ದಿನದ ಸುದ್ದಿ

ಪಿಹೆಚ್‍ಡಿ ಫಿಲೋಶಿಪ್‍ಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿನಲ್ಲಿ ಪಿ.ಹೆಚ್.ಡಿ ವ್ಯಾಸಂಗ ಮಾಡುತ್ತಿರುವ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಸೇವಾಸಿಂಧೂ ಪೋರ್ಟಲ್‍ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿದಾರರು https://sevasindhu.karnataka.gov.in/sevasindhu/departmentservices ಈ ಲಿಂಕ್ ಮೂಲಕ ಆನ್‍ಲೈನ್‍ನಲ್ಲಿ ಪಿಹೆಚ್‍ಡಿ ಫೆಲೋಶಿಪ್‍ಗೆ ಅರ್ಜಿ ಸಲ್ಲಿಸಬಹುದು.. ಅರ್ಜಿ ಸಲ್ಲಿಸಿದ ಪ್ರತಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ https://dom.karnataka.gov.in ವೀಕ್ಷಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಮಲ್ಲಿಕಾರ್ಜುನ್ ಮಠದ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version