ದಿನದ ಸುದ್ದಿ

ವಾರ್ತಾಇಲಾಖೆ : ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ ಸಾಲಿನ ಮಹಿಳಾ ಉದ್ದೇಶಿತ ಆಯವ್ಯದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳಡಿ ಪತ್ರಿಕೋದ್ಯಮ ಪದವಿ ಪಡೆದಿರುವ ಇಬ್ಬರು ಮಹಿಳಾ ಅಭ್ಯರ್ಥಿಗಳಿಗೆ 10 ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದ್ದು, ಆಸಕ್ತ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಇಬ್ಬರು ಮಹಿಳಾ ಅಭ್ಯರ್ಥಿಗಳನ್ನು ಮೆರಿಟ್ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್‍ಗೆ ಮಾಹೆಯಾನ 15 ಸಾವಿರ ರೂ. ಗಳ ಸ್ಟೈಫೆಂಡ್ ನೀಡಲಾಗುವುದು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆವತಿಯಿಂದ ಕ್ಷೇತ್ರ ಪ್ರಚಾರ, ಸುದ್ದಿ ಸಂಗ್ರಹ ಮತ್ತು ರಚನೆ ಕುರಿತಂತೆ ತರಬೇತಿ ನೀಡಲಾಗುವುದು.

ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು, ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ ಹೊಂದಿರಬೇಕು. ವಯೋಮಿತಿಯು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು 40 ವರ್ಷದೊಳಗಿರಬೇಕು. ಆಯ್ಕೆಯಾದ ಅಭ್ಯರ್ಥಿಗಳು ತರಬೇತಿ ಅವಧಿಯಲ್ಲಿ ಬೇರೆ ಉದ್ಯೋಗ ಮಾಡುವಂತಿಲ್ಲ.

ಅರ್ಜಿಯೊಂದಿಗೆ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಪದವಿ/ ಸ್ನಾತಕೋತ್ತರ ಪದವಿ ಪ್ರಮಾಣಪತ್ರ, ಜಾತಿ ಪ್ರಮಾಣಪತ್ರ, ಪಾಸ್‍ಪೋರ್ಟ್ ಅಳತೆಯ 02 ಭಾವಚಿತ್ರ, ಕಂಪ್ಯೂಟರ್ ಜ್ಞಾನ ಹೊಂದಿರುವ ಕುರಿತ ಪೂರಕ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ಜ. 28 ರ ಒಳಗಾಗಿ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದೇವರಾಜ ಅರಸ್ ಬಡಾವಣೆ, ದಾವಣಗೆರೆ ಇವರಿಗೆ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಇದೇ ಕಚೇರಿಯಿಂದ ಪಡೆದುಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version