ದಿನದ ಸುದ್ದಿ

ಕೃಷಿ ಪಂಡಿತ ಮತ್ತು ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಕೃಷಿ ಇಲಾಖೆಯು 2021-22ನೇ ಸಾಲಿಗೆ ಕೃಷಿ ಪಂಡಿತ ಪ್ರಶಸ್ತಿ, ಆತ್ಮ ಯೋಜನೆಯ ತಾಲ್ಲೂಕು ಮಟ್ಟ, ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಹಾಗೂ ಜಿಲ್ಲಾ ಮಟ್ಟದ ಆಸಕ್ತ ಗುಂಪು ಪ್ರಶಸ್ತಿಗೆ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ.

ಅರ್ಜಿಗಳನ್ನು ಸಂಬಂಧಪಟ್ಟ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಜುಲೈ 20 ರ ಒಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದಾವಣಗೆರೆ ಜಿಲ್ಲೆಯ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಅಥವಾ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಕಚೇರಿಯ ವೇಳೆಯಲ್ಲಿ ಸಂಪರ್ಕಿಸಬಹುದೆಂದು ಉಪ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version