ದಿನದ ಸುದ್ದಿ
ನೋಟು ರದ್ದು ಸುದ್ದಿಯಲ್ಲಿ ಅಮಿತ್ ಶಾ ಹೆಸರು ಡಿಲಿಟ್!
ಸುದ್ದಿದಿನ ಡೆಸ್ಕ್: ನೋಟು ರದ್ದತಿ ಸಮಯದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ನಿರ್ದೇಶಕರಾಗಿರುವ ಅಹಮದಾಬಾದ್‍ನ ಬ್ಯಾಂಕ್‍ವೊಂದರಲ್ಲಿಅತಿ ಹೆಚ್ಚು ನೋಟುಗಳು ಹೊಸ ನೋಟುಗಳಿಗೆ ಬದಲಾವಣೆಯಾಗಿರುವ ಸುದ್ದಿಯನ್ನು ದೇಶದ ಪ್ರಮುಖ ಪತ್ರಿಕೆಗಳ ವೆಬ್ ಪೋರ್ಟಲ್‍ಗಳು ಈಗ ಅದನ್ನು ಡಿಲಿಟ್ ಮಾಡಿವೆ.
ಈ ಕುರಿತು ಬೂಮ್ ನ್ಯೂಸ್ ಪೋರ್ಟಲ್ ವರದಿಮಾಡಿದ್ದು, ಈಗ ಆ ಪೋಸ್ಟ್ ವೈರಲ್ ಆಗುತ್ತಿದೆ.
ಫಸ್ಟ್ ಪೋಸ್ಟ್, ನ್ಯೂಸ್ 18 ಡಾಟ್ ಕಾಂ, ಟೈಮ್ಸ್ ನೌ ಹಾಗೂ ನ್ಯೂ ಇಂಡಿಯನ್ ಎಕ್ಸ್‍ಪ್ರೆಸ್ ವೆಬ್ ತಾಣಗಳು ಶಾ ಅವರ ಹೆಸರು ತಳಕುಹಾಕಿಕೊಂಡಿರುವ ಈ ಸುದ್ದಿಯನ್ನು ಡಿಲಿಟ್ ಮಾಡಿದ್ದು, ಎಕನಾಮಿಕ್ ಟೈಮ್ಸ್ ಸುದ್ದಿ ತಾಣವು ಒಂದು ಹೆಜ್ಜೆ ಮುಂದೆ ಹೋಗಿ ಅಮಿತ್ ಶಾ ಹೆಸರನ್ನು ಮಾತ್ರ ತೆಗೆದುಹಾಕಿದೆ.
ಇಟಿ ವೆಬ್ ಪೋರ್ಟಲ್‍ನಲ್ಲಿರುವ ಈ ಸುದ್ದಿಯಲ್ಲಿರುವ ರೀಡ್ ಮೋರ್ ಬಟನ್‍ಅನ್ನು ಕ್ಲಿಕ್ ಮಾಡಿದಾಗ ಅಲ್ಲಿ ಬಿಜೆಪಿ ನಾಯಕ ಎಂದಷ್ಟೇ ಉಲ್ಲೇಖವಾಗಿದೆ. ಮೊದಲ ಪ್ಯಾರಾದಲ್ಲಿ ದಾಖಲಾಗಿದ್ದ ಅಮಿತ್ ಶಾ ಅವರ ಹೆಸರನ್ನು ಉದ್ದೇಶಪೂರ್ವಕವಾಗಿಯೇ ಡಿಲಿಟ್ ಮಾಡಲಾಗಿದೆ ಎಂಬುದು ಇದರ ಅರ್ಥ.
