ದಿನದ ಸುದ್ದಿ
ನೌಕರರ ಪಿಂಚಣಿ ಯೋಜನೆ ನ್ಯೂನತೆ ಸರಿಪಡಿಸಲು ಕೇಂದ್ರ ಸರ್ಕಾರಕ್ಕೆ ಮನವಿ : ಸಂಸದ ಜಿ.ಎಂ.ಸಿದ್ದೇಶ್ವರ
ಸುದ್ದಿದಿನ,ದಾವಣಗೆರೆ : ನೌಕರರ ಪಿಂಚಣಿ ಯೋಜನೆ ಇಪಿಎಸ್-95 ರಲ್ಲಿ ಆಗಿರುವ ನ್ಯೂನ್ಯತೆಯನ್ನು ಸರಿಪಡಿಸಲು ಕೇಂದ್ರ ಕಾರ್ಮಿಕ ಸಚಿವ ಭೂಪೇಂದ್ರ ಯಾದವ್ ಅವರಿಗೆ ಪತ್ರ ಬರೆಯುವುದಾಗಿ ಸಂಸದ ಜಿ.ಎಂ.ಸಿದ್ದೇಶ್ವರ ತಿಳಿಸಿದ್ದಾರೆ.
ಗುರುವಾರ ದಾವಣಗೆರೆಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಸುಮಾರು 75 ಲಕ್ಷ ಇಪಿಎಸ್- 95 ಯೋಜನೆಯಡಿ ಪಿಂಚಣಿದಾರರಿದ್ದು, ಯೋಜನೆಯಲ್ಲಿ ಕೆಲ ನ್ಯೂನತೆಗಳಿದ್ದು, ಅವುಗಳನ್ನು ಸರಿಪಡಿಸಿ ಪಿಂಚಣಿದಾರರಿಗೆ ಅನುಕೂಲ ಕಲ್ಪಿಸಲಾಗುವುದು ಎಂದರು.
ಕಳೆದ 7ವರ್ಷಗಳಿಂದ ಸಾಮಾಜಿಕ ಭದ್ರತೆಗಾಗಿ ಪ್ರತಿ ತಿಂಗಳು ಅತ್ಯಂತ ಕಡಿಮೆ ಪಿಂಚಣಿ ಪಡೆಯುತ್ತಿರುವ ದೇಶದ 75 ಲಕ್ಷ ಪಿಂಚಣಿದಾರರ ಪರವಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಲಾಗುವುದು ಎಂದು ಅವರು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243