ದಿನದ ಸುದ್ದಿ
ವಿಕಲಚೇತನರ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಕೆ : ಕೊನೆಯ ದಿನಾಂಕ ವಿಸ್ತರಣೆ
ಸುದ್ದಿದಿನ,ಕಲಬುರಗಿ: ಕಲಬುರಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಚೇರಿಯಿಂದ 2020-21ನೇ ಸಾಲಿಗಾಗಿ ವಿಕಲಚೇತನರ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನ ಹಾಗೂ ಶುಲ್ಕ ಮರುಪಾವತಿ ಯೋಜನೆಯಡಿ ಅರ್ಹ ವಿಕಲಚೇತನರ ವಿದ್ಯಾರ್ಥಿಗಳಿಂದ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 2021ರ ಮಾರ್ಚ್ 5 ರವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ಯುವ ಸಬಲೀಕರಣ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಈ ಹಿಂದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 2021ರ ಫೆಬ್ರವರಿ 19 ರಂದು ನಿಗದಿಪಡಿಸಲಾಗಿತ್ತು, ಆದರೆ ಈಗ ಶಾಲಾ-ಕಾಲೇಜುಗಳು ತಡವಾಗಿ ಪ್ರಾರಂಭಿಸಿರುವ ಹಿನ್ನೆಲೆ ಹಾಗೂ ಈ ಯೋಜನೆಯಡಿ ಹೆಚ್ಚಿನ ಫಲಾನುಭವಿಗಳು ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ಈ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.
ಇದನ್ನೂ ಓದಿ | ದಾವಣಗೆರೆ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ : ಮೇಯರ್ ಆಗಿ ಎಸ್.ಟಿ.ವೀರೇಶ್, ಉಪಮೇಯರ್ ಆಗಿ ಶಿಲ್ಪಾ ಜಯಪ್ರಕಾಶ್
ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಅಥವಾ ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ತಾಲೂಕು ಪಂಚಾಯತ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಕಲಬುರಗಿ ಜಿಲ್ಲಾ ವಿಕಲಚೇತನರ ಹಾಗೂ ಸಬಲೀಕರಣ ಕಚೇರಿಯಲ್ಲಿ ಸಲ್ಲಿಸಬೇಕು.
ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ದೂರವಾಣಿ ಸಂಖ್ಯೆ 08472-235222, ಕಲಬುರಗಿ ತಾಲೂಕು ಪಂಚಾಯತ ಕಚೇರಿಯ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು (ಎಮ್.ಆರ್.ಡಬ್ಲ್ಯೂ) ಮೊಬೈಲ್ ಸಂಖ್ಯೆ 9972079714, ಅಫಜಲಪೂರ-9448808141, ಆಳಂದ-9483054495, ಜೇವರ್ಗಿ-9741875881, ಚಿತ್ತಾಪೂರ-9845204328, ಚಿಂಚೋಳಿ-9880671171, ಸೇಡಂ-9902417925 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243