ಈ ಕುರಿತು ಹೆಚ್ಚಿನ ಮಾಹಿತಿಪಡೆಯುವ ಸಲುವಾಗಿ ಬೂಮ್ ಪತ್ರಿಕೆ ವರದಿಗಾರ ಇಟಿ ವೆಬ್ ತಾಣದ ಮುಖ್ಯಸ್ಥ ದೀಪಕ್ ಅಜ್ವಾನಿ ಅವರನ್ನು ಸಂಪರ್ಕಿಸಿದ್ದು, ಇದರ ಬಗ್ಗೆ ಪ್ರತಿಕ್ರಿಯಿಸಲು ಅವರು ಒಪ್ಪಿಲ್ಲ.
ಇಂಡಿಯನ್ ಎಕ್ಸ್‍ಪ್ರೆಸ್ ವೆಬ್ ತಾಣದಲ್ಲಿ ಜೂ.21ರಂದು ಸುದ್ದಿ ಅಪ್‍ಲೋಡ್ ಮಾಡಲಾಗಿದ್ದು, ನಾಲ್ಕು ಗಂಟೆಗಳ ಕಾಲ ಇದು ಆನ್‍ಲೈನ್‍ನಲ್ಲಿ ಲಭ್ಯವಿತ್ತು ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ.
“ಐಎಎನ್‍ಎಸ್ ಸುದ್ದಿಸಂಸ್ಥೆಯ ಸುದ್ದಿಗಳನ್ನು ಡೆಸ್ಕ್ ವಿಭಾಗದವರು ಪರಿಶೀಲಿಸಿ ಅಪ್‍ಲೋಡ್ ಮಾಡುತ್ತಾರೆ. ಹಿರಿಯರ ಸೂಚನೆ ಮೇರೆಗಷ್ಟೆ ಸುದ್ದಿಗಳನ್ನು ಡಿಲಿಟ್ ಮಾಡಲಾಗುತ್ತದೆ,’ ಎಂದು ಎಕ್ಸ್‍ಪ್ರೆಸ್ ಮೂಲಗಳು ಬೂಮ್ ಸುದ್ದಿತಾಣಕ್ಕೆ ತಿಳಿಸಿದ್ದಾರೆ.
ಬೂಮ್ ಸುದ್ದಿ ತಾಣವು ಎಕ್ಸ್‍ಪ್ರೆಸ್ ಸುದ್ದಿ ತಾಣದ ಮುಖ್ಯಸ್ಥ ಸುರೇಶ್ ಇವಾತುರಿ ಅವರನ್ನು ಸಂಪರ್ಕಿಸಿದ್ದು ಈ ಕುರಿತು ಸದ್ಯದಲ್ಲೇ ವಿವರಣೆ ನೀಡುವುದಾಗಿ ತಿಳಿಸಿದ್ದಾರೆ. ಫಸ್ಟ್‍ಪೋಸ್ಟ್ ಪ್ರಕಟಿಸಿದ್ದ ಸುದ್ದಿಯ ಆರ್ಕೈವ್‍ಅನ್ನು ಬೂಮ್ ತಾಣವು ಪತ್ತೆ ಮಾಡಿದ್ದು, ಈ ಸುದಿಯಲ್ಲಿ ಅಮಿತ್ ಶಾ ಅವರ ಹೆಸರಿರುವುದು ಪಕ್ಕಾ ಆಗಿದೆ. ಆದರೆ, ದೇಶದ ಬಹುತೇಕ ವಾಹಿನಿಗಳು, ಪತ್ರಿಕೆಗಳು ಈ ಸುದ್ದಿಯನ್ನು ಏಕೆ ಪ್ರಕಟಿಸಿಲ್ಲ. ಹಾಗೂ ವೆಬ್ ತಾಣದಲ್ಲಿ ಸುದ್ದಿಯನ್ನು ಡಿಲಿಟ್ ಮಾಡಿದ್ದು ಏಕೆ ಎಂಬುದು ಈವರೆಗೂ ಗೊತ್ತಾಗಿಲ್ಲ.
ಸುದ್ದಿಯಲ್ಲಿ ಏನಿತ್ತು?
