ದಿನದ ಸುದ್ದಿ

ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ ಭತ್ಯೆಗೆ ಅರ್ಹ ಕಾನೂನು ಪದವೀಧರರಿಗೆ ಅರ್ಜಿ ಅಹ್ವಾನ

Published

on

ಸುದ್ದಿದಿನ,ದಾವಣಗೆರೆ : 2022-23ನೇ ಸಾಲಿನ ಹಿಂದುಳಿದ ವರ್ಗಗಳಿಗೆ ಸೇರಿದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ ಭತ್ಯೆಗೆ ಅರ್ಹ ಕಾನೂನು ಪದವೀಧರರಿಗೆ ಅರ್ಜಿಗಳನ್ನು ಅಹ್ವಾನಿಸಲಾಗಿರುತ್ತದೆ.

ಅರ್ಹ ಅಭ್ಯರ್ಥಿಗಳು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೊಠಡಿ 46, ಎರಡನೇ ಮಹಡಿ, ಜಿಲ್ಲಾಡಳಿತ ಭವನ ಕರೂರು ರಸ್ತೆ, ದಾವಣಗೆರೆ-577006. ಇಲ್ಲಿ ಕಛೇರಿಯ ವೇಳೆಯಲ್ಲಿ ಅರ್ಜಿಗಳನ್ನು ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅವಶ್ಯಕ ದಾಖಲೆಗಳೊಂದಿಗೆ ಜುಲೈ.20 ರೊಳಗಾಗಿ ಕಛೇರಿಗೆ ಸಲ್ಲಿಸಬಹುದೆಂದು ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version