ದಿನದ ಸುದ್ದಿ

ಖಾಸಗಿ ವಾಹನಗಳ ನಿರ್ವಾಹಕ-ಕ್ಲೀನರ್ ನೋಂದಣಿಗೆ ಅರ್ಜಿ ಆಹ್ವಾನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಕಾರ್ಮಿಕರ ಅಪಘಾತ ಪರಿಹಾರ ಯೋಜನೆಯಡಿ ಖಾಸಗಿ ವಾಣಿಜ್ಯ ಸಾರಿಗೆ ವಾಹನಗಳ ನಿರ್ವಾಹಕರು ಹಾಗೂ ಕ್ಲೀನರ್‍ಗಳಿಗೆ ನೋಂದಣಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಜಿಲ್ಲಾ ಕಾರ್ಮಿಕ ಅಧಿಕಾರಿ ಕಛೇರಿಯಿಂದ ಪಡೆದುಕೊಂಡು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ಕಾರ್ಮಿಕ ಅಧಿಕಾರಿಗಳ ಕಛೇರಿ, ದಾವಣಗೆರೆ ಡಿ. ದೇವರಾಜ ಅರಸ ಬಡಾವಣೆ, ‘ಎ’ ಬ್ಲಾಕ್, ದಾವಣಗೆರೆ, ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಕಛೇರಿ ಕಟ್ಟಡ ಪಿ.ಬಿ ರಸ್ತೆ, ದಾವಣಗೆರೆ ಇಲ್ಲಿ ನೋಂದಾಯಿಸಿಕೊಂಡು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಕಾರ್ಮಿಕ ಅಧಿಕಾರಿ ಇಬ್ರಾಹಿಂ ಸಾಬ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ | ಅವಧಿ ಮೀರಿದ 9 ಲಕ್ಷ ಮೌಲ್ಯದ ಬಿಯರ್ ದಾಸ್ತಾನು ನಿಯಾನುಸಾರ ನಾಶ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version