ದಿನದ ಸುದ್ದಿ
ಕರ್ನಾಟಕ ರಾಜ್ಯ ಮಾಹಿತಿ ಆಯೋಗಕ್ಕೆ ಮೂವರು ಆಯುಕ್ತರ ನೇಮಕ
ಸುದ್ದಿದಿನ, ಬೆಂಗಳೂರು : ಕರ್ನಾಟಕ ರಾಜ್ಯ ಮಾಹಿತಿ ಆಯೋಗಕ್ಕೆ ಮೂವರು ಆಯುಕ್ತರನ್ನು ನೇಮಕ ಮಾಡಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದೇಶ ಹೊರಡಿಸಿದ್ದಾರೆ.
ರಾಜಭವನದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಇಂದು ನಡೆಯಲಿರುವ ಸಮಾರಂಭದಲ್ಲಿ ನೂತನ ಆಯುಕ್ತರಿಗೆ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.
ಸಾರಿಗೆ ಇಲಾಖೆ ನಿವೃತ್ತ ಅಧಿಕಾರಿ ಮೈಸೂರಿನ ಎಚ್.ಸಿ.ಸತ್ಯನ್ ಮತ್ತು ನಿವೃತ್ತ ಐಎಎಸ್ ಅಧಿಕಾರಿ ಎಸ್.ಬಿ. ಬೊಮ್ಮನಹಳ್ಳಿಯವರನ್ನು ಬೆಂಗಳೂರು ಕೇಂದ್ರ ಕಚೇರಿಯ ಮಾಹಿತಿ ಆಯುಕ್ತರನ್ನಾಗಿ ಹಾಗೂ ರವೀಂದ್ರ ಗುರುನಾಥ್ ಅವರನ್ನು ಕಲಬುರಗಿ ವಿಭಾಗದ ಮಾಹಿತಿ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243