ದಿನದ ಸುದ್ದಿ

ಹೆಚ್ ಎ ಎಲ್ ನಲ್ಲಿ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಹೆಚ್‍ಎಎಲ್ ಬೆಂಗಳೂರು ಇವರು ಐ.ಟಿ.ಐ. (ಫಿಟ್ಟರ್, ಟರ್ನರ್, ಮೆಷಿನಿಸ್ಟ್, ಎಲೆಕ್ಟ್ರೀಷಿಯನ್, ವೆಲ್ಟರ್, ಸಿಒಪಿಎ ಕಾರ್ಪೆಂಟರ್, ಫೌಂಡ್ರಿಮನ್ ಮತ್ತು ಶೀಟ್ ಮೆಟಲ್ ವರ್ಕರ್) ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಂದ ಅಪ್ರೆಂಟೀಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆಯನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ದಾವಣಗೆರೆಯಲ್ಲಿ ಪಡೆದುಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ಡಿ.07 ರಂದು ಸಂಜೆ 5 ಗಂಟೆಯೊಳಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಡಳಿತ ಭವನ, 1ನೇ ಮಹಡಿ, ಬಿ-ಬ್ಲಾಕ್, ಪಿ.ಬಿ. ರಸ್ತೆ, ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕು.

ಅಭ್ಯರ್ಥಿಗಳು apprenticeshipindia.org/candidate-registration ಈ ವೆಬ್‍ಸೈಟ್‍ನಲ್ಲಿ ನೋಂದಾಯಿಸಿ, ಕಡ್ಡಾಯವಾಗಿ ನೋಂದಣಿ ಸಂಖ್ಯೆಯನ್ನು ತರತಕ್ಕದ್ದು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾ ಆಡಳಿತ ಭವನ, ದಾವಣಗೆರೆ ದೂ.ಸಂ: 08192-259446 ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ರವೀಂದ್ರ.ಡಿ.ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : 14 ರಂದು ಕೊಂಡಜ್ಜಿ ಬಸಪ್ಪನವರ 38ನೇ ಪುಣ್ಯ ಸ್ಮರಣೆ

https://suddidina.com/daily-news/about-kondajji-basappa/

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version