ದಿನದ ಸುದ್ದಿ
ವಾರ್ಷಿಕ 9 ಲಕ್ಷ ಟನ್ ಕಾಫಿ ಉತ್ಪಾದನೆ ; ಭಾರತ ಸರ್ಕಾರದ ಗುರಿ
ಸುದ್ದಿದಿನಡೆಸ್ಕ್:ಪ್ರಸ್ತುತ ಭಾರತದಲ್ಲಿ ಪ್ರತಿ ವರ್ಷ 3.6 ರಿಂದ 4 ಲಕ್ಷ ಟನ್ ಕಾಫಿ ಉತ್ಪಾದನೆಯಾಗುತ್ತಿದ್ದು, ಮುಂಬರುವ ವರ್ಷಗಳಲ್ಲಿ 9 ಲಕ್ಷ ಟನ್ ಕಾಫಿ ಉತ್ಪಾದನೆಯ ಗುರಿಯನ್ನು ಭಾರತ ಸರ್ಕಾರ ಇಟ್ಟುಕೊಂಡಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ಅವರು, ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿಂದು ಕೇಂದ್ರೀಯ ಕಾಫಿ ಸಂಶೋಧನಾ ಸಂಸ್ಥೆಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆನೇಕ ದೇಶಗಳು ಭಾರತದ ಕಾಫಿಯನ್ನು ಆಮದು ಮಾಡಿಕೊಳ್ಳಲು ಮುಂದೆ ಬಂದಿವೆ.
ಭಾರತದ ಕಾಫಿಗೆ ಉತ್ತಮ ಬೇಡಿಕೆ ಇದೆ. ಗುಣಮಟ್ಟದ ಕಾಫಿ ಬೆಳೆಯುವುದು, ಉತ್ತಮವಾದ ಮಾರುಕಟ್ಟೆ ಒದಗಿಸುವುದು, ರಫ್ತು ಮಾಡುವುದು. ಈ ಎಲ್ಲಾ ವಿಚಾರಗಳ ಸಂಶೊಧನೆ ಮಾಡಲಾಗುತ್ತಿದ್ದು, ಮುಂಬರುವ ವರ್ಷಗಳಲ್ಲಿ 9 ಲಕ್ಷ ಟನ್ ಕಾಫಿ ಉತ್ಪಾದನೆಗೆ ಪ್ರಧಾನಿಯವರು ಕರೆ ನೀಡಿದ್ದಾರೆಂದು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್, ಸಂಸದ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದ ಟಿ.ಡಿ ರಾಜೇಗೌಡ, ಹೆಚ್.ಡಿ ತಮ್ಮಯ್ಯ, ಪರಿಷತ್ ಸದಸ್ಯ ಸಿ.ಟಿ ರವಿ, ಕಾಫಿ ಮಂಡಳಿ ಅಧ್ಯಕ್ಷ ದಿನೇಶ್ ದೇವೃಂದ ಮುಂತಾದವರು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243