ಅಮಿತ್ ಶಾ ಅವರು ನಿರ್ದೇಶಕರಾಗಿರುವ ಅಹಮದಾಬಾದ್ ಸಹಕಾರ ಬ್ಯಾಂಕ್‍ನಲ್ಲಿ 745.59 ಕೋಟಿ ರೂ. ಹಳೆಯ ನೋಟುಗಳನ್ನು ಹೊಸ ನೋಟುಗಳಿಗೆ ಬದಲಾವಣೆ ಮಾಡಿಕೊಟ್ಟಿರುವುದು ಆರ್‍ಟಿಐ ಅರ್ಜಿ ಮೂಲಕ ಬೆಳಕಿಗೆ ಬಂದಿರುವುದು ಫಸ್ಟ್‍ಪೋಸ್ಟ್‍ನ ಆರ್ಕೈವ್ ವರ್ಷನ್‍ನಲ್ಲಿಸಿಕ್ಕಿದೆ.
ಈ ಕುರಿತು ಐಎಎನ್‍ಎಸ್ ಸುದ್ದಿಸಂಸ್ಥೆಯು ಜೂ.21ರಂದು ಸುದ್ದಿಯೊಂದನ್ನು ಪ್ರಕಟಿಸಿದೆ ಮನೋರಂಜನ್ ರೈ ಎಂಬುವವರು ಸಲ್ಲಿಸಿದ್ದ ಆರ್‍ಟಿಐ ಅರ್ಜಿಯೊಂದರಿಂದ ಈ ಮಾಹಿತಿ ಸ್ಪಷ್ಟವಾಗಿದೆ.
ಸಹಕಾರಿ ಬ್ಯಾಂಕ್‍ನ ವೆಬ್ ತಾಣದಲ್ಲಿರುವ ಮಾಹಿತಿಗಳ ಪ್ರಕಾರ ಹಲವು ವರ್ಷಗಳಿಂದ ಈ ಬ್ಯಾಂಕ್‍ನ ನಿರ್ದೇಶಕರಾಗಿ ಅಮಿತ್ ಶಾ ಕಾರ್ಯ ನಿರ್ವಹಿಸಿದ್ದಾರೆ. ಮಾರ್ಚ್ 31 , 2017ರ ಹೊತ್ತಿಗೆ ಈ ಬ್ಯಾಂಕ್‍ನ ಒಟ್ಟು ಡೆಪಾಸಿಟ್ 5,050 ಕೋಟಿ ರೂ ತಲುಪಿತ್ತು. 2016-17ನೇ ಸಾಲಿನಲ್ಲಿ ಈ ಬ್ಯಾಂಕ್‍ನ ನಿವ್ವಳ ಲಾಭ 14.31 ಕೋಟಿ ರೂ.ಗಳಾಗಿದ್ದವು ಎಂಬುದನ್ನು ಆರ್‍ಟಿಐ ಮಾಹಿತಿ ಸ್ಪಷ್ಟವಾಗಿ ಹೇಳಿದೆ.
ಸುದ್ದಿ ನಿಜ ಎಂದ ಐಎಎನ್‍ಎಸ್
ಐಎಎನ್‍ಎಸ್ ತಾನು ಈ ಸುದ್ದಿ ಪ್ರಕಟಿಸಿರುವುದಾಗಿ ಒಪ್ಪಿಕೊಂಡಿದೆ. ಬೂಮ್ ಸುದ್ದಿತಾಣವು ಐಎಎನ್‍ಎಸ್ ಸುದ್ದಿಸಂಸ್ಥೆ ಮುಖ್ಯಸ್ಥ ಹರ್‍ದೇವ್ ಸನೊತ್ರಾ ಅವರನ್ನು ಸಂಪರ್ಕಿಸಿದಾಗ, ಇಲ್ಲಿ ಮುಚ್ಚಿಡುವುದು ಏನೂ ಇಲ್ಲ. ಆರ್‍ಟಿಐ ಅರ್ಜಿಯೊಂದಕ್ಕೆ ಸಿಕ್ಕಿರುವ ಮಾಹಿತಿಯನ್ನು ನಾವು ಸುದ್ದಿ ರೂಪದಲ್ಲಿ ಕೊಟ್ಟಿದ್ದೆವೆ ಎಂದು ಪ್ರತಿಕ್ರಿಯಿಸಿದ್ದಾರೆ.

