ರಾಜಕೀಯ
ವಾರದಲ್ಲಿ ಐದು ದಿನ ಕೆಲಸ ಘೋಷಿಸಲು ಪ್ರಿಯಾಂಕ್ ಖರ್ಗೆ ಸಿಎಂಗೆ ಮನವಿ
ಸುದ್ದಿದಿನ ದಾವಣಗೆರೆ: ರಾಜ್ಯ ಸರ್ಕಾರಿ ನೌಕರರಿಗೆ ವಾರದಲ್ಲಿ ಐದು ದಿನ ಕೆಲಸ ಮಾಡುವುದನ್ನು ಘೋಷಣೆ ಮಾಡುವಂತೆ ಸಮಾಜ ಕಲ್ಯಾಣ ಮಂತ್ರಿ ಪ್ರಿಯಾಂಕ್ ಖರ್ಗೆ ಸಿಎಂ ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡಿದ್ದಾರೆ. ಈ ಕುರಿತು ಪ್ರಿಯಾಂಕ್ ಖರ್ಗೆ ಆಗಸ್ಟ್ 29ರಂದು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.
ಸದ್ಯ ವಾರದಲ್ಲಿ ಸೋಮವಾರದಿಂದ ಶನಿವಾರದ ವರೆಗೆ ಕೆಲಸ ಮಾಡುತ್ತಾರೆ. ಭಾನುವಾರ ಒಂದು ದಿನ ರಜೆ ಇರುತ್ತದೆ. ಶನಿವಾರವೂ ರಜೆ ನೀಡಿದರೆ ನೌಕರರು ಒತ್ತಡಮುಕ್ತರಾಗಿ ಕೆಲಸ ಮಾಡಲು ಅವರ ಸಾಮರ್ಥ್ಯ ಹೆಚ್ಚಿಸಲು ಅನುಕೂಲವಾಗುತ್ತದೆ. ವಾರದ ಐದು ದಿನಗಳನ್ನು ಪರಿಗಣಿಸಬಹುದು ಎಂದು ಪತ್ರದಲ್ಲಿ ತಿಳಿಸಿದ್ದಾರೆ. ರಾಜ್ಯ ನೌಕರರ ಬೇಡಿಕೆಯನ್ನು ಇಟ್ಟಿದ್ದಾರೆ ಎಂದು ಹೇಳಿದ್ದಾರೆ.