ಕ್ರೀಡೆ
ಪ.ಜಾತಿ/ಪ.ಪಂಗಡಕ್ಕೆ ಸಹಾಯಧನ ಮತ್ತು ಕ್ರೀಡಾಗಂಟಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : 2020-21ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಯುವಜನ ಸಂಘ ಸಂಸ್ಥೆಗಳಿಗೆ ನೋಂದಾವಣೆ ಮಾಡಲು ಸಹಾಯಧನ ಮತ್ತು ಕ್ರೀಡಾಗಂಟನ್ನು ನೀಡುವ ಹೊಸ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿ ತಾಲ್ಲೂಕಿನಲ್ಲಿ 02 ಪರಿಶಿಷ್ಟ ಜಾತಿ ಮತ್ತು 01 ಪರಿಶಿಷ್ಟ ಪಂಗಡದ ಯುವಜನ ಸಂಘವನ್ನು ನೋಂದಾಯಿಸಲು ಸಹಾಯಧನ ಹಾಗೂ ಕ್ರೀಡಾಗಂಟನ್ನು ನೀಡಲಾಗುವುದು. ಜಿಲ್ಲೆಯ 15 ರಿಂದ 35 ವರ್ಷ ವಯೋಮಾನದೊಳಗಿನ ಪ.ಜಾತಿ/ಪ.ಪಂಗಡಕ್ಕೆ ಸೇರಿರುವ ಯುವಕ/ಯುವತಿಯರು ಯುವಜನ ಸಂಘವನ್ನು ರಚಿಸಿಕೊಳ್ಳಲು ಸದವಕಾಶವಿರುವದರಿಂದ ಕರ್ನಾಟಕ ರಾಜ್ಯ ಸಂಘ ಸಂಸ್ಥೆಗಳ ನೋಂದಾವಣೆ ಕಾಯಿದೆ 1960 ರ ಅಡಿಯಲ್ಲಿ ಯುವಜನ ಸಂಘಗಳ ನೋಂದಣಿ ಮಾಡಿಸಿ, ಜ.28 ರೊಳಗಾಗಿ ಮಾನ್ಯತೆಗಾಗಿ ಈ ಕಚೇರಿಗೆ ಸಲ್ಲಿಸಲು ಕೋರಿದೆ. ನಂತರ ಬಂದ ಪ್ರಸ್ತಾವನೆಗಳನ್ನು ಸ್ವೀಕರಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಕಚೇರಿ ವೇಳೆಯಲ್ಲಿ ಮೊ.ಸಂ: 9620796970 ನ್ನು ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಬಿ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243