ದಿನದ ಸುದ್ದಿ
‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು
ಸುದ್ದಿದಿನ ಡೆಸ್ಕ್:ಆರಂಭಿಕ ಜೀವನ – 1978ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ದಿಲೀಪ್ ರಾಜ್ ಅವರು ಕಾಲೇಜು ದಿನಗಳಿಂದಲೇ ಕಲೆಯತ್ತ ಒಲವು ಹೊಂದಿದ್ದರು.
ಚಲನಚಿತ್ರ ರಂಗ – 2005ರಲ್ಲಿ ‘ಬಾಯ್ ಫ್ರೆಂಡ್’ ಚಿತ್ರದ ಮೂಲಕ ಎಂಟ್ರಿ ಕೊಟ್ಟ ಅವರು, 2007ರಲ್ಲಿ ಪುನೀತ್ ರಾಜ್‌ಕುಮಾರ್ ಅವರ ‘ಮಿಲನ’ ಚಿತ್ರದಲ್ಲಿ ಹೇಮಂತ್ ಎಂಬ ವಿಲನ್ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದರು.
ಇತ್ತೀಚಿನ ಜನಪ್ರಿಯತೆ – ‘ಲವ್ ಮಾಕ್ಟೇಲ್’ ಸಿನಿಮಾ ಮತ್ತು ಕಿರುತೆರೆಯಲ್ಲಿ ನಟ-ನಿರ್ಮಾಪಕರಾಗಿ ದೊಡ್ಡ ಹೆಸರು ಮಾಡಿದ್ದರು.
ದಿಲೀಪ್ ರಾಜ್ ಅವರ ಸಾವು ಕೇವಲ ಒಂದು ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ಚಿತ್ರರಂಗಕ್ಕೆ ದೊಡ್ಡ ನಷ್ಟ. ಇವರ ಈ ಹಠಾತ್ ನಿಧನವು ಒತ್ತಡದ ಜೀವನಶೈಲಿ ಮತ್ತು ಆರೋಗ್ಯದ ಕಡೆಗೆ ನಾವು ನೀಡಬೇಕಾದ ಹೆಚ್ಚಿನ ಗಮನದ ಬಗ್ಗೆ ಎಚ್ಚರಿಕೆ ನೀಡುವಂತಿದೆ.

ದಿನದ ಸುದ್ದಿ
ಬ್ಯಾಕ್‌ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬಾ ಬಸವಾರ್ಯ ಪ್ರೌಢಶಾಲೆಯ ಕನ್ನಡ ಶಿಕ್ಷಕರ ಬ್ಯಾಕ್‌ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯಲ್ಲಿನ ಅಕ್ರಮಗಳನ್ನು ತನಿಖೆಗೆ ಒಳಪಡಿಸಿ ಆಡಳಿತ ಮಂಡಳಿ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ನೀಡಿ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಶ್ರೀ ಕೃಷ್ಣಾಜಿ ಎಸ್. ಕರಿಚಣ್ಣನವರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬ ಬಸವಾರ್ಯ ಪ್ರೌಢಶಾಲೆಯಲ್ಲಿನ ಕನ್ನಡ ಶಿಕ್ಷಕರ ಬ್ಯಾಕ್‌ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯು ನಿಯಮಬಾಹಿರವಾಗಿ ನಡೆದಿರುವ ಮಾಹಿತಿಯ ಆಧಾರದ ಮೇಲೆ ಆಯುಕ್ತರು ಹಾಗೂ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಆಯುಕ್ತರ ಕಛೇರಿ, ಬೆಂಗಳೂರು ಇವರಿಗೆ ದೂರು ನೀಡಿ, ಬ್ಯಾಕ್‌ಲಾಗ್ ನಿಯಮಕ್ಕೆ ವಿರುದ್ಧವಾಗಿ ಸಂದರ್ಶನ ನಡೆಸಿ, ನೇಮಕಾತಿ ಪ್ರಕ್ರಿಯೆಗೆ ಮುಂದಾಗಿರುವ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮೂಖ್ಯೋಪಧ್ಯಾಯರು, ವಿಷಯ ಪರಿವೀಕ್ಷಕರು, ವಿಷಯ ತಜ್ಞರು ಹಾಗೂ ಆಡಳಿತ ಮಂಡಳಿಯ ಸದಸ್ಯರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ದೂರು ಅರ್ಜಿ ತಲುಪಿದ ಒಂದು ತಿಂಗಳ ಒಳಗಾಗಿ ನೀಡುವಂತೆ ಮನವಿ ಮಾಡಲಾಗಿತ್ತು. ಆದರೆ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.
