ದಿನದ ಸುದ್ದಿ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಅರ್ಜಿ ಆಹ್ವಾನ

Published

on

ಸುದ್ದಿದಿನ,ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಆತ್ಮನಿರ್ಭರ ಭಾರತ ಕಾರ್ಯಕ್ರಮದ ಪಶುಪಾಲನಾ ಮೂಲಭೂತ ಸೌಕರ್ಯದಡಿಯಲ್ಲಿ ವಿವಿಧ ಕಾರ್ಯಕ್ರಮಗಳ ಅನುಷ್ಟಾನಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಿದೆ.

ಹಣಕಾಸು ಸೌಲಭ್ಯಗಳು ಯೋಜನೆಯಿಂದ ಡೈರಿ ಮತ್ತು ಮೌಲ್ಯಾಧಾರಿತ ಡೈರಿ ಪದಾರ್ಥಗಳು, ಕುರಿ, ಮೇಕೆ, ಹಂದಿ, ಕೋಳಿ ಹಾಗೂ ಎಮ್ಮೆಯ ಮೌಲ್ಯಾಧಾರಿತ ಮಾಂಸದ ಪದಾರ್ಥಗಳು ಮತ್ತು ಆಹಾರ ಘಟಕಗಳು ಹಾಗೂ ಇದಕ್ಕೆ ಸಂಬಂಧಿಸಿದ ಪ್ರಯೋಗಾಲಯ ಸ್ಥಾಪನೆಗೆ ಹಣಕಾಸು ಸೌಲಭ್ಯ ಒದಗಿಸುವ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು ಆಸಕ್ತರು www.ahidf.udyamimitra.in ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಂಡು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ | ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಳೆ ನೀರು ಇಂಗಿಸುವ ಯೋಜನೆ : ಸಚಿವ ಕೆ.ಎಸ್.ಈಶ್ವರಪ್ಪ

ಹೆಚ್ಚಿನ ಮಾಹಿತಿಯನ್ನು ತಾಲ್ಲೂಕುಗಳ ಮುಖ್ಯ ಪಶುವೈದ್ಯಾಧಿಕಾರಿಯವರನ್ನು ಕಛೇರಿ ವೇಳೆಯಲ್ಲಿ ಭೇಟಿ ಮಾಡಬಹುದು ಅಥವಾ ಶಿವಮೊಗ್ಗ- 08082-255921, ಭದ್ರಾವತಿ-08282-266462, ಶಿಕಾರಿಪುರ-08087-222474, ಸೊರಬ-08184-272309, ಸಾಗರ-08183-226603, ಹೊಸನಗರ-08185-221353 ಮತ್ತು ತೀರ್ಥಹಳ್ಳಿ- 08181-228521 ದೂರವಾಣಿ ಮೂಲಕ ಸಂಪರ್ಕಿಸುವಂತೆ ಶಿವಮೊಗ್ಗ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version