ದಿನದ ಸುದ್ದಿ

ಹೆಚ್.ಎ.ಎಲ್ ನಲ್ಲಿ‌ ತರಬೇತಿಗಾಗಿ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ‌ :‌ ಹೆಚ್.ಎ.ಎಲ್. ಬೆಂಗಳೂರು ಇವರ ವತಿಯಿಂದ ಮೂರು ವರ್ಷದ ಡಿಪ್ಲೋಮದಲ್ಲಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳಿಗೆ ಅಪ್ರೆಂಟೀಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಡಿಪ್ಲೋಮ ಇನ್ ಏರೋನಾಟಿಕಲ್ ಎಂಜಿನಿಯರಿಂಗ್, ಮೆಕ್ಯಾನಿಕಲ್, ಇಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯೂನಿಕೇಶನ್, ಸಿವಿಲ್, ಕಂಪ್ಯೂಟರ್ ಸೈನ್ಸ್ /ಇನ್‍ಫರ್‍ಮೇಶನ್ ಸೈನ್,್ಸ ಮೆಟಲರ್ಜಿ & ಕಮರ್ಶಿಯಲ್ ಪ್ರ್ಯಾಕ್ಟಿಸ್ ತರಬೇತಿಗಳಲ್ಲಿ ತೇರ್ಗಡೆ ಹೊಂದಿರಬೇಕು. ಅರ್ಜಿಯನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ದಾವಣಗೆರೆ ಇಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಮಾ.10 ಸಂಜೆ 5 ಗಂಟೆಯೊಳಗೆ ಕಚೇರಿಗೆ ಸಲ್ಲಿಸಬೇಕು.

ಇದನ್ನೂ ಓದಿ |ರೈತರಲ್ಲಿ ಆತ್ಮಸ್ಥೈರ್ಯ ತುಂಬಲು ರೈತರೊಂದಿಗೊಂದು ದಿನ ಕಾರ್ಯಕ್ರಮ ಜಾರಿ” : ಕೃಷಿ ಸಚಿವ ಬಿ.ಸಿ. ಪಾಟೀಲ್

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾ ಆಡಳಿತ ಭವನ, ದಾವಣಗೆರೆ ಅಥವಾ ದೂ.ಸಂ: 08192-259446 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉದ್ಯೋಗಾಧಿಕಾರಿ ಗಿರೀಶ್ ಕೆ.ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version