ದಿನದ ಸುದ್ದಿ

ದಾವಣಗೆರೆ | ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ: ದಾವಣಗೆರೆ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 5 ಅಂಗನವಾಡಿ ಕಾರ್ಯಕರ್ತೆ ಮತ್ತು 82 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 9 ಕೊನೆಯ ದಿನ. ಅರ್ಜಿಯನ್ನು ವೆಬ್ ಸೈಟ್ http://karnemakaone.kar.nic.in/abcd/ ಸಲ್ಲಿಸಬಹುದು ಎಂದು ಶಿಶು ಅಭಿವೃದ್ದಿ ಯೋಜನಾಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version