Connect with us

ದಿನದ ಸುದ್ದಿ

ಒಂಬತ್ತು ತಿಂಗಳ ಮಗಳ ಜೀವ ಉಳಿಸಿಕೊಳ್ಳಲು ಪತ್ರಕರ್ತನ ಪರದಾಟ : ನಿಮ್ಮ ಆರ್ಥಿಕ ನೆರವು ಅವರಪಾಲಿಗಿರಲಿ

Published

on

ದಾವಣಗೆರೆ ಜಿಲ್ಲೆಯ ಹೊಸಕುಂದವಾಡದ ನಿವಾಸಿ. ಸಂಜೆ ವಾಣಿ ಪತ್ರಿಕೆ ವರದಿಗಾರರಾಗಿದ್ದರು. ಕೊರೊನಾ ಸಂಕಷ್ಟದ ಕಾಲ ಕೆಲ್ಸ ಕಳೆದ ಕೊಂಡವರಲ್ಲಿ ಇವರೂ ಒಬ್ಬರು. ಈಗ ಅಕ್ಷರಶಃ ಕಣ್ಣೀರು ಹಾಕುತ್ತಿದ್ದಾರೆ. ನೌಕರಿಗಾಗಿ ಅಲ್ಲಾ. ಸಾವು ಬದುಕಿನೊಂದಿಗೆ ಹೋರಾಟ ಮಾಡುತ್ತಿರುವ ತನ್ನ ಒಂಬತ್ತು ತಿಂಗಳ ಮನಸ್ವಿ ಎಂಬ ಮಗಳನ್ನ ಉಳಿಸಿಕೊಳ್ಳಲು. ಕಾರಣ ಮಗಳಿಗೆ ರೋಗ ನಿರೋಧಕ ಶಕ್ತಿ(COMBINED IMMUNODEFICIENCY) ಇಲ್ಲ.

ಒಂದು ತಿಂಗಳಿಂದ ಬೆಂಗಳೂರಿನ ನಾರಾಯಣ ಹೃದಯಾಲಯಲ್ಲಿ ನಿತ್ಯ ಹತ್ತು ಸಾವಿರ ರೂಪಾಯಿ ಬರೀ ಔಷಧ ಕ್ಕೆ ನೀಡುತ್ತಿದ್ದಾರೆ. ಇದಕ್ಕಾಗಿ ವೈದ್ಯರು BONE MORROW TRONSPLANT ಮಾಡಬೇಕು ಎಂದು ಹೇಳಿದ್ದಾರೆ. ಇದಕ್ಕೆ 20 ರಿಂದ 25 ಲಕ್ಷ ರೂಪಾಯಿ ವೆಚ್ಚವಾಗಲಿ. ಹನಿ ಹನಿ ಕುಡಿದ್ರೆ ಹಳ್ಳ ಎನ್ನ ವಂತೆ ಸಹೃದಯರು ಸಹಾಯ ಮಾಡಿದ್ರೆ ಉಪಕಾರ ಆಗುತ್ತದೆ.

ಬ್ಯಾಂಕ್ ಅಕೌಂಟ್ ವಿವರ

Name : Annappa
Account number :2223330011389981
Ifsc code :RATNOVAAPIS
Mobile : 8660625034

ಮೇಲಿನ ಬ್ಯಾಕ್ ಖಾತೆಗೆ ನಿಮ್ಮ ಆರ್ಥಿಕ ಸಹಕಾರವಿರಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.

ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್

Published

on

ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ

Published

on

ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್‌ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.

ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending