Connect with us

ದಿನದ ಸುದ್ದಿ

ಅನರ್ಹ ಪಡಿತರ ಚೀಟಿ ಹಿಂದಿರುಗಿಸಲು ಜೂ.30 ರವರೆಗೆ ಅವಕಾಶ

Published

on

ಸುದ್ದಿದಿನ,ದಾವಣಗರೆ : ಅನರ್ಹರು ಬಿಪಿಎಲ್ ಪಡಿತರ ಚೀಟಿ ಹೊಂದಿದ್ದಲ್ಲಿ, ಅಂತಹ ಬಿಪಿಎಲ್ ಪಡಿತರ ಚೀಟಿಯನ್ನು ಹಿಂದಿರುಗಿಸಲು ಜೂ. 30 ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಬಿಪಿಎಲ್ ಪಡಿತರ ಚೀಟಿ ಹೊಂದಲು ಅನರ್ಹರಾಗಿರುವ ಕುಟುಂಬಗಳು ತನಿಖಾ ಸಮಯದಲ್ಲಿ ಸುಳ್ಳು ಮಾಹಿತಿ ನೀಡಿ ಇಲಾಖೆ ಮಾನದಂಡಗಳನ್ನು ಮರೆಮಾಚಿ ಅಂತ್ಯೋದಯ ಅನ್ನ ಮತ್ತು ಆದ್ಯತಾ ಪಡಿತರ ಚೀಟಿಗಳನ್ನು ಪಡೆದುಕೊಂಡಿರುವವರು ಸ್ವಯಂ ಪ್ರೇರಿತರಾಗಿ ಪಡಿತರ ಚೀಟಿಗಳನ್ನು ಹಿಂದಿರುಗಿಸುವ ಅವಧಿಯನ್ನು ಜೂ.30ರವರೆಗೆ ವಿಸ್ತರಿಸಲಾಗಿದೆ.

ಖಾಯಂ ನೌಕರರು, ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಸಂಸ್ಥೆಗಳು, ಸರ್ಕಾರಿ ಪ್ರಾಯೋಜಿತ, ಸರ್ಕಾರಿ ಸೌಮ್ಯದ ಸಂಸ್ಥೆಗಳು, ನಿಗಮಗಳು, ಸ್ವಾಯತ್ತ ಸಂಸ್ಥೆಗಳಲ್ಲಿ ನೌಕರಿಯಲ್ಲಿರುವವರು, ಆದಾಯ ತೆರಿಗೆ, ಸೇವಾ ತೆರಿಗೆ, ವ್ಯಾಟ್, ವೃತ್ತಿ ತೆರಿಗೆ ಪಾವತಿಸುವ ಕುಟುಂಬಗಳು, ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್‍ಗಿಂತ ಹೆಚ್ಚಿನ ಒಣಭೂಮಿ ಅಥವಾ ನೀರಾವರಿ ಭೂಮಿ ಹೊಂದಿರುವವರು, ನಗರ ಪ್ರದೇಶದಲ್ಲಿ 1000 ಚದರ ಅಡಿಗಿಂತ ಹೆಚ್ಚು ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು.

ಇದನ್ನೂ ಓದಿ | ಕೊರೊನಾ ಸೋಂಕು ಭೀತಿ ; ಲಾಕ್ ಡೌನ್ ನಿಂದ ಆರ್ಥಿಕ ಸಂಕಷ್ಟ : ಒಂದೇ ಕುಟುಂಬದ ನಾಲ್ವರು ನೇಣಿಗೆ ಶರಣು

ವಾರ್ಷಿಕವಾಗಿ ರೂ.1,20,000 ಆದಾಯ ಹೊಂದಿರುವ ಕುಟುಂಬಗಳು, ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನ ಹೊಂದಿರುವುದನ್ನು ಹೊರತುಪಡಿಸಿ 4 ಚಕ್ರದ ವಾಹನವನ್ನು ಹೊಂದಿರುವವರು, ಒಂದೇ ಮನೆಯಲ್ಲಿ ವಾಸವಿದ್ದು, ಒಂದಕ್ಕಿಂತ ಹೆಚ್ಚು ಪಡಿತರ ಚೀಟಿಗಳನ್ನು ಹೊಂದಿರುವವರು, ಸ್ಥಳಾಂತರಗೊಂಡಿರುವ ಕುಟುಂಬಗಳು, ಮರಣ ಹೊಂದಿರುವವರ ಹೆಸರನ್ನು ಪಡಿತರ ಚೀಟಿಯಿಂದ ತೆಗೆಸದೇ ಇರುವುದು ಬಿಪಿಎಲ್ ಪಡಿತರ ಚೀಟಿ ಹೊಂದಲು ಅನರ್ಹವಾಗಿರುತ್ತದೆ.

ಇಲಾಖೆಯಿಂದ ನಿಯಮಬಾಹಿರವಾಗಿ ಕಾರ್ಡ್ ಹೊಂದಿರುವ ಕುಟುಂಬಗಳನ್ನು ತನಿಖೆ ನಡೆಸಲಾಗುತ್ತಿದ್ದು, ಪಡಿತರ ಚೀಟಿದಾರರು ಸ್ವಯಂ ಪ್ರೇರಿತರಾಗಿ ತಾಲ್ಲೂಕು ಕಚೇರಿಯ ಆಹಾರ ಶಾಖೆಗೆ ಕೂಡಲೇ ಕಾರ್ಡ್ ಹಿಂದಿರುಗಿಸಿ ಆದ್ಯತೇತರ (ಎಪಿಎಲ್) ಪಡಿತರ ಚೀಟಿಯನ್ನು ತಕ್ಷಣ ಪಡೆಯಬಹುದು. ತಪ್ಪಿದಲ್ಲಿ ಸರ್ಕಾರದ ಆದೇಶಂತೆ ಹಾಗೂ ಭಾರತ ದಂಡ ಸಂಹಿತೆ ಅಡಿಯಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.

ಅನರ್ಹರು ಹೊಂದಿರುವ ಪಡಿತರ ಚೀಟಿಗಳನ್ನು ಸ್ವಯಂ ಪ್ರೇರಿತರಾಗಿ ಬದಲಾಯಿಸಿಕೊಳ್ಳಲು ಈ ಹಿಂದೆ ಏಪ್ರಿಲ್ 15 ಕೊನೆಯ ದಿನಾಂಕವನ್ನಾಗಿ ನಿಗದಿಪಡಿಸಲಾಗಿತ್ತು. ಈ ಅವಧಿಯನ್ನು ಇದೀಗ ಜೂ.30 ರವರೆಗೆ ವಿಸ್ತರಿಸಿ ಕೊನೆಯ ಅವಕಾಶ ನೀಡಲಾಗಿದೆ.

ಯಾವುದೇ ಪಡಿತರ ಚೀಟಿಯನ್ನು ಸ್ವಯಂ ಪ್ರೇರಿತರಾಗಿ ಬದಲಾಯಿಸಿಕೊಂಡಲ್ಲಿ ಅಂಥಹವರ ವಿರುದ್ಧ ಯಾವುದೇ ಕಾನೂನು ಕ್ರಮ ಅಥವಾ ದಂಡ ವಸೂಲಿ ಮಾಡಲಾಗುವುದಿಲ್ಲ. ಅನಧಿಕೃತವಾಗಿ ಪಡಿತರ ಚೀಟಿ ಹೊಂದಿರುವ ಕುಟುಂಬಗಳ ಮಾಹಿತಿಯನ್ನು ಸೂಕ್ತ ದಾಖಲೆ ಸಹಿತ ಆಹಾರ ಶಾಖೆಯಲ್ಲಿ ನೀಡಬಹುದಾಗಿದ್ದು, ದೂರುದಾರರ ವಿವರವನ್ನು ಗೌಪ್ಯವಾಗಿಡಲಾಗುವುದು ಎಂದು ದಾವಣಗೆರೆ ತಹಶೀಲ್ದಾರ್ ಗಿರೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

Published

on

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.

ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

Published

on

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್‌ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.

ಕೆಎಸ್‌ಆರ್‌ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

Published

on

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.

ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending