ದಿನದ ಸುದ್ದಿ

ಭಯೋತ್ಪಾದಕ ವಿರೋಧಿ ದಿನಾಚರಣೆ | ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮೇ 21 ರಂದು ಭಯೋತ್ಪಾದಕ ವಿರೋಧಿ ದಿನದ ಪ್ರಯುಕ್ತ ಅಧಿಕಾರಿಗಳು ಹಾಗೂ ಸಿಬ್ಬಂದಿಯವರಿಂದ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.

ಈ ವೇಳೆ ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಅವರು ಪ್ರತಿಜ್ಞಾವಿಧಿ ಬೋಧಿಸಿ ಅಹಿಂಸೆ ಹಾಗೂ ಸಹನೆಗೆ ಹೆಸರಾದ ನಮ್ಮ ರಾಷ್ಟ್ರದ ಭವ್ಯ ಪರಂಪರೆಯಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪ್ರಜೆಗಳಾದ ನಾವು ಎಲ್ಲ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲ ಶಕ್ತಿ, ಸಾಮಥ್ರ್ಯದಿಂದ ಎದುರಿಸುತ್ತೇವೆ. ಹಾಗೂ ನಮ್ಮ ಸಹಬಾಂಧವರಲ್ಲಿ ಶಾಂತಿ, ಸಾಮಾಜಿಕ ಸೌಹಾರ್ಧತೆ ಮತ್ತು ಪರಸ್ಪರ ಅರಿವನ್ನು ಸಾಧಿಸಲು ಹಾಗೂ ಉತ್ತೇಜಿಸಲು, ಮಾನವ ಜೀವಕ್ಕೆ ಹಾಗೂ ಮೌಲ್ಯಗಳಿಗೆ ಬೆದರಿಕೆ ಒಡ್ಡುತ್ತಿರುವ ವಿಚ್ಚಿದ್ರಕಾರಿ ಶಕ್ತಿಗಳ ವಿರುದ್ದ ಹೋರಾಡಲು ಪಣ ತೊಡುತ್ತೇವೆ ಎಂದು ಪ್ರತಿಜ್ಞೆ ಸ್ವೀಕರಿಸಲಾಯಿತು.

ಇದನ್ನೂ ಓದಿ |ಪಂಚಾಯಿತಿ ಗ್ರಂಥಾಲಯಗಳಲ್ಲಿ ಡಿಜಿಟಲೀಕರಣ

ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನ್ ಭಾನು ಎಸ್.ಬಳ್ಳಾರಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಸಿದ್ದರಾಮ್ ಮರಿಹಾಳ್, ಡಿಡಿಎಲ್‍ಆರ್ ಭಾವನಾ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ | ವಾಟ್ಸಾಪ್ | 9980346243

Trending

Exit mobile version