/home/u584543641/domains/suddidina.com/public_html/wp-content/themes/zox-news/amp-single.php on line 77

Warning: Trying to access array offset on value of type bool in /home/u584543641/domains/suddidina.com/public_html/wp-content/themes/zox-news/amp-single.php on line 77
" width="36" height="36">

ದಿನದ ಸುದ್ದಿ

ಅನಂತಕುಮಾರ್ ನಿಧನ; ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ, ನಾಳೆ ಶಾಲಾ- ಕಾಲೇಜು ರಜೆ

Published

on

ಸುದ್ದಿದಿನ ಬೆಂಗಳೂರು: ಕೇಂದ್ರ ಸರ್ಕಾರದ ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್ ಸೋಮವಾರ ನಿಧನರಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೂರು ದಿನ ಶೋಕಾಚರಣೆಯನ್ನು ಘೋಷಿಸಿದ್ದು, ಒಂದು ದಿನ ರಾಜ್ಯದಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ.

ಸಚಿವ ಅನಂತ್‍ಕುಮಾರ್ ಅವರಿಗೆ 59 ವರ್ಷ ವಯಸ್ಸಾಗಿದ್ದ ಅವರಿಗೆ ಶ್ವಾಸಕೋಸದ ಕ್ಯಾನ್ಸರ್‍ನಿಂದ ಬಳಲುತ್ತಿದ್ದ ಅವರು ಲಂಡನ್ ಮತ್ತು ನ್ಯೂಯಾರ್ಕ್‍ನಲ್ಲಿ ಚಿಕಿತ್ಸೆ ಪಡೆದು ಚೇತರಿಕೆ ಕಂಡಿದ್ದ ಅನಂತಕುಮಾರ್,  ಬೆಂಗಳೂರಿಗೆ ಮರಳಿ ಇಲ್ಲಿನ ಶಂಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಅನಂತಕುಮಾರ್ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಪ್ರತಿನಿಧಿಸುತ್ತಿದ್ದರು.

ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದವರಲ್ಲಿ ಅನಂತಕುಮಾರ್ ಅವರೂ ಒಬ್ಬರಾಗಿದ್ದರು. ದಕ್ಷಿಣ ಭಾರತದಲ್ಲಿ ಬಿಜೆಪಿ ಆರಂಭವಾಗಲು ಅವರು ಮಹತ್ವದ ಪಾತ್ರ ವಹಿಸಿದ್ದರು. ಎಬಿವಿಪಿ ಸಂಘಟನೆಯ ಮೂಲಕ 1987ರಲ್ಲಿ ರಾಜಕೀಯ ಪ್ರವೇಶ ಮಾಡಿದ ಅನಂತಕುಮಾರ್, ಭಾರತೀಯ ಜನತಾ ಪಕ್ಷದಲ್ಲಿ ಅನೇಕ ಹುದ್ದೆಗಳನ್ನು ನಿಭಾಯಿಸಿದ್ದಾರೆ.

ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದ ಅವರು, 1996ರಲ್ಲಿ ನಡೆದ ಚುನಾವಣೆಯಲ್ಲಿ ಗೆದ್ದು ಲೋಕಸಭೆ ಪ್ರವೇಶಿಸಿದರು. 1998ರಲ್ಲಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸಂಪುಟದಲ್ಲಿ ನಾಗರಿಕ ವಿಮಾನಯಾನ ಸಚಿವರಾದರು. 1999ರಲ್ಲಿ ಎನ್‍ಡಿಎ ಸರ್ಕಾರದ ಅವಧಿಯಲ್ಲಿ ಪ್ರವಾಸೋದ್ಯಮ ಮತ್ತು ಬಡತನ ನಿರ್ಮೂಲನೆ ಖಾತೆ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಹೀಗೆ ಅನೇಕ ಹುದ್ದೆಗಳನ್ನು ಅಲಂಕರಿಸಿದ್ದ ಅನಂತಕುಮಾರ್ ಉತ್ತಮ ವಾಗ್ಮಿಯೂ ಆಗಿ ರಾಷ್ಟ್ರ ರಾಜಕಾರಣದಲ್ಲಿ ಹೆಸರು ಮಾಡಿದವರು.

ವಿಡಿಯೋ ನೋಡಿ: 

Trending

Exit mobile version