ದಿನದ ಸುದ್ದಿ
ಅಲ್ಪಸಂಖ್ಯಾತರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
ಸುದ್ದಿದಿನ ,ಶಿವಮೊಗ್ಗ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2020-21ನೇ ಸಾಲಿನಲ್ಲಿ ಶಿಕಾರಿಪುರ ಮತ್ತು ಸಾಗರ ತಾಲ್ಲೂಕಿನ ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ/ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳ ಪ್ರವೇಶಾತಿಗೆ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ದ, ಪಾರ್ಸಿ ಹಾಗೂ ಇತರೆ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಆಯಾ ವಿದ್ಯಾರ್ಥಿನಿಲಯಗಳಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ದಿ:15-02-2021 ರೊಳಗಾಗಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಾಗರ ಉಪವಿಭಾಗದ ವಿಸ್ತರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ಕಛೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 9900132234ನ್ನು ಸಂಪರ್ಕಿಸುವುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243