ದಿನದ ಸುದ್ದಿ
ಸ್ವಾತಂತ್ರ್ಯದ ಅಮೃತ ಮಹೋತ್ಸವ : ಏಪ್ರಿಲ್ 2 ಕ್ಕೆ ಚಾಲನೆ
ಸುದ್ದಿದಿನ,ದಾವಣಗೆರೆ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ದೇಶಾದ್ಯಂತ 75 ವಾರಗಳ ಕಾಲ ನಿರಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ದಾವಣಗೆರೆ ನಗರದ ಪಾಲಿಕೆ ಆವರಣದಲ್ಲಿ ಏಪ್ರಿಲ್ 2 ರಂದು ಸ್ವಾತಂತ್ರ್ಯದ ಸಂದೇಶ ಸಾರುವ ಅರ್ಥಪೂರ್ಣ ಕಾರ್ಯಕ್ರಮದೊಂದಿಗೆ ಅಮೃತ ಮಹೋತ್ಸವಕ್ಕೆ ಚಾಲನೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.
ಸೋಮವಾರ ಜಿಲ್ಲಾಡಳಿತ ಕಚೇರ ಸಭಾಂಗಣದಲ್ಲ ಆಜಾದಿ ಕಿ ಅಮೃತ ಮಹೋತ್ಸವವನ್ನು ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಆಚರಿಸುವ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚಿಸಲು ಕರೆಯಲಾಗಿದ್ದ ಪೂರ್ವಸಿದ್ದತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇದನ್ನೂ ಓದಿ | ದಾವಣಗೆರೆ | ಅನರ್ಹ ಪಡಿತರ ಚೀಟಿದಾರರು ಸ್ವಯಂ ಪ್ರೇರಿತರಾಗಿ ಬಿಪಿಎಲ್ ಪಡಿತರ ಚೀಟಿ ಅಧ್ಯರ್ಪಿಸಲು ಡಿಸಿ ಸೂಚನೆ
ಜಿಲ್ಲೆಯಲ್ಲಿ ಸಹ ಒಟ್ಟು 75 ಕಾರ್ಯಕ್ರಮಗಳನ್ನು ನಡೆಸಲು ಕ್ರಿಯಾ ಯೋಜನೆ ಸಿದ್ದಪಡಿಸಲಾಗಿದ್ದು, ವಿವಿಧ ಇಲಾಖೆಗಳಿಗೆ ಇದರ ಜವಾಬ್ದಾರಿ ವಹಿಸಲಾಗಿದೆ. ಏಪ್ರಿಲ್ 2 ರಂದು ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಜಿಲ್ಲಾ ಕೇಂದ್ರ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಚಾಲನೆ ನೀಡಲಾಗುವುದು.
ಅಂದು ನಗರದ ಡಿಸಿ ಕಚೇರಿಯಿಂದ ಅಧಿಕಾರಿಗಳನ್ನೊಳಗೊಂಡಂತೆ ಸುಮಾರು 75 ಸೈಕಲ್ಗಳಲ್ಲಿ ಸೈಕಲ್ ಜಾಥಾ ಹೊರಟು ಗುಂಡಿ ಸರ್ಕಲ್, ವಿದ್ಯಾನಗರ, ಎಸಿ ಕಚೇರಿ ಮಾರ್ಗವಾಗಿ ಪಾಲಿಕೆ ಆವರಣ ತಲುಪಿ ಗಾಂಧೀಜಿ ಮತ್ತು ಹುತಾತ್ಮರ ಧ್ವಜಸ್ತಂಭ, ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಇವರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಸ್ವಾತಂತ್ರ್ಯ ಹೋರಾಟದ ಕುರಿತು ಜಾಗೃತಿ ಮೂಡಿಸುವಂತಹ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾಗುವುದು ಎಂದರು.
