ದಿನದ ಸುದ್ದಿ
ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು http://shp.karnataka.gov.in ನಲ್ಲಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನವಂಬರ್ 7 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ ದೂ.ಸಂ:08192-250022 ಹಾಗೂ ತಾಲ್ಲೂಕು ವಿಸ್ತರಣಾಧಿಕಾರಿಗಳ ಕಚೇರಿ ದೂ.ಸಂ: 08192-250066 ಸಂಪರ್ಕಿಸಬಹುದು. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243