ದಿನದ ಸುದ್ದಿ
ಅರ್ನಾಬ್ ಗೋಸ್ವಾಮಿಯನ್ನು ಜೈಲಿಗಟ್ಟಿ : ಕಾಂಗ್ರೆಸ್ ವಕ್ತಾರ ಪತ್ರೇಶ್ ಹಿರೇಮಠ್ ಒತ್ತಾಯ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/04/congress_Suddidina.jpg&description=ಅರ್ನಾಬ್ ಗೋಸ್ವಾಮಿಯನ್ನು ಜೈಲಿಗಟ್ಟಿ : ಕಾಂಗ್ರೆಸ್ ವಕ್ತಾರ ಪತ್ರೇಶ್ ಹಿರೇಮಠ್ ಒತ್ತಾಯ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/04/congress_Suddidina.jpg&description=ಅರ್ನಾಬ್ ಗೋಸ್ವಾಮಿಯನ್ನು ಜೈಲಿಗಟ್ಟಿ : ಕಾಂಗ್ರೆಸ್ ವಕ್ತಾರ ಪತ್ರೇಶ್ ಹಿರೇಮಠ್ ಒತ್ತಾಯ', 'pinterestShare', 'width=750,height=350'); return false;" title="Pin This Post">
ಸುದ್ದಿದಿನ,ಹಗರಿಬೊಮ್ಮನಹಳ್ಳಿ : ಕೋರೋನಾ ವೈರಸ್‍ಗಿಂತಲೂ ವೇಗವಾಗಿ ಕೋಮುವಾದ ಹರಡುವ ಪತ್ರಕರ್ತ ವೇಷಧಾರಿ ಮತೀಯವಾದಿ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿಯನ್ನು ಜೈಲಿಗಟ್ಟಬೇಕೆಂದು ಕೆಪಿಸಿಸಿ ಮಾಧ್ಯಮ ವಕ್ತಾರ ಪತ್ರೇಶ್ ಹಿರೇಮಠ್ ಒತ್ತಾಯಿಸಿದ್ದಾರೆ.
ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಹಾರಾಷ್ರದ ಫಾಲ್ಗರ್ ಸಾಧುಗಳ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಕೈವಾಡ ಇದೆ ಎಂದು ಸುಳ್ಳು ಸುದ್ದಿಯನ್ನು ತನ್ನ ವಾಹಿನಿಯಲ್ಲಿ ಪ್ರಸಾರ ಮಾಡುವ ಮೂಲಕ ಪತ್ರಕರ್ತರ ಘನತೆ ಮಾನ ಮರ್ಯಾದೆಯನ್ನು ಬೀದಿಯಲ್ಲಿ ಹರಾಜಿಗಿಟ್ಟ ಗೋಸ್ವಾಮಿ ಪತ್ರಕರ್ತರ ಹುದ್ದೆಗೆ ಕಪ್‍ಪುಚುಕ್ಕೆ ಎಂದರು
ಈ ಹಿಂದೆ ಉಗುಳುವ, ಕೆಮ್ಮುವ, ತಟ್ಟೆ ನೆಕ್ಕುವ, ಹಣ್ಣಿಗೆ ಎಂಜಲು ಸವರುವ ಹಳೆಯ ವೀಡಿಯೋಗಳನ್ನು ತಿರುಚಿ ಮುಸ್ಲಿಂರು ಕರೋನಾ ವೈರಸ್ ಹರಡುತ್ತಿದ್ದಾರೆ ಎಂದು ಸುದ್ದಿ ಪ್ರಸಾರ ಮಾಡಿ ಕ್ಷಮೆ ಕೋರಿ ಕೆಲವೇ ದಿನಗಳಲ್ಲಿ ಮತ್ತೆ ಸುಳ್ಳು ಸುದ್ದಿ ಪ್ರಸಾರ ಮಾಡಿ ಜನರಲ್ಲಿ ದ್ವೇಷ ಹಂಚುವ ಕುಕೃತ್ಯವನ್ನು ಅರ್ನಾಬ್ ತಮ್ಮ ಚಾನೆಲ್ ಮೂಲಕ ಮಾಡಿರುವುದು ಬಯಲಾಗುತ್ತಿದ್ದಂತೆ ಹೆದರಿ ಪೂರ್ವನಿಯೋಜಿತ ದಾಳಿ ಮಾಡಿಸಿಕೊಂಡಿದ್ದಾರೆ ಎಂದು ಪತ್ರೇಶ್ ಆರೋಪಿಸಿದರು
