Connect with us

ದಿನದ ಸುದ್ದಿ

ನ್ಯಾಯಾಧಿಕರಣದಲ್ಲಿ ತರಬೇತಿ ನೀಡಲು ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: 2021-22ನೇ ಸಾಲಿನಲ್ಲಿ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಧೀಕರಣದಲ್ಲಿ ತರಬೇತಿ ನೀಡಲು ಕಾನೂನು ಪದವಿ ಹೊಂದಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಜಿಲ್ಲೆಗೆ 08 ಭೌತಿಕ ಗುರಿಯನ್ನು ನಿಗದಿಪಡಿಸಲಾಗಿದ್ದು, ಪರಿಶಿಷ್ಟ ಪಂಗಡದ ಕಾನೂನು ಪದವೀಧರರು ಆಡಳಿತ ನ್ಯಾಯಧೀಕರಣದಲ್ಲಿ ತರಬೇತಿ ಪಡೆಯಲು ಅರ್ಜಿಗಳನ್ನು ಆನ್‍ಲೈನ್ ಮೂಲಕ ಸಲ್ಲಿಸಬೇಕು.

ಅದರಂತೆ ಜಿಲ್ಲೆಯ ಪರಿಶಿಷ್ಟ ಪಂಗಡದ ಕಾನೂನು ಪದವಿ ಹೊಂದಿರುವ ಅಭ್ಯರ್ಥಿಗಳು ಇಲಾಖೆಯ ವೆಬ್‍ಸೈಟ್/ವಿಳಾಸ: www.tw.kar.nic.in ನಲ್ಲಿ ಮೇ.01 ರಿಂದ ಜೂ.31 ರವರೆಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ, ಸೂಕ್ತ ದಾಖಲೆಗಳನ್ನು ಗೆಜೆಟೆಡ್ ಅಧಿಕಾರಿಗಳವರಿಂದ ದೃಢೀಕರಿಸಿ, ಆಯಾ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳವರ ಕಚೇರಿಗೆ ಸಲ್ಲಿಸಬೇಕು. ತದನಂತರ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಅರ್ಜಿ ಸಲ್ಲಿಸಲು ಗೊತ್ತುಪಡಿಸಿದ ಕೊನೆಯ ದಿನಾಂಕಕ್ಕೆ ಕಾನೂನು ಪದವಿಯನ್ನು ಪಡೆದು ಎರಡು ವರ್ಷ ಮೀರಿರಬಾರದು. ತರಬೇತಿಯನ್ನು ದಾವಣಗೆರೆ ಜಿಲ್ಲೆಯಲ್ಲಿಯೇ ಪಡೆಯಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯ ವಯಸ್ಸು 40 ವರ್ಷಮೀರಿರಬಾರದು.
ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯು ಸರ್ಕಾರದ ಪರಿಷ್ಕøತ ಆದೇಶದಂತೆ 02 ವರ್ಷದಾಗಿದ್ದು, ಮಾಸಿಕ ರೂ.10,000/-ಗಳಂತೆ ಶಿಷ್ಯವೇತನವನ್ನು ನೀಡಲಾಗುವುದು.

ಪರಿಶಿಷ್ಟ ವರ್ಗದ ಕಾನೂನು ಪದವೀಧರರ ವಾರ್ಷಿಕ ವರಮಾನ ಮಿತಿ ರೂ.2 ಲಕ್ಷಗಳ ಒಳಗಾಗಿ ಇರತಕ್ಕದ್ದು. ಆಯ್ಕೆಯಾದ ಅಭ್ಯರ್ಥಿಗಳು ಜಿಲ್ಲಾ ಪ್ರಾಸಿಕ್ಯೂಟರ್ ಸರ್ಕಾರಿ ವಕೀಲರು ಅಥವಾ 20 ವರ್ಷಗಳ ಕಾಲ ಕಡಿಮೆ ಇಲ್ಲದ ವಕೀಲ ವೃತ್ತಿಯಲ್ಲಿ ಸೇವೆ ಸಲ್ಲಿಸಿರುವ ನ್ಯಾಯವಾದಿಗಳ ಬಳಿ ತರಬೇತಿ ಪಡೆಯಬೇಕು.

