ದಿನದ ಸುದ್ದಿ
ವಯೋಶ್ರೇಷ್ಠ ಸಮ್ಮಾನ್ ಪ್ರಶಸ್ತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ಹಾವೇರಿ : ಕೇಂದ್ರ ಸರ್ಕಾರದ ಪ್ರಸಕ್ತ 2020-21ನೇ ಸಾಲಿನ “ವಯೋಶ್ರೇಷ್ಠ ಸಮ್ಮಾನ್” ರಾಷ್ಟ್ರ ಪ್ರಶಸ್ತಿಗೆ ಹಿರಿಯ ನಾಗರೀಕರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ವ್ಯಕ್ತಿಗಳಿಂದ ಹಾಗೂ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹಿರಿಯ ನಾಗರೀಕರ ಕ್ಷೇತ್ರದಲ್ಲಿ ಅತ್ಯತ್ತಮ ಸೇವೆ ಸಲ್ಲಿಸುತ್ತಿರವ ಅರ್ಹ ವ್ಯಕ್ತಿಗಳು/ ಸಂಸ್ಥೆಗಳು ತಮ್ಮ ಜೀವ ಮಾನದ ಸಾಧನೆ ಪಡೆದ ಪ್ರಶಸ್ತಿಗಳು ಹಾಗೂ ಇತರೆ ದಾಖಲಾತಿಗಳೊಂದಿಗೆ ನಿಗದಿತ ನಮೂನೆಯನ್ನು ಭರ್ತಿ ಮಾಡಿದ ಎರಡು ಪ್ರಸ್ತಾವನೆಯನ್ನು ಜಿಲ್ಲಾ ವಿಕಲಚೇತನ ಕಲ್ಯಾಣಾಧಿಕಾರಿಗಳ ಕಚೇರಿಗೆ ದಿನಾಂಕ01-03-2021 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಅವರನ್ನು ಅಥವಾ http://socialjustice.nic.in ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ ವಿ. ಮಠದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243