಡಲಿರುವ ಇಂಡಿಗೊ ವಿಮಾನ ಬೆಂಗಳೂರಿಗೆ ಬರಲಿದೆ. ಕೋಲ್ಕತಾದಲ್ಲಿ ನಡೆದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದ ಆಟಗಾರರೂ ಈ ರೈಲುಗಳಲ್ಲಿ ವಾಪಸಾಗುವ ವೇಳೆ ಈ ದುರಂತ ಸಂಭವಿಸಿದ್ದು, ತರಬೇತುದಾರರು ಸೇರಿ 32 ಜನರನ್ನು ಸುರಕ್ಷಿತವಾಗಿ ಕರೆ ತರಲು ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ಭೀಕರ ರೈಲು ದುರಂತದ ಹಿನ್ನೆಲೆಯಲ್ಲಿ ಕನ್ನಡಿಗರ ರಕ್ಷಣೆಗಾಗಿ ಸಚಿವ ಸಂತೋಷ್ ಲಾಡ್ ಅವರನ್ನು ಘಟನಾ ಸ್ಥಳಕ್ಕೆ ನಿಯೋಜಿಸಲಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ರೈಲು ದುರಂತದಲ್ಲಿ 280ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದು ಘೋರ, ದುರದೃಷ್ಟಕರ ಘಟನೆ. ಅಪಘಾತ ಸುದ್ದಿಯಿಂದ ಅತೀವ ನೋವಾಗಿದೆ. ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದ್ದಾರೆ.
ಅಪಘಾತದಲ್ಲಿ ಕನ್ನಡಿಗರ ಸಾವು – ನೋವಿನ ಬಗ್ಗೆ ಸದ್ಯ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಘಟನೆಯ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಂದ ಪ್ರಾಥಮಿಕ ಮಾಹಿತಿ ಪಡೆದು ಕನ್ನಡಿಗರ ರಕ್ಷಣೆಗೆ ಹಾಗೂ ಅಗತ್ಯ ನೆರವು ಒದಗಿಸಲು ಘಟನಾ ಸ್ಥಳಕ್ಕೆ ಸಚಿವ ಸಂತೋಷ್ ಲಾಡ್ ತೆರಳಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ದುರಂತದಲ್ಲಿ ಸಿಲುಕಿದ್ದ ಕನ್ನಡಿಗರೊಂದಿಗೆ ದೂರವಾಣಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಅಗತ್ಯ ನೆರವು ಒದಗಿಸಿ, ಸುರಕ್ಷಿತವಾಗಿ ವಾಪಸ್ ಕರೆ ತರಲಾಗುವುದು ಎಂದು ಧೈರ್ಯ ತುಂಬಿದರು. ರಾಜ್ಯ ಸರ್ಕಾರದ ತುರ್ತು ನಿರ್ವಹಣಾ ಕೇಂದ್ರದ ಸಹಾಯವಾಣಿ ಸಂಖ್ಯೆ 1070ಅಥವಾ
080-22253707 ಅಥವಾ 080 – 22340676 ಅನ್ನು ಸಂಪರ್ಕಿಸಬಹುದಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago
ಜೂನ್ 1 ರಿಂದಲೇ ಗ್ಯಾರಂಟಿ ಯೋಜನೆ ಘೋಷಣೆ
-
ದಿನದ ಸುದ್ದಿ3 days ago
ಇಲ್ಲಿದೆ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕಂಪ್ಲೀಟ್ ಡೀಟೆಲ್ಸ್
-
ದಿನದ ಸುದ್ದಿ4 days ago
ಐದು ಗ್ಯಾರಂಟಿ ಯೋಜನೆಗಳ ಅನುಷ್ಟಾನಕ್ಕೆ ಸರ್ಕಾರ ಬದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ
-
ದಿನದ ಸುದ್ದಿ3 days ago
ಐದು ಗ್ಯಾರಂಟಿ | ಫಲಾನುಭವಿಗಳ ಆಯ್ಕೆ ಮಾನದಂಡ
-
ದಿನದ ಸುದ್ದಿ5 days ago
ಹೋಟೆಲ್ಗಳಲ್ಲಿ ವಿವಿಧ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ದಾವಣಗೆರೆ | ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago
ಈ ವರ್ಷವೇ ಚಿತ್ರದುರ್ಗದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಚಿಂತನೆ : ಕೇಂದ್ರ ಸಚಿವ ಎ.ನಾರಾಯಣಸ್ವಾಮಿ
-
ದಿನದ ಸುದ್ದಿ2 days ago
ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಬಿತ್ತನೆ ಬೀಜ ಕೊರತೆಯಾಗದಂತೆ ರಾಜ್ಯಾದ್ಯಂತ ಕ್ರಮ