ದಿನದ ಸುದ್ದಿ
ಹಿಂದುಳಿದ ವರ್ಗ ಹಾಗೂ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ
ಸುದ್ದಿದಿನ,ಹಾವೇರಿ : ಜಿಲ್ಲೆಯಲ್ಲಿ ಮೆಟ್ರಿಕ್ ಹಾಗೂ ಮೆಟ್ರಿಕ್ ನಂತರದ ವಿವಿಧ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗ ವಿದ್ಯಾರ್ಥಿಗಳು, ಅಲೆಮಾರಿ ಹಾಗೂ ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ಪ್ರಸಕ್ತ 2020-21ನೇ ಸಾಲಿನ ಮೆಟ್ರಿಕ್ ನಂತರ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ, ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ನೀಡಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು 05-03-2021 ಕೊನೆಯ ದಿನ. ಅಭ್ಯರ್ಥಿಗಳು ವೆಬ್‍ಸೈಟ್‍ನಲ್ಲಿ www.ssp.postmatric.karnataka.gov.in
ಅರ್ಜಿ ಸಲ್ಲಿಸಬೇಕು. ದಾಖಲೆಗಳು ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶದ ಬಗ್ಗೆ ಮಾಹಿತಿಗಾಗಿ www.bcwd.karnatakagov.in ಸಂಪರ್ಕಿಸಬಹುದು.
ಇಲಾಖಾ ಸಹಾಯವಾಣಿ
ಸಂಖ್ಯೆ:0850770005/8050770004/ www.bcwd.scholarship@karnataka.gov.in ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ ಸಹಾಯವಾಣಿ postmetrichelpdesk@karnataka.gov.in ದೂರವಾಣಿ 08035254757 ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243