ದಿನದ ಸುದ್ದಿ

ರಾಜ್ಯಮಟ್ಟದ ಯುವ ವಿಜ್ಞಾನಿ ಪ್ರಶಸ್ತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ಬಾಗಲಕೋಟೆ: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ರಾಜ್ಯಮಟ್ಟದ ಯುವ ವಿಜ್ಞಾನಿ ಸ್ಪರ್ಧೆ 2019-20ನೇ ಯುವ ವಿಜ್ಞಾನಿ ಪ್ರಶಸ್ತಿಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಯುವ ವಿಜ್ಞಾನಿಗಳ ಪ್ರಶಸ್ತಿಗಾಗಿ 9 ರಿಂದ 12ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ವಿಜ್ಞಾನ ಅಥವಾ ಗಣಿತ ವಿಷಯದಲ್ಲಿ ಸ್ವಂತ ಅಧ್ಯಯನ ಕೈಗೊಂಡು ಸಂಶೋಧಿಸಿದ ವೈಜ್ಞಾನಿಕ ವಿಶ್ಲೇಷಣೆ ಕುರಿತಾಗಿ ನಿರ್ಣಾಯಕರ ಮುಂದೆ ವಿಷಯ ಮಂಡಿಸಬೇಕು. ಪೆಬ್ರುವರಿ 6 ರಂದು ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಜಿಲ್ಲಾ ಮಟ್ಟದಲ್ಲಿ ಪ್ರಥಮ 5 ಸಾವಿರ, ದ್ವೀತಿಯ 3 ಸಾವಿರ ಹಾಗೂ ರಾಜ್ಯಮಟ್ಟದಲ್ಲಿ 4 ಯುವ ವಿಜ್ಞಾನಿಗಳಿಗೆ ತಲಾ 10 ಸಾವಿರ ನಗದು ಬಹುಮಾನ ವಿತರಿಸಲಾಗುವುದು.ಆಸಕ್ತ ವಿದ್ಯಾರ್ಥಿಗಳು ಫೆಬ್ರುವರಿ 4ರ ಒಳಗಾಗಿ www.krvp.org ವೆಬ್ ಸೈಟ್ ನ ಮೂಲಕ ಆನ್ ಲೈನ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಫೆಬ್ರವರಿ 20 ರಂದು ಬೆಳಗ್ಗೆ ಜಿಲ್ಲೆಯ ನವನಗರ ಅಗಸ್ತ್ಯ ಕೋರ ವಿಜ್ಞಾನ ಕೇಂದ್ರದಲ್ಲಿ ಸ್ಪರ್ಧೆಯನ್ನು ಆಯೋಜಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ದೂ. ಸಂಖ್ಯೆ –7892024728,9902756480, 9008226548 ಗೆ ಸಂಪರ್ಕಿಸಬಹುದಾಗಿದೆ ಎಂದು ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version