ದಿನದ ಸುದ್ದಿ
‘ಸಮಾಲೋಚಕರ’ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ಮಡಿಕೇರಿ : ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇಲ್ಲಿ ಖಾಲಿ ಇರುವ ಒಂದು ಸಮಾಲೋಚಕರ ಹುದ್ದೆಯನ್ನು (ಸೈಕಿಯಾಟ್ರಿಸ್ಟ್ ಸೋಶೀಯಲ್ ವರ್ಕ್ ಅಥವಾ ಮನಃಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಮಕ್ಕಳ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷಗಳ ಅನುಭವವಿರಬೇಕು.
ವಯಸ್ಸು 25 ರಿಂದ 40 ವರ್ಷ) ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಇಚ್ಛೆಯುಳ್ಳ ಅಭ್ಯರ್ಥಿಗಳು ತಮ್ಮ ಸ್ವ ವಿವರ ಹಾಗೂ ಶೈಕ್ಷಣಿಕ ಪ್ರಮಾಣ ಪತ್ರಗಳ ನಕಲುಗಳೊಂದಿಗೆ ಅರ್ಜಿಯನ್ನು ಜನವರಿ, 28 ರೊಳಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಲ್ಯಾಣ ಮಂಟಪದ ಮುಂಭಾಗ, ಓಂಕಾರೇಶ್ವರ ದೇವಸ್ಥಾನ ರಸ್ತೆ, ಮಡಿಕೇರಿ (ದೂ.ಸಂ : 08272-228800) ಈ ವಿಳಾಸಕ್ಕೆ ಸಲ್ಲಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಮ್ತಾಜ್ ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401