Connect with us

ದಿನದ ಸುದ್ದಿ

ಸೈನಿಕ ಶಾಲೆಗಳ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಭಾರತ ದೇಶದಾದ್ಯಂತ ಇರುವ 33 ಸೈನಿಕ ಶಾಲೆಗಳಲ್ಲಿ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು (NTA) 2023-24 ರ ಶೈಕ್ಷಣಿಕ ವರ್ಷಕ್ಕಾಗಿ ದಾಖಲು ಹೊಂದಲು ಎಐಎಸ್‍ಎಸ್‍ಇಇ-2023 ((AISSEE -2023) ಪ್ರವೇಶ ಪರೀಕ್ಷೆ ಏರ್ಪಡಿಸಿದ್ದು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸೈನಿಕ ಶಾಲೆಗಳು ಇಂಗ್ಲೀಷ್ ಮಾಧ್ಯಮ ವಸತಿ ಶಾಲೆಗಳಾಗಿ ಸಿಬಿಎಸ್‍ಇ ಅಂಗಸಂಸ್ಥೆಗಳಾಗಿವೆ. ಅಲ್ಲದೆ ಸೈನಿಕ ಶಾಲಾ ಸೊಸೈಟಿಯಿಂದ ಕಾರ್ಯ ನಿರ್ವಹಿಸುತ್ತಿದ್ದು, ಈ ಶಾಲೆಗಳು ಅಧಿಕಾರಿಗಳನ್ನಾಗಿ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ, ಇಂಡಿಯನ್ ನೇವಲ್ ಅಕಾಡೆಮಿ ಮತ್ತಿತರೆ ಟ್ರೈನಿಂಗ್ ಅಕಾಡೆಮಿಗಳಿಗಾಗಿ ಅಭ್ಯರ್ಥಿಗಳನ್ನು ತಯಾರು ಮಾಡಲಿವೆ.

ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, https://aissee.nta.nic.in ಈ ವೆಬ್‍ಸೈಟ್‍ನಲ್ಲಿ ನ.30 ರ ಒಳಗಾಗಿ ಅರ್ಜಿ ಸಲ್ಲಿಸಬೇಕು ಹಾಗೂ ಪರೀಕ್ಷಾ ಶುಲ್ಕವನ್ನು ಆನ್‍ಲೈನ್ ಮೂಲಕ ಪೇಮೆಂಟ್ ಗೇಟ್‍ವೇಗಳಾದ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಅಥವಾ ಇಂಟರ್‍ನೆಟ್ ಬ್ಯಾಂಕಿಂಗ್ ಅಥವಾ ಪೇಟಿಎಂ ಮೂಲಕ ಪಾವತಿಸಬಹುದಾಗಿದೆ.

ಎಐಎಸ್‍ಎಸ್‍ಇಇ-2023 ಪರೀಕ್ಷೆಗಾಗಿ ಪ್ರವೇಶ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ವಿವರವಾದ ಮಾಹಿತಿ ಕೈಪಿಡಿಯನ್ನು ಓದಿಕೊಂಡಿರಬೇಕು. ಪ್ರವೇಶ ಪರೀಕ್ಷೆಯು 2023ರ ಜ.08 ರಂದು ಓಎಮ್‍ಆರ್ ಆಧಾರಿತ ಮಾದರಿಯಲ್ಲಿ ನಡೆಸಲಾಗುವುದು. ಪ್ರಶ್ನೆ ಪತ್ರಿಕೆಯು ಬಹು ಆಯ್ಕೆ ಪ್ರಶ್ನೆ ಮಾದರಿ ಒಳಗೊಂಡಿರುತ್ತದೆ. 6ನೇ ತರಗತಿಯಲ್ಲಿ ಬಾಲಕ ಹಾಗೂ ಬಾಲಕಿಯರಿಗೆ ಎಲ್ಲಾ ಸೈನಿಕ ಶಾಲೆಗಳಲ್ಲಿ ಪ್ರವೇಶ ತೆರೆದಿದ್ದು, 6ನೇ ತರಗತಿಗೆ ಅರ್ಹತೆ ಹೊಂದಲು ಅಭ್ಯರ್ಥಿಗಳ ವಯೋಮಿತಿ 31.03.2023 ರಂತೆ 12 ವರ್ಷಗಳ ಒಳಗೆ ಇರಬೇಕು.

9ನೇ ತರಗತಿಗೆ ಪ್ರವೇಶ ಹೊಂದಲು ವಯೋಮಿತಿ 31.03.2023 ರಂತೆ 13 ಹಾಗೂ 15 ವರ್ಷಗಳ ನಡುವೆ ಇರಬೇಕು ಹಾಗೂ ಪ್ರವೇಶ ಸಮಯದಲ್ಲಿ ಮಾನ್ಯತೆ ಹೊಂದಿರುವ ಶಾಲೆಯಿಂದ 8ನೇ ತರಗತಿ ತೇರ್ಗಡೆ ಹೊಂದಿರಬೇಕು. ಪರಿಶಿಷ್ಟ ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಕವು ರೂ.500 ಇದ್ದು, ಇತರರರಿಗೆ ರೂ.650 ಇರುತ್ತದೆ.