ತರಬೇತಿ ಅವಧಿ 2 ವರ್ಷವಿದ್ದು, ಆಯ್ಕೆಯಾದ ಅಭ್ಯರ್ಥಿಗಳು ತರಬೇತಿಯನ್ನು ಮಧ್ಯದಲ್ಲಿ ಬಿಡುವ ಹಾಗಿಲ್ಲ. ಹಾಗೂ ಒಂದು ವೇಳೆ ಬಿಟ್ಟರೆ ತರಬೇತಿ ಅವಧಿಯಲ್ಲಿ ಪಡೆದ ಶಿಷ್ಯವೇತನಕ್ಕೆ ಶೇ.10 ಬಡ್ಡಿಯೊಂದಿಗೆ ಸರ್ಕಾರಕ್ಕೆ ಹಿಂದಿರುಗಿಸುವುದಾಗಿ ಮುಚ್ಚಳಿಕೆ ಪತ್ರ ಬರೆದು ಕೊಡಬೇಕು.

ಆಯ್ಕೆಯಾದ ಅಭ್ಯರ್ಥಿಗಳು ಸುಳ್ಳು ಮಾಹಿತಿ ಹಾಗೂ ಸುಳ್ಳು ದಾಖಲಾತಿಗಳನ್ನು ನೀಡಿ, ಆಯ್ಕೆಯಾಗಿ ಶಿಷ್ಯವೇತನವನ್ನು ಪಡೆದರೆ ಅಂತಹ ಅಭ್ಯರ್ಥಿಗಳು ತರಬೇತಿ ಅವಧಿಯಲ್ಲಿ ಪಡೆದ ಶಿಷ್ಯವೇತನವನ್ನು ಶೇ.10 ರಷ್ಟು ಬಡ್ಡಿಯೊಂದಿಗೆ ಕಾನೂನು ರೀತ್ಯಾ ವಸೂಲಿಗೆ ಕ್ರಮ ವಹಿಸುವುದು ಅಥವಾ ಭೂ ಕಂದಾಯ ಬಾಕಿ ವಸೂಲಿಯಂತೆ ವಸೂಲು ಮಾಡಲಾಗುವುದು.

ಆನ್‍ಲೈನ್‍ನಲ್ಲಿ ಅಪ್‍ಲೋಡ್ ಮಾಡಿರುವ ಎಲ್ಲಾ ದಾಖಲಾತಿಗಳ 02 ಸೆಟ್‍ಗಳನ್ನು ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿ ಜಿಲ್ಲಾ ಕಚೇರಿಗೆ ಸಲ್ಲಿಸುವುದು. ತಪ್ಪಿದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದೆಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ “ಕುಕಿಂಗ್ ವಿಥೌಟ್ ಫೈರ್” ಎಂಬ ಬೆಂಕಿ ರಹಿತ ಆಹಾರ ತಯಾರಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಹಲವಾರು ತಂಡಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ಅಂಗವಾಗಿ ಆಹಾರ ಮೇಳವೂ ಏರ್ಪಡಿಸಲಾಯಿತು. ವಿದ್ಯಾರ್ಥಿನಿಯರು ಕಾರಟ್ ಹಲ್ವಾ, ಫ್ರೂಟ್ ಸಲಾಡ್, ಚುರಿ ಮುರಿ, ಮೊಸರು ಅವಲಕ್ಕಿ, ವಿವಿಧ ರುಚಿಯ ಜ್ಯೂಸ್‌ಗಳು, ಕೊಕೊನೆಟ್ ಬರ್ಫಿ, ಕುಕುಂಬರ್ ಬೋಟ್, ಟೊಮೇಟೊ ಚಾಟ್, ಆಪಲ್ ಪೇಡ ಮತ್ತು ಅವಲಕ್ಕಿ ಚಿತ್ರಾನ್ನ ಸೇರಿದಂತೆ ಹಲವಾರು ಪೌಷ್ಟಿಕ ಹಾಗೂ ರುಚಿಕರ ಆಹಾರಗಳನ್ನು ತಯಾರಿಸಿ ಪ್ರದರ್ಶನೆ ಮತ್ತು ಮಾರಾಟ ಮಾಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಪಾಲ್ಗೊಂಡು ಯಶಸ್ವಿ ಕಾರ್ಯಕ್ರಮವನ್ನಾಗಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ

Published

on

ಸುದ್ದಿದಿನ,ದಾವಣಗೆರೆ: ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್‌ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30, 2026 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ.

ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ.

ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಮತ್ತು ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಹಿರಿಯ ಕ್ರಿಕೆಟ್ ಪಟು ಎನ್ಆರ್‌ಎಚ್ ರಮೇಶ್ ನಿಧನ

Published

on

ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್‌ಎಚ್‌ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್‌ನ ನಾಯಕನಾಗಿದ್ದ ಎನ್.ಆರ್‌.ಎಚ್‌.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್‌, 2ನೇ ಮೇನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.

90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್‌ ಬಾಲ್‌ ಕ್ರಿಕೆಟ್‌ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್‌ಎಚ್‌ ರಮೇಶ ನಿಧನಕ್ಕೆ ಎಫ್‌ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್‌ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್‌ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending