ಲೈಫ್ ಸ್ಟೈಲ್
ಸೇಬುಹಣ್ಣುತಿನ್ನಿ ಡಾಕ್ಟರ್ ರಿಂದ ದೂರವಿರಿ..!
‘An apple a day keeps you away from doctor‘ ಎಂಬ ಇಂಗ್ಲೀಷ್ ವಾಕ್ಯ ನಮಗೆ ಗೊತ್ತಿದೆ. ಏಕೆ ಹಾಗೆ ಹೇಳುತ್ತಾರೆ? ಅದರಿಂದ ಎನ್ನು ಉಪಯೋಗಗಳು ಇವೇ ಎಂಬ ಪುಟ್ಟ ಮಾಹಿತಿ ಇಲ್ಲಿದೆ.
- ಸೇಬು ಹಣ್ಣನ್ನು ಹಲ್ಲಿನಿಂದಲೇ ಕಚ್ಚಿ ಸಿಪ್ಪೆ ಸಹಿತ ಊಟವಾದ ನಂತರವೇ ತಿನ್ನಬೇಕು. ಅದರಿಂದ ದೈಹಿಕ ಬೆಳವಣಿಗೆ ಚನ್ನಗಿ ಆಗುತ್ತದೆ, ಜ್ಞಾಪಕಶಕ್ತಿ ಹೆಚ್ಚುತ್ತದೆ.
- ಹಲ್ಲುಗಳಿಂದ ಸೇಬನ್ನು ಕಚ್ಚಿ ತಿನ್ನುವುದರಿಂದ ಹಲ್ಲುಗಳ ಹೊಳಪು ಹೆಚ್ಚಿ ವಸಡುಗಳು ಸಹ ಗಟ್ಟಿಯಾಗುತ್ತವೆ.
- ಎ.ಬಿ.ಸಿ. ಮೂರು ಜೀವಸತ್ವಗಳು ತುಂಬಿರುವ ಸೇಬಿನಹಣ್ಣನ್ನು ಸೇವಿಸುವುದರಿಂದ ದೇಹಬಲ ಹೆಚ್ಚಿ ದಣಿದ ನರಗಳಲ್ಲಿ ಶಕ್ತಿ ಸಂಚಾರವಾಗುವುದು.
- ಊಟವಾದ ನಂತರ ನಿರಂತರವಾಗಿ 44 ದಿನಗಳವರಿಗೆ ಸೇಬಿನಹಣ್ಣನ್ನು ಭಕ್ಷಿಸಿದರೆ ಕಫ ಕಟ್ಣವ ಸಾಧ್ಯತೆ ಇರುವುದಿಲ್ಲ.
- ಸೇಬಿನ ಹೋಳುಗಳನ್ನು ಉಪ್ಪು ಸಹಿತ ನಿರಂತರ ಇಪ್ಪತ್ತು ದಿನಗಳ ಕಾಲ ತಿಂದರೆ ಅರ್ಧ ತಲೆನೋವು ಹೋಗುವುದು.
- ಸೇಬಿನ ಹಣ್ಣನ್ನು ಹಾಗೂ ನಿಂಬೆಹಣ್ಣಿನ ಸಿಪ್ಪೆಗಳನ್ನು ಬಿಸಿಲಿನಲ್ಲಿ ಚೆನ್ನಾಗಿ ಒಣಗಿಸಿದ ನಂತರ ನುಣ್ಣಗೆ ಅರೆದು ಚೂರ್ಣವನ್ನು ತಯಾರಿಸಿ ಕೊಂಡು ಅದನ್ನು ಹಾಲಿನಲ್ಲಿ ಕಲಸಿ ಮೊಡವೆಗಳಿಗೆ ಹಚ್ಚಿದರೆ ಮೊಡವೆಗಳೂ ಮಾಯವಾಗಿ ಹೋಗುವವು.
