ದಿನದ ಸುದ್ದಿ

ಬಾಲಗೌರವ ಪ್ರಶಸ್ತಿ ಹಾಗೂ ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ರಾಜ್ಯ, ರಾಷ್ಟ್ರ ಮತ್ತು ಅಂತರ ರಾಷ್ಟ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಮಕ್ಕಳಿಗೆ ಬಾಲಗೌರವ ಪ್ರಶಸ್ತಿ ಹಾಗೂ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದ ಉತ್ತಮ ಪುಸ್ತಕಗಳಿಗೆ ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಫೆ.20 ರೊಳಗಾಗಿ ಯೋಜನಾಧಿಕಾರಿಗಳು, ಚಂದ್ರಿಕಾ ಲೇ ಔಟ್ ಹಿಂಭಾಗ, ಕೆ.ಹೆಚ್.ಬಿ ಕಾಲೋನಿ, ಲಕಮನಹಳ್ಳಿ ಧಾರವಾಡ-580004 ದೂ.ಸಂ:0836-2461666 ವಿಳಾಸಕ್ಕೆ ಪೋಸ್ಟ್ ಮುಖಾಂತರ ಕಳುಹಿಸಬೇಕು.

ಅರ್ಜಿ ನಮೂನೆಯನ್ನು ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ದಾವಣಗೆರೆ ಕಚೇರಿಯಿಂದ ಪಡೆಯಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 8050392209, 7204396275, 9448981944 ನ್ನು ಸಂಪರ್ಕಿಸಬೇಕೆಂದು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version