Connect with us

ದಿನದ ಸುದ್ದಿ

ಅನ್ನ ಭಾಗ್ಯ ಯೋಜನೆ : ಒಂದು ಕೆಜಿ ಅಕ್ಕಿ ಖರೀದಿಗೆ ರಾಜ್ಯ ಸರ್ಕಾರ ಎಫ್ ಸಿ ಐ ಗೆ ಕೊಡುವ ಹಣ ಎಷ್ಟು ಗೊತ್ತಾ..?

Published

on

ಸುದ್ದಿದಿನ,ದ.ಕ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಪ್ರಕರಣಗಳಲ್ಲಿ ಮೃತಪಟ್ಟ ಕುಟುಂಬದವರಿಗೆ ಪರಿಹಾರ ವಿತರಿಸಿದರು.

ನ್ಯಾಷನಲ್ ಕೋ-ಆಪರೇಟಿವ್ ಕನ್ಸೂಮರ್ಸ್ ಫೆಡರೇಷನ್ ಎನ್‌ಸಿಸಿಎಫ್, ನ್ಯಾಷನಲ್ ಅಗ್ರಿಕಲ್ಚರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ ಫೆಡರೇಷನ್ ಹಾಗೂ ಕೇಂದ್ರೀಯ ಭಂಡಾರ, ಈ ಮೂರು ಸಂಸ್ಥೆಗಳು ಭಾರತ ಸರ್ಕಾರಕ್ಕೆ ಸೇರಿದ್ದು, ಈ ಮೂರು ಸಂಸ್ಥಗಳಿಂದ ಅಕ್ಕಿ ಪಡೆಯಲು ದರಪಟ್ಟಿ ಸಲ್ಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಭಾರತೀಯ ಆಹಾರ ಮಂಡಳಿಯಿಂದ 34 ರೂಪಾಯಿ ಅಕ್ಕಿ 2.60ರೂಪಾಯಿ ಸಾಗಾಣಿಕೆ ವೆಚ್ಚ ಸೇರಿ ಒಂದು ಕೆ.ಜಿ. ಅಕ್ಕಿಗೆ ಒಟ್ಟು 36.60ರೂಪಾಯಿ ವೆಚ್ಚ ತಗಲುತ್ತದೆ. ಈ ಮೂರು ಸಂಸ್ಥೆಗಳು ನಮೂದಿಸುವ ದರ, ಸರಬರಾಜು ಮಾಡುವ ಪ್ರಮಾಣಗಳ ವಿವರ ಪಡೆಯಲಾಗುವುದು ಮತ್ತು ಟೆಂಡರ್ ಮೂಲಕ ಅಕ್ಕಿ ಪಡೆಯಲೂ ಕ್ರಮ ಕೈಗೊಳ್ಳಲಾಗುವುದು ಎಂದರು.

ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ವಿತರಿಸಲು ಒಂದು ತಿಂಗಳಿಗೆ 840 ಕೋಟಿ ರೂಪಾಯಿ. ವೆಚ್ಚ ತಗುಲುತ್ತದೆ. ವರ್ಷಕ್ಕೆ 10 ಸಾವಿರದ 92 ಕೋಟಿ ವೆಚ್ಚವಾಗಲಿದ್ದು. ಸರ್ಕಾರ ಈ ವೆಚ್ಚವನ್ನು ಭರಿಸಿ ಅಕ್ಕಿಯನ್ನು ವಿತರಿಸಲು ಸಿದ್ಧವಿದೆ. ಸಾಕಷ್ಟು ಅಕ್ಕಿಯ ದಾಸ್ತಾನು ಲಭ್ಯವಿದ್ದರೂ ಕೇಂದ್ರ ಅಕ್ಕಿ ನೀಡಲು ತಾರತಮ್ಯ ತೋರುತ್ತಿದೆ. ರಾಜ್ಯದಲ್ಲಿ ರಾಗಿ, ಜೋಳವನ್ನು 6 ತಿಂಗಳವರೆಗೆ ತಲಾ 2 ಕೆಜಿ ಕೊಡುವಷ್ಟು ಮಾತ್ರ ದಾಸ್ತಾನು ಲಭ್ಯವಿದೆ. ಹಳೇ ಮೈಸೂರು ಭಾಗದ ಜನರಿಗೆ 2ಕೆಜಿ ರಾಗಿ ಹಾಗೂ ಕಲ್ಯಾಣ ಕರ್ನಾಟಕ ಹಾಗೂ ಮುಂಬೈ ಕರ್ನಾಟಕದ ಜನರಿಗೆ 2 ಕೆಜಿ ಜೋಳ ನೀಡಬಹುದು. ಇನ್ನುಳಿದ 3 ಕೆಜಿ ಅಕ್ಕಿಯನ್ನು ರಾಜ್ಯದ ಜನರಿಗೆ ನೀಡಬೇಕಾಗುತ್ತದೆ ಎಂದರು.