- ಮೊಲೆಹಾಲನ್ನು ಸೇವಿಸುತ್ತಿರುವ ಮಗುವಿಗೆ ಭೇದಿಯಾದರೆ ಮೊಲೆ ಹಾಲು ಕೊಡುವುದನ್ನು ನಿಲ್ಲಿಸಿ ಸಿಪ್ಪೆ ತೆಗೆದ ಹೋಳು ಮಾಡಿದ ಸೇಬಿನ ಹಣ್ಣುಗಳನ್ನು ಚೆನ್ನಾಗಿ ಬೇಯಿಸಿ ನಂತರ ಅದನ್ನು ಚೆನ್ನಾಗಿ ಕಿವುಚಿ ಸೋಸಿದ ನಂತರ ಹಾಲಿನ ಬದಲಿಗೆ ಅದನ್ನು ಕುಡಿಸಿದರೆ ಆಗ ತಕ್ಷಣ ಭೇದಿ ನಿಂತು ಹೋಗಿ ಆರೋಗ್ಯ ಸುಧಾರಿಸುವುದು.
- ಅಲ್ಸರ್ ನಿಂದ ನರಳುತ್ತಿರುವ ರೋಗಿಗಳು ಸೇಬಿನ ಹಣ್ಣಿನ ರಸವನ್ನು ದೀರ್ಘಕಾಲ ಸೇವಿಸುತ್ತಾ ಬಂದರೆ ಖಾಯಿಲೆ ಮಾಯವಾಗುವುದು.
- ಮೊಡವೆ ನಿವಾರಣೆಯಾಗಿ ಮುಖದ ಕಾಂತಿ ಹೆಚ್ಚಿಸಲು ಸೇಬಿನ ತಿರುಳನ್ನು ಅರೆದು ಮುಖಕ್ಕೆ ಲೇಪಿಸಿಕೊಳ್ಳಬೇಕು.
- ಸೇಬಿನ ಹಣ್ಣಿನ ಹೋಳುಗಳನ್ನು ಹೆಚ್ಚಿ ಶುದ್ಧವಾದ ಜೇನುತುಪ್ಪದಲ್ಲಿ 24 ಗಂಟೆಗಳ ಕಾಲ ನೆನೆ ಹಾಕಬೇಕು. ನಂತರ ಅದಕ್ಕೆ ಗುಲಾಬಿಯ ದಳಗಳನ್ನು ಸೇರಿಸಿ ಬಿಸಿಲಿನಲ್ಲಿ ಒಣಗಿಸಬೇಕು. ಒಂದು ವಾರದ ನಂತರ ಈ ರಸಾಯನವನ್ನು ಹಾಲಿನ ಜೊತೆಗೆ ಕುಡಿಯಬೇಕು. ಮೂರು ವೇಳೆ ಒಂದು ಚಮಚದಷ್ಟು ಪ್ರತಿನಿತ್ಯ ಸೇವಿಸುವುದರಿಂದ ನರಗಳಲ್ಲಿ ನವಚೈತನ್ಯ ತುಂಬಿಕೊಂಡು ನರಗಳ ದೌರ್ಬಲ್ಯದ ಖಾಯಿಲೆ ಇಲದಲವಾಗುವುವು.
- ಯಕೃತ್ತಿನ ತೊಂದರೆ, ಸಂಧಿವಾತ ಮತ್ತು ಮಲಕಟ್ಟು ರೋಗಗಳ ಸುಧಾರಿಸಲು ಸೇಬನ್ನು ಸಿಪ್ಪೆಯ ಸಹಿತ ಪ್ರತಿನಿತ್ಯ ತಿನ್ನುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು.
- ಸೇಬನ್ನು ದಿನನಿತ್ಯ ಸೇವಿಸಿದರೆ ದಾಹ ನಾಶವಾಗುತ್ತದೆ. ಜೀರ್ಣಶಕ್ತಿ ಹೆಚ್ಚುತ್ತದೆ. ಸ್ಮರಣಶಕ್ತಿಯು ಕುಂದಿದ್ದರೆ ಇದನ್ನು ಸೇವಿಸಿದರೆ ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್
ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.
ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.
ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.
ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ದಾವಣಗೆರೆಯ ಪಾಪು ಗುರು ಆಯ್ಕೆ
ಸುದ್ದಿದಿನ,ದಾವಣಗೆರೆ: ಕವಿ ಗವಿಸಿದ್ಧ ಎನ್. ಬಳ್ಳಾರಿ ವೇದಿಕೆ ಹಾಗೂ ಗವಿಸಿದ್ಧ ಎನ್. ಬಳ್ಳಾರಿ ಸಾಂಸ್ಕೃತಿಕ, ಕಲಾ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ, ಕೊಪ್ಪಳ ವತಿಯಿಂದ ನೀಡಲಾಗುವ **”ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ – 2026″**ಕ್ಕೆ ದಾವಣಗೆರೆಯ ಕವಿ ಹಾಗೂ ಪತ್ರಕರ್ತ ಪಾಪು ಗುರು ಅವರ “ಈ ಹೊತ್ತಿಗೆ ಇಷ್ಟು ಸಾಕು” ಕವನ ಹಸ್ತ ಪ್ರತಿ ಆಯ್ಕೆಯಾಗಿದೆ.
ಪ್ರಶಸ್ತಿಗೆ ಈ ಬಾರಿ ರಾಜ್ಯದ ವಿವಿಧ ಭಾಗಗಳಿಂದ ಒಟ್ಟು 53 ಕವನ ಹಸ್ತಪ್ರತಿಗಳು ಬಂದಿದ್ದು, ಅಂತಿಮ ಆಯ್ಕೆ ಪ್ರಕ್ರಿಯೆಯಲ್ಲಿ ಪಾಪು ಗುರು ಅವರ ಕೃತಿ ಪ್ರಶಸ್ತಿಗೆ ಪಾತ್ರವಾಗಿದೆ.
ಪ್ರಶಸ್ತಿಯು ₹5,000 ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ನವೆಂಬರ್ ತಿಂಗಳಲ್ಲಿ ಕೊಪ್ಪಳದಲ್ಲಿ ನಡೆಯಲಿರುವ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ಸಾಹಿತ್ಯೋತ್ಸವದ ಸಂಚಾಲಕ ಮಹೇಶ್ ಬಳ್ಳಾರಿ ತಿಳಿಸಿದ್ದಾರೆ.
ಈಗಾಗಲೇ ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಪಾಪು ಗುರು ಅವರ ‘ಮುಳ್ಳೆಲೆಯ ಮದ್ದು’, ‘ಮಣ್ಣೇ ಮೊದಲು’ ಕವನ ಸಂಕಲನಗಳು ಹಾಗೂ ‘ಸೂಜಿ’ ಕಾದಂಬರಿ ಪ್ರಕಟವಾಗಿವೆ. ಅಲ್ಲದೆ ‘ಕೆಂಪು ಕಾಂಡದ ಹೂ’ ಮತ್ತು ‘ಹಸಿರು ಹಾದಿಯ ಹೆಜ್ಜೆಗಳು’ ಕೃತಿಗಳನ್ನು ಸಂಪಾದನೆ ಮಾಡಿದ್ದಾರೆ. ಅವರ ಸೂಳೆಕೆರೆಯ ಇತಿಹಾಸದ ಹಿನ್ನೆಲೆ ಇರುವ ‘ಶಾಂತದೇವಿ’ ಕಾದಂಬರಿ ಮುದ್ರಣ ಹಂತದಲ್ಲಿದೆ.
ಸಾಹಿತ್ಯ, ಪತ್ರಿಕೋದ್ಯಮ ಮತ್ತು ಸೃಜನಶೀಲ ಬರವಣಿಗೆಯ ಮೂಲಕ ತಮ್ಮದೇ ಆದ ಛಾಪು ಮೂಡಿಸಿರುವ ಪಾಪು ಗುರು ಅವರಿಗೆ ದೊರೆತಿರುವ ಈ ಪ್ರಶಸ್ತಿ ಸಾಹಿತ್ಯ ವಲಯದಲ್ಲಿ ಸಂತಸಕ್ಕೆ ಕಾರಣವಾಗಿದೆ. ಇವರಿಗೆ ಜಿಲ್ಲೆಯ ಅಭಿಮಾನಿಗಳು, ಪತ್ರಕರ್ತರು ಮತ್ತು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಸಾಹಿತಿ ಸಂತೆಬೆನ್ನೂರು ಫೈಜ್ನಟ್ರಾಜ್ ಹಾಗೂ ಹೆಚ್ ಬಿ. ಇಂದ್ರಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