ಪತ್ರಕರ್ತರ ಕೆಲಸ ಜವಾಬ್ದಾರಿಯುತ ಪವಿತ್ರ ಕಾರ್ಯವಾಗಿದ್ದು ವಸ್ತುನಿಷ್ಠ ವರದಿ ಮೂಲಕ ದೇಶದ ಜನರ ಪರ ಬರೆಯುವ ಮೂಲಕ ಮಾಸರಿಯಾಗಿರಬೇಕಾದ ಅರ್ನಾಬ್ ಪಕ್ಷಪಾತಿಯಾಗಿ ವರ್ತಿಸುತ್ತಿರುವ ಈತನ ಹಾಗೂ ಚಾನೆಲ್ ವಿರುದ್ಧ ಕೋಮುದ್ವೇಷ ಹಾಗೂ ದೇಶದಲ್ಲಿ ಗಲಭೆ ಸೃಷ್ಟಿಸುವ ಪ್ರಕರಣ ದಾಖಲಿಸಿ ಬುದ್ಧಿ ಕಲಿಸಬೇಕೆಂದು ಪತ್ರೇಶ್ ಆಗ್ರಹಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ
ಸುದ್ದಿದಿನ,ಚಿಕ್ಕಮಗಳೂರು:ಜಿಲ್ಲೆಯ ಎನ್‌ಆರ್ ಪುರದಲ್ಲಿ ಇಂದುಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕಿಸುವ ನೂತನ ಭದ್ರಾ ಸೇತುವೆಯನ್ನು ಲೋಕಾರ್ಪಣೆಗೊಳಿಸಿ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ವಿತರಿಸಿದೆ.
ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಜೆ.ಜಾರ್ಜ್, ಶೃಂಗೇರಿ ಶಾಸಕರಾದ ಟಿ.ಡಿ.ರಾಜೇಗೌಡ, ಕಡೂರು ಶಾಸಕರಾದ ಆನಂದ್, ತರೀಕೆರೆ ಶಾಸಕರಾದ ಶ್ರೀನಿವಾಸ್, ಮಾಗಡಿ ಶಾಸಕ ಬಾಲಕೃಷ್ಣ ಸೇರಿ ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು, ಮುಖಂಡರು ಹಾಗೂ ಸಂಪಾದಕರಾದ ವಿಶ್ವೇಶ್ವರ ಭಟ್, ಕೆಎಸ್‌ಟಿಡಿಸಿ ಅಧ್ಯಕ್ಷರಾದ ಸರೋವರ್ ಶ್ರೀನಿವಾಸ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ
ಸುದ್ದಿದಿನಡೆಸ್ಕ್:ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಇಂದು ಅವರು ಮಾತನಾಡಿದರು.
ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು. ಕ್ಷುಲ್ಲಕ ವಿಚಾರವನ್ನು ದಿನವಿಡೀ ತೋರಿಸುವವರು ಅದರ ಪರಿಣಾಮದ ಬಗ್ಗೆಯೂ ಯೋಚಿಸಬೇಕು. ಗಂಡ ಹೆಂಡತಿ ಜಗಳವನ್ನು ಇಡೀ ದಿನ ತೋರಿಸಿದರೆ ಅದರಿಂದ ಸಮಾಜಕ್ಕೆ ಏನು ಪ್ರಯೋಜನ? ಎಂದು ಪ್ರಶ್ನಿಸಿದರು.
ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿ ಇಬ್ಬರೂ ಪತ್ರಕರ್ತರಾಗಿ ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸಮಾಜದಲ್ಲಿರುವ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜವನ್ನು ಕಟ್ಟುವ ಕಾಯಕವನ್ನು ಬಸವಾದಿ ಶರಣರು ಮಾಡಿದ್ದರು. ಶರಣರ ಆಶಯದ ಸಮಸಮಾಜ ಆಗದಿದ್ದರೆ ಅಸಮಾನತೆ ಮುಂದುವರೆಯುತ್ತದೆ. ಅದು ಮುಂದುವರೆಯಲಿ ಎನ್ನುವುದು ಪಟ್ಟಭದ್ರರ ಹಿತಾಸಕ್ತಿಯಾಗಿದೆ ಎಂದರು.