ವಯಸ್ಸು ಮತ್ತು ಮೆರಿಟ್ ಆಧಾರದಲ್ಲಿ ನೇಮಕಾತಿ ನಡೆಸದೆ ಸಂದರ್ಶನ ನಡೆಸಿ ಬ್ಯಾಕ್‌ಲಾಗ್ ನಿಯಮವನ್ನು ಉಲ್ಲಂಘನೆ ಮಾಡಿರುವುದು ತನಿಖೆಯಲ್ಲಿ ಕಂಡುಬAದಿರುತ್ತದೆ. ಆದರೆ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕಾರಣ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಕೃಷ್ಣಾಜಿ ಎಸ್. ಕರಿಚಣ್ಣನವರ್ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿ, ಬ್ಯಾಕ್‌ಲಾಗ್ ನಿಯಮಗಳನ್ನು ಉಲ್ಲಂಘಿಸಿ ಸಂದರ್ಶನ ನಡೆಸಲು ಕಾರಣರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರಿಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿಗಳ ಅವ್ಯವಹಾರ ನಡೆಸಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇಲ್ಲಿನ ಪ್ರಾಂಶುಪಾಲರಾದ ನಾಗರಾಜ ಜಿ.ಎಂ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ ನಕಲಿ ಬಿಲ್ಲುಗಳ ಮೂಲಕ ಸರ್ಕಾರದ ಅನುದಾನವನ್ನು ವಂಚಿಸುತ್ತಿರುವ ವಿಷಯ ತಿಳಿದು ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇವರು ನೀಡಿರುವ 37 ಬಿಲ್ಲುಗಳನ್ನು ಪರಿಶೀಲನೆ ಮಾಡಿದಾಗ, ಇವುಗಳಲ್ಲಿನ ಬಹುತೇಕ ಜಿ.ಎಸ್.ಟಿ ಬಿಲ್ಲುಗಳಲ್ಲಿ ದಿನಾಂಕವೇ ಇರುವುದಿಲ್ಲ.
ಇನ್ನೂ ಕೆಲವು ಬಿಲ್ಲುಗಳನ್ನು ಹೊರ ರಾಜ್ಯದಿಂದ ಪಡೆಯಲಾಗಿರುತ್ತದೆ. ಆದ್ದರಿಂದ ಮರು ಲೆಕ್ಕಪರಿಶೋಧನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ2 days agoನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
-
ಅಂಕಣ4 days agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ದಿನದ ಸುದ್ದಿ5 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ದಿನದ ಸುದ್ದಿ4 days agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
-
ದಿನದ ಸುದ್ದಿ2 days agoಬ್ಯಾಕ್‌ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು
-
ದಿನದ ಸುದ್ದಿ5 days agoಮಾನಸಿಕ ಆರೋಗ್ಯ ಅರಿವು ಅಗತ್ಯ : ಡಾ. ಪ್ರಭು ಎಂ. ಬಿಸ್ಲೇರಿ


