ದಿನದ ಸುದ್ದಿ

688 ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಜುಲೈ 5 ಕೊನೇ ದಿನ

Published

on

ಸುದ್ದಿದಿನ ಡೆಸ್ಕ್ : ರಾಜ್ಯದ ಪೊಲೀಸ್ ಇಲಾಖೆಯ 688 ಸಶಸ್ತ್ರ ಪೊಲೀಸ್ ಕಾನ್‌ಸ್ಟೆಬಲ್ (ಪುರುಷ), (ಸಿಎಆರ್ ಮತ್ತು ಡಿಎಆರ್) ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದ್ದು, ಜುಲೈ 5 ಅರ್ಜಿ ಸಲ್ಲಿಸಲು ಕೊನೇ ದಿನವಾಗಿದೆ.

ವಿದ್ಯಾರ್ಹತೆ: ಪಿಯುಸಿ ಅಥವಾ ತತ್ಸಮಾನ ಶಿಕ್ಷಣ ಪೂರೈಸಿರಬೇಕು. ಕನಿಷ್ಠ 18 ವರ್ಷ ಹಾಗೂ ಗರಿಷ್ಠ 25 ವರ್ಷ ವಯೋಮಾನದವರು ಮಾತ್ರ ಅರ್ಜಿ ಸಲ್ಲಿಸಬೇಕು. ಕೆಲ ವರ್ಗಗಳಿಗೆ ವಯೋಮಿತಿ ಸಡಿಲಿಕೆ ಇದೆ.

ಶುಲ್ಕ: ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 250 ರೂ. ಹಾಗೂ ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ.

ಆಯ್ಕೆ ವಿಧಾನ: ದೈಹಿಕ ಪರೀಕ್ಷೆಗಳಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಗೆ ಆಹ್ವಾನಿಸಲಾಗುತ್ತದೆ. ಲಿಖಿತ ಪರೀಕ್ಷೆ (ಬಹುಆಯ್ಕೆ ಮಾದರಿ ಪ್ರಶ್ನೆಪತ್ರಿಕೆ), ಮೌಖಿಕ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆಗಳ ನಂತರ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ನಡೆಯುತ್ತದೆ.

ದೇಹದಾರ್ಢ್ಯತೆ ಪರೀಕ್ಷೆ: ಕನಿಷ್ಠ 168 ಸೆಂ.ಮೀ. ಎತ್ತರ ಮತ್ತು ಎದೆಯ ಸುತ್ತಳತೆ 86 ಸೆಂ.ಮೀ. ಹೊಂದಿರಬೇಕು. ಬುಡಕಟ್ಟು ಸಮುದಾಯದ ಅಭ್ಯರ್ಥಿಗಳು ಕನಿಷ್ಠ ಎತ್ತರ 155 ಸೆಂ.ಮೀ. ಇರಬೇಕು.1,600 ಮೀ. ಓಟ, ಉದ್ದ ಜಿಗಿತ, ಎತ್ತರ ಜಿಗಿತ ಮತ್ತು ಗುಂಡು ಎಸೆತದಂತಹ ಕ್ರೀಡೆಗಳ ಮೂಲಕ ದೈಹಿಕ ಸಾಮರ್ಥ್ಯ ಪರೀಕ್ಷೆ ನಡೆಸಲಾಗುತ್ತದೆ.

ಹೆಚ್ಚಿನ ಮಾಹಿತಿ ಮತ್ತು ಅರ್ಜಿ ಹಾಕಲು ಇಲಾಖೆಯ ವೆಬ್‌ಸೈಟ್www.ksp.gov.in or rec18.ksp-online.inಇಲ್ಲಿ ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Leave a Reply

Your email address will not be published. Required fields are marked *

Trending

Exit mobile version