ದಿನದ ಸುದ್ದಿ
ಅಲ್ಪಸಂಖ್ಯಾತರ ಸಮುದಾಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಬಿ.ಇಡ್ ಹಾಗೂ ಡಿ.ಇಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಆನ್‍ಲೈನ್ ಟಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಗ್ರಾಮೀಣ ಮತ್ತು ನಗರ ಭಾಗದಲ್ಲಿ ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ವಿದ್ಯಾಭ್ಯಾಸ ಮುಂದುವರೆಸಲು ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಮಾನ್ಯತೆ ಪಡೆದಿರುವ ಸರ್ಕಾರಿ, ಅರೆ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ಬಿ.ಇಡ್ ಹಾಗೂ ಡಿ.ಇಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರಬೇಕು.
ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಸೆಪ್ಟೆಂಬರ್ 21 ರೊಳಗಾಗಿ ಸೇವಾ ಸಿಂಧು ಪೋರ್ಟಲ್ https://Sevasindhu.Karnataka.gov.in ಮೂಲಕ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಇಲಾಖೆ ಸ. ಸಂ. 8277799990, ಕಚೇರಿ ದೂ. ಸಂ. 08192 250022 ಸಂಪರ್ಕಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243