ದಿನದ ಸುದ್ದಿ
ಅಂಗವಿಕಲ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ
ಸುದ್ದಿದಿನ,ದಾವಣಗರೆ : ಹರಿಹರ ತಾಲ್ಲೂಕಿನ ಸಾಲಕಟ್ಟೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿಆರ್‍ಡಬ್ಲೂ) ಕೆಲಸಕ್ಕೆ ಮಾಸಿಕ ರೂ. 6,000 ಗಳ ಗೌರವಧನ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಸರ್ಕಾರಿ ಆದೇಶದನ್ವಯ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರಿರುವ ವಿಕಲಚೇತನರು 18 ರಿಂದ 45 ವರ್ಷದ ವಯೋಮಾನದವರಾಗಿದ್ದು, ಎಸ್.ಎಸ್.ಎಲ್.ಸಿ. ಉತ್ತೀರ್ಣ ಅಥವಾ ಅನುತ್ತೀರ್ಣರಾಗಿರಬೇಕು ಹಾಗೂ ವಿಆರ್‍ಡಬ್ಲೂ ಕೆಲಸಕ್ಕೆ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸವಿರಬೇಕು.
ಇದನ್ನೂ ಓದಿ | ದಾವಣಗೆರೆ | ಗ್ರಾ.ಪಂ ಹಾಗೂ ಮಹಾ ನಗರಪಾಲಿಕೆ ಚುನಾವಣೆ : ಮಾ.29ರಂದು ರಜೆ
ಭರ್ತಿ ಮಾಡಿದ ಅರ್ಜಿಯೊಂದಿಗೆ ಸ್ಟಾಂಪ್ ಸೈಜ್ ಅಳತೆಯ ಎರಡು ಭಾವಚಿತ್ರ, ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಸಕ್ಷಮ ಪ್ರಾಧಿಕಾರದಿಂದ ಪಡೆದ ವಾಸಸ್ಥಳ ಪ್ರಮಾಣಪತ್ರ, ವಿಕಲಚೇತನರ ಯುಡಿಐಡಿ ಗುರುತಿನ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಆಧಾರ್ ಕಾರ್ಡ್ ಪ್ರತಿ ಲಗತ್ತಿಸಿ ಏ. 01 ರೊಳಗಾಗಿ ಸಲ್ಲಿಸಬೇಕು.
ಅರ್ಜಿ ಹಾಗೂ ಇತರೆ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳ ಕಛೇರಿ, ಶಂಕರಲೀಲಾ ಗ್ಯಾಸ್ ಏಜೆನ್ಸಿ ಹತ್ತಿರ, ಎಂ.ಸಿ.ಸಿ. ‘ಬಿ’ ಬ್ಲಾಕ್, ದಾವಣಗೆರೆ ದೂರವಾಣಿ: 08192-263939 ಇವರನ್ನು ಸಂಪರ್ಕಿಸಬೇಕೆಂದು ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243