ಇಂದಿನ ತಾಂತ್ರಿಕ ಜಗತ್ತಿನ ನಮ್ಮ ಮಕ್ಕಳಿಗೆ ಸ್ವಾತಂತ್ರ್ಯ ಹೋರಾಟ, ತ್ಯಾಗ ಬಲಿದಾನದ ಬಗ್ಗೆ ತಿಳಿಸುವ, ಸಂದೇಶ ನೀಡುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಅಂದು ಕಲಾವಿದರಿಂದ ಕನ್ನಡ ದೇಶಭಕ್ತಿ ಗೀತ ಗಾಯನ ಏರ್ಪಡಿಸಲಾಗುವುದು. ಹಾಗೂ ಮುಂದಿನ ಕಾರ್ಯಕ್ರಮಗಳು ಸಹ ಈ ನಿಟ್ಟಿನಲ್ಲಿ ನಡೆಯಲು ಕ್ರಿಯಾ ಯೋಜನೆ ಸಿದ್ದಪಡಿಸಲಾಗಿದೆ. ಅಂದು ಇತರೆ ತಾಲ್ಲೂಕುಗಳಲ್ಲಿ ಸಹ ಇದೇ ರೀತಿಯ ಚಟುವಟಿಕೆಗಳು ನಡೆಸಲು ಸೂಚನೆ ನೀಡಲಾಗಿದೆ ಎಂದರು.
ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಅಂಗವಾಗಿ ವಿವಿಧ ಕನ್ನಡಪರ ಸಂಘಟನೆಗಳು, ರೋಟರಿ, ಲಯನ್ಸ್, ಸ್ಕೌಟ್ಸ್, ಗೈಡ್ಸ್ ಎನ್ಎಸ್ಎಸ್, ಎನ್ಸಿಸಿ ಸೇರಿದಂತೆ ಸಂಘಟನೆಗಳ ಸಹಯೋಗದಲ್ಲಿ ಸ್ವಚ್ಚತೆ ಕಾರ್ಯಕ್ರಮ ಸೇರಿದಂತೆ ವಿವಿಧ ಕಾರ್ಯಕ್ರಮ ನಡೆಸಲಾಗುವುದು. ಕೋವಿಡ್ ಹಿನ್ನೆಲೆಯಲ್ಲಿ ಹೆಚ್ಚು ಜನರನ್ನು ಸೇರಿಸದೆ ಅರ್ಥಪೂರ್ಣವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.
ಜಿ.ಪಂ ಸಿಇಓ ಡಾ.ವಿಜಯ ಮಹಾಂತೇಶ ದಾನಮ್ಮನವರ್ ಮಾತನಾಡಿ, ಕಳೆದ ಸಾಲಿನಲ್ಲಿ ನಮ್ಮ ಜಿಲ್ಲಾ ಪಂಚಾಯ್ತಿಗೆ ಅತ್ಯುತ್ತಮ ಜಿ.ಪಂ ಪ್ರಶಸ್ತಿ ಲಭಿಸಿದ ಹಿನ್ನೆಲೆಯಲ್ಲಿ ಆಜಾದಿ ಕಿ ಅಮೃತಮಹೋತ್ಸವ ಸಂದರ್ಭದಲ್ಲಿ ಜಿಲ್ಲೆಯಲ್ಲಿ 75 ಕಾರ್ಯಕ್ರಮಗಳನ್ನು ನಡೆಸಲು ಅವಕಾಶ ನೀಡಲಾಗಿದ್ದು, ಗ್ರಾ.ಪಂ, ತಾ.ಪಂ ಮಟ್ಟದಲ್ಲೂ ನಿರಂತರವಾಗಿ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ಡಿಡಿಪಿಐ ಪರಮೇಶ್ವರಪ್ಪ, ಹರಿಹರ ತಹಶೀಲ್ದಾರ್ ರಾಮಚಂದ್ರಪ್ಪ, ಕ್ರೀಡಾ ಮತ್ತು ಯುವಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀನಿವಾಸ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ, ವಾರ್ತಾಧಿಕಾರಿ ಡಿ.ಅಶೋಕಕುಮಾರ್, ಇತರೆ ಅಧಿಕಾರಿಗಳು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ6 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ6 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ6 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು
-
ದಿನದ ಸುದ್ದಿ3 days ago
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
-
ದಿನದ ಸುದ್ದಿ2 days ago
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