ಪಂಜಾಬ್ ಸರ್ಕಾರ ಕರ್ನಾಟಕಕ್ಕೆ ಅಕ್ಕಿ ಸರಬರಾಜು ಮಾಡಲು ಸಿದ್ದವಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಪಂಜಾಬ್ ನಿಂದ ಅಕ್ಕಿ ಖರೀದಿ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಚರ್ಚಿಸಿದ್ದಾರೆ. ರಾಜ್ಯ ತಿಳಿಸುವ ದರಕ್ಕೆ ಅಕ್ಕಿ ನೀಡಲು ಪಂಜಾಬ್ ಸರ್ಕಾರದೊಂದಿಗೆ ಮತ್ತೊಮ್ಮೆ ಚರ್ಚಿಸಲಾಗುವುದು ಎಂದರು.

ಜುಲೈ 1 ರಿಂದ ರಾಜ್ಯದ ಜನರಿಗೆ ಅಕ್ಕಿಯನ್ನು ನೀಡಲು ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದೆ. ಕೇಂದ್ರ ಸರ್ಕಾರದಲ್ಲಿ ಅಕ್ಕಿಯ ದಾಸ್ತಾನು ಲಭ್ಯವಿದ್ದು, ಅವರು ರಾಜ್ಯಕ್ಕೆ ಅಕ್ಕಿ ನೀಡಲು ಮನಸ್ಸು ಮಾಡಬೇಕಿದೆ. ಎಂಎಸ್‌ಪಿ ಮೂಲಕ ಅಕ್ಕಿ ಖರೀದಿಸಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಉಚಿತ ಲ್ಯಾಪ್‍ಟಾಪ್ ಪಡೆಯಲು ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್‍ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ದಾವಣಗೆರೆ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಇವರ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಬಹುದು. ಅರ್ಜಿ ನಮೂನೆಯನ್ನು ಸಂಬಂಧಿಸಿದ ಕಾರ್ಮಿಕ ನಿರೀಕ್ಷಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಾರ್ಮಿಕ ನಿರೀಕ್ಷಕರಿಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 11 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಚೇರಿ ದೂ ಸಂ:08192-237332 ಸಂಪರ್ಕಿಸಲು ಕಾರ್ಮಿಕ ಅಧಿಕಾರಿ ಇಬ್ರಾಹಿಂ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

Published

on

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ನಿನ್ನೆ ಹೇಳಿದ್ದಾರೆ.

ತಮಿಳುನಾಡಿಗೆ ನಾಳೆಯಿಂದ (ಸೆಪ್ಟಂಬರ್28) ಅಕ್ಟೋಬರ್ 15ರ ತನಕ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್‌ನಂತೆ ನೀರು ಹರಿಸುವಂತೆ, ಕಾವೇರಿ ನದಿ ನೀರು ಸಮಿತಿ ನಿನ್ನೆ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಕಾವೇರಿ ನದಿ ನೀರು ಸಮಿತಿ ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಈ ನಿರ್ದೇಶನ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

Published

on

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಶಿಕ್ಷಕ ವೃತ್ತಿ ಧರ್ಮ ನೇ ತನ್ನ ಸರ್ವಸ್ವ ಎಂದು ತಿಳಿದುಕೊಂಡಂತಹ ಶ್ರೀಮತಿ ಸುಮಂಗಳಾ ಮೇಟಿಯವರು, ಶಿಕ್ಷಕ ವೃತ್ತಿಯಲ್ಲಿ ಉತ್ತಮ ಕರ್ತವ್ಯ ಹಾಗೂ ಸೇವೆಯನ್ನು ಸಲ್ಲಿಸಿದನ್ನು ಪರಿಗಣಿಸಿ ಈ ಹಿಂದೆಯೇ 2022-23 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿ ಪ್ರಶಸ್ತಿ ಪುರಸ್ಕೃತರಾಗಿದ್ದು, ಇವರ ಶಿಕ್ಷಣ ಕ್ಷೇತ್ರದಲ್ಲಿನ ಅಗಾಧವಾದ ಕರ್ತವ್ಯ ಮತ್ತು ಸೇವೆ ನಿಷ್ಠೆಯನ್ನು ಗುರುತಿಸಿದ ಶಾಲಾ ಶಿಕ್ಷಣ ಇಲಾಖೆ ಬಳ್ಳಾರಿ ವತಿಯಿಂದ 2023-24 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಇದೇ ಸಂದರ್ಭದಲ್ಲಿ ಗ್ರಾಮಸ್ಥರು, ಸಮಸ್ತ ಶಿಕ್ಷಕರ ವರ್ಗದವರು, ಅತಿಥಿ ಶಿಕ್ಷಕರು, ಹಿತೈಷಿಗಳು, ಹಳೆಯ ವಿದ್ಯಾರ್ಥಿ ಬಳಗ, ಶಿಕ್ಷಣ ಪ್ರೇಮಿಗಳು, ಅಭಿಮಾನಿ ಬಳಗ,
ಮುಂತಾದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending