ದಿನದ ಸುದ್ದಿ
ಅಲ್ಪಸಂಖ್ಯಾತ ಸಮುದಾಯ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿವೇತನ ಯೋಜನೆಯಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿ ವೇತನ ಯೋಜನೆಯಡಿ ಅರ್ಹ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ನ.30 ಕೊನೆಯದಿನ. ವೆಬ್‍ಸೈಟ್ https://dom.karnataka.gov.in ನ್ನು ವೀಕ್ಷಿಸಿ ಅಥವಾ ದೂ.ಸಂ: 080-22535902 ಕರೆ ಮಾಡಿ ಹೆಚ್ಚಿನ ಮಾಹಿತಿ ಪಡೆಯಬಹುದು. ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಮಲ್ಲಿಕಾರ್ಜುನ್ ಮಠದ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243