ದಿನದ ಸುದ್ದಿ
ಬಳ್ಳಾರಿ ತಾಲೂಕಿನ ಗ್ರಾಮ ಪಂಚಾಯಿತಿಗಳಿಗೆ “ಗ್ರಾಮ ಕಾಯಕ ಮಿತ್ರ” ನೇಮಕ ; ಅರ್ಹರಿಂದ ಅರ್ಜಿ ಆಹ್ವಾನ
ಸುದ್ದಿದಿನ,ಬಳ್ಳಾರಿ : ಬಳ್ಳಾರಿ ತಾಲೂಕಿನ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ 2020-21ನೇ ಸಾಲಿನಲ್ಲಿ 20ಸಾವಿರ ಮಾನವ ದಿನಗಳಿಗಿಂತ ಹೆಚ್ಚಿನ ಉದ್ಯೋಗ ಸೃಜನೆ ಮಾಡಿದ ಗ್ರಾಮ ಪಂಚಾಯಿತಿಗಳಲ್ಲಿ “ಗ್ರಾಮ ಕಾಯಕ ಮಿತ್ರ” ರನ್ನು ನೇಮಕ ಮಾಡಿಕೊಳ್ಳಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಳ್ಳಾರಿ ತಾಲೂಕಿನ ಕೊರ್ಲಗುಂದಿ, ಕೊಳಗಲ್ಲು, ಬೆಳಗಲ್ಲು, ಪರಮದೇವನಹಳ್ಳಿ, ಮೋಕಾ, ಶಂಕರಬಂಡೆ, ಸಂಗನಕಲು, ಯರಗುಡಿ, ಸಿರುವಾರ ಸೇರಿದಂತೆ 9 ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಕಾಯಕ ಮಿತ್ರಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಮಹಿಳಾ ಅಭ್ಯರ್ಥಿಗಳು ಸಂಬಂಧಿಸಿದ ಗ್ರಾಮ ಪಂಚಾಯಿತಿಗಳಲ್ಲೇ ಅರ್ಜಿ ಪಡೆದು ಗ್ರಾಮ ಪಂಚಾಯತಿಯಲ್ಲಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ.04 ಆಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ದೂ.08392-266695 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243