ಯಾವ ದೇವರೂ ಯಾರನ್ನೂ ಕೂಡ ಅವಿದ್ಯಾವಂತನಾಗು ಅಂತಾಗಲೀ, ಕೆಳ ಜಾತಿಯಲ್ಲೇ ಹುಟ್ಟು ಎಂದು ಬಯಸುವುದಿಲ್ಲ. ಈ ಅರಿವನ್ನು ಜನರಲ್ಲಿ ಹೆಚ್ಚಿಸುವ ಕೆಲಸ ಪತ್ರಕರ್ತರಿಂದ ಆಗಬೇಕು. ಪತ್ರಕರ್ತರು ಕೇವಲ ಮಾಹಿತಿ ಕೊಡುವವರಾಗದೆ, ಸಮಾಜ ಸುಧಾರಣೆಗೂ ಒತ್ತು ನೀಡಬೇಕು.
ಅಂಬೇಡ್ಕರ್ ಅವರ ಆಶಯದಂತೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ ಶಕ್ತಿ ಕೊಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ 2013 ರಲ್ಲೂ ಮಾಡಿತ್ತು. ಈಗಲೂ ಮುಂದುವರೆಸಿದೆ. ನಾವು ಬಡವರ ಪರವಾದ ಯೂನಿವರ್ಸಲ್ ಬೇಸಿಕ್ ಇನ್ ಕಂ ಆರ್ಥಿಕತೆಯನ್ನು ಪಾಲುಸುತ್ತಿದ್ದೇವೆ. ಇದನ್ನು ಪತ್ರಕರ್ತರು ಅರ್ಥ ಮಾಡಿಕೊಳ್ಳಬೇಕು.
ಕೆಲವು ಒಳ್ಳೆ ಪತ್ರಕರ್ತರೂ ಇದ್ದಾರೆ. ಆದರೆ ಬಹಳಷ್ಟು ಮಾಧ್ಯಮ ಸಂಸ್ಥೆಗಳು ಕಾರ್ಪೋರೇಟ್ ಹಿಡಿತಕ್ಕೆ ಒಳಪಟ್ಟಿವೆ. ಪತ್ರಕರ್ತರು ಸತ್ಯ ಬರೆದರೂ ಕೆಲವೊಮ್ಮೆ ಸಂಪಾದಕರುಗಳು ಮಾಲೀಕರ ಒತ್ತಡಕ್ಕೆ ಮಣಿದು ಬದಲಾಯಿಸಿ ಬಿಡುತ್ತಾರೆ. ನಾನು ಮಂತ್ರಿಯಾಗಿ 40 ವರ್ಷ ಆಯ್ತು. ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಎಂದು ಇವತ್ತಿನವರೆಗೂ ನಾನು ಯಾರನ್ನೂ ಕೇಳಿಲ್ಲ.
ಜನಸಾಮಾನ್ಯರು ಇನ್ನೂ ಪತ್ರಿಕೆಗಳ ಮೇಲೆ ನಂಬಿಕೆ ಇಟ್ಟಿದ್ದಾರೆ. ನಾನೂ ನಂಬಿಕೆ ಇಟ್ಟಿದ್ದೇನೆ.
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಸವಲತ್ತನ್ನು ಜಾರಿ ಮಾಡಿದ್ದೇ ನಾನು. ಇದರಲ್ಲಿನ ನಿಯಮಗಳಲ್ಲಿ ತೊಂದರೆ ಇದ್ದರೆ, ಆ ಬಗ್ಗೆ ಚರ್ಚಿಸಿ ನಿವಾರಣೆಗೊಳಿಸಲಾಗುವುದು ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.
ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಭಾಗವಾರು ಫಲಿತಾಂಶದ ವಿಶ್ಲೇಷಣೆ
ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗ (Commerce)
ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.
ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.
ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ6 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ4 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ6 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ5 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
-
ದಿನದ ಸುದ್ದಿ3 days agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
-
ದಿನದ ಸುದ್ದಿ5 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

