ದಿನದ ಸುದ್ದಿ
ಚರ್ಮ ಕುಶಲಕರ್ಮಿಗಳ ಪರಿಹಾರ ಧನಕ್ಕೆ ಅರ್ಜಿ : ಅವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ: ಕೋವಿಡ್-19 2ನೇ ಅಲೆಯ ಲಾಕ್‍ಡೌನ್ ಹಿನ್ನೆಲೆಯಲ್ಲಿ ಪಾದರಕ್ಷೆ ತಯಾರಿಕೆ, ದುರಸ್ತಿ ಹಾಗೂ ಚರ್ಮ ಹದ ಮಾಡುವ ಕಾಯಕದಲ್ಲಿ ತೊಡಗಿರುವ ಚಮ್ಮಾರರು, ಚರ್ಮ ಕುಶಲಕರ್ಮಿಗಳಿಗೆ ಸರ್ಕಾರದಿಂದ ನೀಡಲಾಗುವ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಜೂ. 30 ರವರೆಗೆ ವಿಸ್ತರಿಸಲಾಗಿದೆ.
ಅರ್ಹ ಫಲಾನುಭವಿಗಳು ಆನ್‍ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್ ನಲ್ಲಿ ಜೂ.30 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಪರಿಹಾರ ಧನವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ಜಿಲ್ಲಾ ಸಂಯೋಜಕ ಜಯರಾಮಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243