ಪರೀಕ್ಷೆಗೆ ಸಂಬಂಧಿಸಿದ ಯೋಜನೆ, ಕಾಲಾವಧಿ, ಮಾಧ್ಯಮ, ಪರೀಕ್ಷೆಯ ಪಠ್ಯಕ್ರಮ, ಸೈನಿಕ ಶಾಲೆಗಳ ಪಟ್ಟಿ ಹಾಗೂ ತಾತ್ಕಾಲಿಕ ಪ್ರವೇಶ ಸೀಟುಗಳ ಮೀಸಲು, ಪರೀಕ್ಷಾ ನಗರಗಳು ಹಾಗೂ ಕೇಂದ್ರಗಳು, ತೇರ್ಗಡೆ ಅವಶ್ಯಕತೆಗಳು, ಮುಖ್ಯ ದಿನಾಂಕಗಳು ಹಾಗೂ ಇತರೆ ಮಾಹಿತಿಗಳನ್ನು www.nta.ac.in ವೆಬ್‍ಸೈಟ್‍ನಲ್ಲಿ ಲಭ್ಯವಿರುತ್ತದೆ ಎಂದು ಎನ್‍ಟಿಎ ಹಿರಿಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಬಿಜೆಪಿಯ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ಎನ್.ಬಿ.ಭಾರ್ಗವಿ ದ್ರಾವಿಡ್ ಆಯ್ಕೆ

Published

on

ಸುದ್ದಿದಿನ,ಚಿತ್ರದುರ್ಗ : ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಯಾಗಿ ಚಿತ್ರದುರ್ಗದ ಶ್ರೀಮತಿ ಎನ್.ಬಿ.ಭಾರ್ಗವಿ ದ್ರಾವಿಡ್ ಅವರನ್ನು ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಸಂಸದರಾದ ತೇಜಸ್ವಿ ಸೂರ್ಯ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ಶಾಸಕ ಧೀರಜ್ ಮುನಿರಾಜ್ ರವರು ಅಧಿಕೃತ ನೇಮಕ ಪತ್ರ ನೀಡುವುದರ ಮೂಲಕ ಆಯ್ಕೆ ಮಾಡಲಾಯಿತು.

ಭಾರ್ಗವಿ ದ್ರಾವಿಡ್ ಅವರು ಈ ಹಿಂದೆ ಭಾರತ ಸರ್ಕಾರವು ಚಿತ್ರದುರ್ಗ ನೆಹರು ಯುವ ಕೇಂದ್ರದ ಸಲಹಾ ಸಮಿತಿಯ ಸದಸ್ಯರಾಗಿ ನೇಮಕ ಮಾಡಿತ್ತು. ಹಾಗೂ ದಾವಣಗೆರೆ ವಿಶ್ವ ವಿದ್ಯಾನಿಲಯದಲ್ಲಿ ವಿದ್ಯಾವಿಷಯಕ ಪರಿಷತ್ತಿನ ಸದಸ್ಯರಾಗಿ ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಲಾಗಿತ್ತು.

ಎಸ್.ಸಿ.ಮೋರ್ಚಾದ ರಾಜ್ಯ ಕಾರ್ಯ ಕಾರಿಣಿ ಸದಸ್ಯರಾಗಿ ಪ್ರವಾಸ ಕೈಗೊಂಡು ಕೆಲಸ ಮಾಡಿದ್ದರು. ಎ.ಬಿ.ವಿ.ಪಿ ಸಂಘಟನೆಯಲ್ಲಿಯೂಸಹ ಸಾಕಷ್ಟು ರಾಜ್ಯ ಮಟ್ಟದ ಜವಾಬ್ದಾರಿ ಗಳನ್ನು ನಿಭಾಯಿಸಿದ್ದರು.ಬರುವ 2024 ರ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಆಕಾಂಕ್ಷಿ ಕೂಡ ಆಗಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಪಿಎಲ್, ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಎಪಿಎಲ್, ಬಿಪಿಎಲ್ ಪಡಿತರ ಚೀಟಿಗಳಿಗಾಗಿ ಹೊಸ ಅರ್ಜಿಗಳನ್ನು ಏಪ್ರಿಲ್ 1 ರಿಂದ ಸ್ವೀಕರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ ವಿಧಾನಸಭೆಗೆ ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ಕುಟುಂಬದ ಆದಾಯ1.20 ಲಕ್ಷ ರೂಪಾಯಿಗಿಂತ ಹೆಚ್ಚಿದ್ದರೆ ಅಂತಹವರನ್ನು ಬಿಪಿಎಲ್ ಚೀಟಿಯಿಂದ ಹೊರಗಿಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ : ಅವಧಿ ವಿಸ್ತರಣೆ

Published

on

ಸುದ್ದಿದಿನ ಡೆಸ್ಕ್ : ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವ ಗಡುವನ್ನು ಮತ್ತೆ ಮೂರು ತಿಂಗಳ ಕಾಲ ವಿಸ್ತರಣೆ ಮಾಡುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧಾನ ಪರಿಷತ್‌ಗಿಂದು ತಿಳಿಸಿದ್ದಾರೆ.

ಪ್ರಶ್ನೋತ್ತರ ಕಲಾಪದಲ್ಲಿ ಅವರು, ಕಾಂಗ್ರೆಸ್‌ನ ಮಾದೇಗೌಡ ಅವರ ಪ್ರಸ್ತಾಪಕ್ಕೆ ಉತ್ತರಿಸಿ, ಸುಪ್ರೀಂಕೋರ್ಟ್ ನಿರ್ದೇಶನದಂತೆ ರಾಜ್ಯದಲ್ಲಿ ಇದುವರೆಗೂ 18 ಲಕ್ಷ ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಸಲಾಗಿದೆ. ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಇದು ನಡೆಯಬೇಕಾಗಿರುವುದರಿಂದ ಮೂರು ತಿಂಗಳು ವಿಸ್ತರಣೆ ಮಾಡಲಾಗಿದೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending