ದಿನದ ಸುದ್ದಿ
ಜೂನ್ 1 ರಿಂದಲೇ ಗ್ಯಾರಂಟಿ ಯೋಜನೆ ಘೋಷಣೆ
ಸುದ್ದಿದಿನ, ಬೆಂಗಳೂರು: ವಿಧಾನಸಭಾ ಚುನಾವಣೆ ಸಂಧರ್ಭದಲ್ಲಿ ಕಾಂಗ್ರೆಸ್ ಪಕ್ಷ ಜನತೆಗೆ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮುಂದಾಗಿದ್ದು, ಈ ಕುರಿತು ಇಂದು ಉಪಮುಖ್ಯಮಂತ್ರಿ ಹಾಗೂ ಎಲ್ಲ ಸಚಿವರ ಜತೆ ಸಮಾಲೋಚನೆ ನಡೆಸಲಿದ್ದಾರೆ.
ಈ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಟಾನದ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ಇಂದು ವಿಧಾನಸೌಧದಲ್ಲಿ ನಡೆಯುವ ಸಚಿವರುಗಳ ಸಭೆಯಲ್ಲಿ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಸಾಧಕ ಬಾಧಕಗಳ ಬಗ್ಗೆ ಚರ್ಚೆಗಳು ನಡೆಯಲಿವೆ.
ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಐದು ಗ್ಯಾರಂಟಿ ಯೋಜನೆಗಳ ಮಾರ್ಗಸೂಚಿಗಳನ್ನು ಅಂತಿಮಗೊಳಿಸಿ ಜೂನ್ 1 ರಿಂದಲೇ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆಗಳಿವೆ ಎಂದು ವಿಶ್ವಾಸನೀಯ ಮೂಲಗಳು ತಿಳಿಸಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243