ದಿನದ ಸುದ್ದಿ

ಅರೆಕಾಲಿಕ ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ವಿಶ್ವವಿದ್ಯಾನಿಲಯದ ಆರೋಗ್ಯ ಕೇಂದ್ರದಲ್ಲಿ ಮಹಿಳಾ ವೈದ್ಯಾಧಿಕಾರಿಗಳಾಗಿ(ಅರೆಕಾಲಿಕ) ಕಾರ್ಯ ನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಎಂ.ಬಿ.ಬಿ.ಎಸ್/ಬಿ.ಎ.ಎಂ.ಎಸ್ ಪದವಿ ಜೊತೆಗೆ ಕನಿಷ್ಠ 03 ವರ್ಷಗಳ ಅನುಭವ ಪಡೆದಿರಬೇಕು. ಅರ್ಜಿ ಸಲ್ಲಿಸಲು ಜ.07 ಕೊನೆಯ ದಿನವಾಗಿರುತ್ತದೆ. ಅರ್ಜಿದಾರರು ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಸಲ್ಲಿಸಬೇಕು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ www.davangereuniversity.ac.in ಸಂಪರ್ಕಿಸಬಹುದೆಂದು ಕುಲಸಚಿವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version