ದಿನದ ಸುದ್ದಿ
ನಿಗಮ – ಮಂಡಳಿಗೆ ನೂತನ ಅಧ್ಯಕ್ಷರುಗಳ ನೇಮಕ ; ಇಲ್ಲಿದೆ ಸಂಪೂರ್ಣ ವಿವರ
ಸುದ್ದಿದಿನ ಡೆಸ್ಕ್ : ರಾಜ್ಯ ಇಪ್ಪತ್ತೊಂದು ನಿಗಮ-ಮಂಡಳಿಗೆ ನೂತನ ಅಧ್ಯಕ್ಷರುಗಳನ್ನು ನೇಮಕಮಾಡಿ ಆದೇಶ ಹೊರಡಿಸಿದೆ. ಈ ಕೆಳಕಂಡಂತಿದೆ ಅಧ್ಯಕ್ಷರುಗಳ ಪಟ್ಟಿ.
1.ಅಲೆಮಾರಿ/ ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಯಾದಗಿರಿ ಜಿಲ್ಲೆಯ ದೇವೇಂದ್ರ ನಾಥ್ ಕೆ. ನಾದ್
2. ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ತುಮಕೂರು ಜಿಲ್ಲೆಯ ಚಂಗಾವರ ಮಾರಣ್ಣ
3.ಮೈಸೂರು ವಸ್ತ ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾಗಿ ಮೈಸೂರು ಜಿಲ್ಲೆಯ ಎಂ.ಕೆ. ಶ್ರೀನಿವಾಸ್
4.ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಅಧ್ಯಕ್ಷರಾಗಿ ಕೋಲಾರ ಜಿಲ್ಲೆಯ ಎಂ.ಕೆ. ವಾಸುದೇವ್
5.ದ್ರಾಕ್ಷಿ ಮತ್ತು ವೈನ್ ಬೋರ್ಡ್ ಅಧ್ಯಕ್ಷರಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಎನ್.ಎಂ. ರವಿನಾರಾಯಣ ರೆಡ್ಡಿ
6.ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷರಾಗಿ ಬೆಂಗಳೂರಿನ ಬಿ.ಸಿ. ನಾರಾಯಣಸ್ವಾಮಿ
7.ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ವಿಜಯಪುರ ಜಿಲ್ಲೆಯ ಚಂದ್ರಶೇಖರ ಕವಟಗಿ
8.ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಉಡುಪಿ ಜಿಲ್ಲೆಯ ಮಣಿರಾಜ ಶೆಟ್ಟಿ
9.ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷರಾಗಿ ಉತ್ತರ ಕನ್ನಡ ಜಿಲ್ಲೆಯ ಗೋವಿಂದ ಜಟ್ಟಪ್ಪ ನಾಯ್ಕ
10.ಮೈಸೂರು ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾಗಿ ಮೈಸೂರು ಜಿಲ್ಲೆಯ ಎಂ. ಶಿವಕುಮಾರ್
11.ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾಗಿ ಶಿವಮೊಗ್ಗ ಜಿಲ್ಲೆಯ ಎನ್. ರೇವಣಪ್ಪ ಕೋಳಗಿ
12.ರೇಷ್ಮೆ ಉದ್ಯಮಗಳ ನಿಗಮದ ಅಧ್ಯಕ್ಷರಾಗಿ ರಾಮನಗರ ಜಿಲ್ಲೆಯ ಗೌತಮ್ ಗೌಡ ಎಂ.
13.ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾಗಿ ಕೊಡಗು ಜಿಲ್ಲೆಯ ಎನ್.ಎಂ. ರವಿ ಕಾಳಪ್ಪ
14.ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ದಕ್ಷಿಣಕನ್ನಡ ಜಿಲ್ಲೆಯ ಎ.ವಿ. ತೀರ್ಥರಾಮ
15.ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಕೆ.ವಿ. ನಾಗರಾಜ
16.ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಬೆಳಗಾವಿ ಜಿಲ್ಲೆಯ ಮಾರುತಿ ಮಲ್ಲಪ್ಪ ಅಷ್ಟಗಿ
17.ಕಾಡಾ (ತುಂಗಭದ್ರಾ ಯೋಜನೆ) ಅಧ್ಯಕ್ಷರಾಗಿ ರಾಯಚೂರು ಜಿಲ್ಲೆಯ ಕೊಲ್ಲಾ ಶೇಷಗಿರಿ ರಾವ್
18.ಕಾಡಾ(ಕಾವೇರಿ ಜಲಾನಯನ ಯೋಜನೆ) ಅಧ್ಯಕ್ಷರಾಗಿ ಚಾಮರಾಜನಗರ ಜಿಲ್ಲೆಯ ಜಿ. ನಿಜಗುಣರಾಜು
19.ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರಾಗಿ ಬೆಳಗಾವಿ ಜಿಲ್ಲೆಯ ಮಲ್ಲಿಕಾರ್ಜುನ ಬಸವಣ್ಣಪ್ಪ ತುಬಾಕಿ
20.ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಬೆಂಗಳೂರಿನ ಎಂ. ಸರವಣ
21.ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಚಿಕ್ಕಮಗಳೂರು ಜಿಲ್ಲೆಯ ಕೆ.ಪಿ. ವೆಂಕಟೇಶ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


